ರಾಜ್ಯಸಿಇಟಿ ಗೊಂದಲ ಪರಿಹಾರಕ್ಕೆ ಸಮಿತಿ ರಚಿಸಿದ ಸರ್ಕಾರ!
ಸಿಇಟಿ ಪರೀಕ್ಷೆಯಲ್ಲಿ ಭಾರೀ ಸಂಖ್ಯೆಯ ಪಠ್ಯೇತರ ಪ್ರಶ್ನೆಗಳನ್ನು ಕೇಳಿರುವುದರಿಂದ ಉಂಟಾಗಿರುವ ಗೊಂದಲ, ಆತಂಕ ನಿವಾರಣೆಗೆ ರಾಜ್ಯ ಸರ್ಕಾರ ಕೊನೆಗೂ ಮುಂದಾಗಿದ್ದು, ಯಾವ್ಯಾವ ವಿಷಯದಲ್ಲಿ ಎಷ್ಟೆಷ್ಟು ಪಠ್ಯೇತರ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ವಿಷಯವಾರು ಪ್ರತ್ಯೇಕ ತಜ್ಞರ ಸಮಿತಿ ರಚಿಸಿದೆ.