Chaitra Kundapura

ಇಬ್ರೂ ಕಳ್ಳರು ಒಟ್ಟಿಗೆ ಸೇರಿದ್ದಾರೆ: ಚೈತ್ರಾ- ಆಕೆಯ ಪತಿ ಬಗ್ಗೆ ಚೈತ್ರಾ ಕುಂದಾಪುರ ತಂದೆ ಹೇಳಿಕೆ!
ಆಕೆ ನನ್ನನ್ನು ಮದುವೆಗೆ ಕರೆದಿಲ್ಲ. ನಾನು ಮದುವೆಗೆ ಹೋಗಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ.

12 ವರ್ಷಗಳ ಪ್ರೀತಿಗೆ ಮದುವೆ ಬಂಧ: ದಾಂಪತ್ಯ ಜೀವನಕ್ಕೆ ಕಾಲಿಟ್ಟ Bigg Boss ಖ್ಯಾತಿಯ ಚೈತ್ರಾ ಕುಂದಾಪುರ!
ಕನ್ನಡದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಅವರು ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಮಲಶಿಲೆಯ ಬ್ರಾಹ್ಮೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಮದುವೆ ಕಾರ್ಯಕ್ರಮ ನೆರವೇರಿತು.

ಪ್ರಾಣಿದಯಾ ಸಂಘ ಈಗ ಎಲ್ಲಿದೆ? ನಾಯಿ, ಬೆಕ್ಕಿನ ಜೀವಕ್ಕೆ ಕೊಡೋ ಬೆಲೆ ಗೋಮಾತೆಗಿಲ್ವಾ?: BiggBoss ಖ್ಯಾತಿಯ ಚೈತ್ರಾ ಕುಂದಾಪುರ ಆಕ್ರೋಶ!
ಇಂದು ಹಸುಗಳ ಮೇಲೆ ನಡೆದಂತ ಕೌರ್ಯ, ನಾಳೆ ಮನುಷ್ಯರ ಮೇಲೂ ನಡೆಯಬಹುದು. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಕಠಿಣ ಕ್ರಮ ತೆಗೆದುಕೊಳ್ಳಬೇಕು.

ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡಬೇಕು, ಮುಂದೊಂದು ದಿನ ಈ ಪ್ರಕರಣ ಬಗ್ಗೆ ಮಾತನಾಡುತ್ತೇನೆ: ಅಭಿನವ ಹಾಲಶ್ರೀ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿದ ಹಿಂದೂಪರ ಕಾರ್ಯಕರ್ತೆ ಚೈತ್ರಾ ಗ್ಯಾಂಗ್ನಿಂದ ಉದ್ಯಮಿಗೆ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅಭಿನವ ಹಾಲಶ್ರೀ ಬಿಡುಗಡೆಯಾಗಿದ್ದಾರೆ.

ಬಿಜೆಪಿ ಟಿಕೆಟ್ ವಂಚನೆ ಹಗರಣ: ಚೈತ್ರಾ ಕುಂದಾಪುರ ಗ್ಯಾಂಗ್ ವಿರುದ್ದ ಪೊಲೀಸರಿಂದ 800 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಚೈತ್ರಾ ಕುಂದಾಪುರ ಗ್ಯಾಂಗ್ನಿಂದ ಉದ್ಯಮಿಗೆ ಕೋಟ್ಯಾಂತರ ರು. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳ ವಿರುದ್ಧ ಸಿಸಿಬಿ ಚಾರ್ಜ್ಶೀಟ್ ಸಲ್ಲಿಸಿದೆ. 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ. 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ.

ಬಿಜೆಪಿ ಟಿಕೆಟ್ ಹಗರಣ: ಚೈತ್ರಾ ಸುದ್ದಿ ಪ್ರಕಟಿಸುವಾಗ ಕುಂದಾಪುರ ಹೆಸರು ಬಳಕೆಗೆ ನ್ಯಾಯಾಲಯ ಮಧ್ಯಂತರ ನಿರ್ಬಂಧ
ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಹಿಂದೂಪರ ಸಂಘಟನೆಯ ಚೈತ್ರಾ ಅವರಿಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸಬಾರದು ಎಂದು ಮಾಧ್ಯಮಗಳಿಗೆ ನಿರ್ಬಂಧ ಹೇರಿ ಬೆಂಗಳೂರಿನ ಹೆಚ್ಚುವರಿ...

ಬಿಜೆಪಿ ಟಿಕೆಟ್ ಹಗರಣ: ಚೈತ್ರಾ ಕುಂದಾಪುರ ಸೇರಿದಂತೆ 7 ಆರೋಪಿಗಳಿಗೆ ಅಕ್ಟೋಬರ್ 6 ರವರೆಗೆ ನ್ಯಾಯಾಂಗ ಬಂಧನ!
ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಐದು ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಅಕ್ಟೋಬರ್ 6ರವರೆಗೆ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.

ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಎಫ್‌ಐಆರ್: ಉಡುಪಿಯ ಕೋಟ ಪೊಲೀಸ್ ಠಾಣೆಯಲ್ಲಿ ಕೇಸ್
ಉದ್ಯಮಿಗೆ ಬೈಂದೂರು ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಬಂಧನವಾಗಿರುವ ಹಿಂದು ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ಟಿಕೆಟ್ ವಂಚನೆ ಪ್ರಕರಣ: ಹಿಂದುತ್ವವಾದಿ ಚೈತ್ರಾ ಕುಂದಾಪುರ ಆಸ್ಪತ್ರೆಯಿಂದ ಬಿಡುಗಡೆ, ವಿಚಾರಣೆ ಆರಂಭ
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಅಸ್ವಸ್ಥರಾಗಿದ್ದ ಚೈತ್ರಾ ಕುಂದಾಪುರ ಅವರು ಚಿಕಿತ್ಸೆ ಪಡೆಯುತ್ತಿದ್ದ ವಿಕ್ಟೋರಿಯಾ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

