Chaluvarayaswamy

ಮುಂಗಾರು ಹಂಗಾಮಿನ ಬೆಳೆಹಾನಿ ಪರಿಹಾರ: ನಾಳೆ ಅಥವಾ ನಾಳಿದ್ದು ಮಾರ್ಗಸೂಚಿ ಬಿಡುಗಡೆ
ಮುಂಗಾರು ಹಂಗಾಮಿ ಭೆಳೆ ಹಾನಿ ಪರಿಹಾರ ಸಂಬಂಧಿಸಿದಂತೆ ನಾಳೆ ಅಥವಾ ನಾಳಿದ್ದು ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಪರಿಷತ್ತಿನಲ್ಲಿಂದು ಹೇಳಿದರು.

ನೀರಿನ ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ: ರೈತರಿಗೆ ಸಚಿವ ಚಲುವರಾಯಸ್ವಾಮಿ
ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ನೀರು ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ರೈತರಿಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಒತ್ತಾಯಿಸಿದ್ದಾರೆ.

ಒಬ್ಬ ರೈತನ ಸಾವನ್ನೂ ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ (ಸಂದರ್ಶನ)
ರಾಜ್ಯದ ಪ್ರಸ್ತುತದ ಪರಿಸ್ಥಿತಿ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ಸರ್ಕಾರ ಕೈಗೊಳ್ಳುತ್ತಿರುವ ನಿರ್ಧಾರಗಳ ಬಗ್ಗೆ ವಿವರಿಸಿದ್ದಾರೆ.

ಬಿಜೆಪಿ ಸಭೆಗೆ ಚಕ್ಕರ್; ಚಲುವರಾಯಸ್ವಾಮಿ ಭೇಟಿಗೆ ಹಾಜರ್: ಸೋಮಶೇಖರ್ ಹಾದಿಯಲ್ಲಿ ರೇಣುಕಾಚಾರ್ಯ?
ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸ್ವಪಕ್ಷದ ವಿರುದ್ಧ ಕಿಡಿಕಾರುತ್ತಿರುವ ಮಾಜಿ ಶಾಸಕ ರೇಣುಕಾಚಾರ್ಯ ಅವರು ಬೆಂಗಳೂರಿನಲ್ಲಿ ಇದ್ದರೂ ಸಹ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷದ ಸಭೆಗೆ ಗೈರು ಹಾಜರಿ ಆಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ರಾಜಕೀಯ ತೆವಲು ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಿ: ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಟಾಂಗ್
ಯಡಿಯೂರಪ್ಪ, ಕುಮಾರಸ್ವಾಮಿ, ಸಿದ್ದರಾಮಯ್ಯ ಎಲ್ಲರ ಕಾಲದಲ್ಲಿಯು ಮಳೆ, ಬರ ಎರಡು ಬಂದಿದೆ. ಮಳೆ ಅಧಿಕಾರದಲ್ಲಿ ಕೂತವರನ್ನು ನೋಡಿ ಬರಲ್ಲ, ರಾಜಕೀಯ ತೀಟೆ ಬಿಟ್ಟು, ವಾಸ್ತವವಾಗಿ ಜನರ ಸಮಸ್ಯೆಗೆ ಸ್ಪಂದಿಸಿ ಎಂದು ಕಿಡಿಕಾರಿದ್ದಾರೆ

ಮೈಸೂರು ಕೃಷಿ ಅಧಿಕಾರಿಗಳ ಬಂಧನ: ವರ್ಗಾವಣೆ ದಂಧೆ, ಮಂತ್ರಿಗಳಿಂದ ಸುಲಿಗೆ ಅಸಲಿ ಎನ್ನುವುದು ಸಾಬೀತು- ಕುಮಾರಸ್ವಾಮಿ
ಕೃಷಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರಿನ ಪತ್ರ ಬರೆದ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸಿಐಡಿ ವಶಕ್ಕೆ ಪಡೆಯುವ ಮೂಲಕ, ಈ ಸರ್ಕಾರದಲ್ಲಿ ವರ್ಗಾವಣೆ ದಂಧೆ ಹಾಗೂ ಮಂತ್ರಿಗಳಿಂದ ಅಧಿಕಾರಿಗಳ ಸುಲಿಗೆ ನಡೆಯುತ್ತಿದೆ ಎಂಬುದು ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

10-15 ಮಂದಿ ಹಾಲಿ-ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ: ಸಚಿವ ಚಲುವರಾಯಸ್ವಾಮಿ
10 ರಿಂದ 15 ಮಂದಿ ಮಾಜಿ ಹಾಗೂ ಹಾಲಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ದರಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಆಪರೇಷನ್ ಲೋಕಸಭೆ: ಯಾರೆಲ್ಲಾ ಕಾಂಗ್ರೆಸ್ ಗೆ ಬರ್ತಾರೋ ಅವರನ್ನೆಲ್ಲಾ ಸೇರಿಸಿಕೊಳ್ಳಿ- ಡಿ.ಕೆ ಶಿವಕುಮಾರ್
ರಾಜ್ಯ ರಾಜಕಾರಣದಲ್ಲಿ ಬಾಂಬೆ ಬಾಯ್ಸ್ ಘರ್‌ವಾಪ್ಸಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಆಪರೇಷನ್‌ಗೆ ಕಾಂಗ್ರೆಸ್ ಕೈ ಹಾಕಿದೆ ಎನ್ನುವ ಹೊತ್ತಲ್ಲೇ ಯಶವಂತಪುರದಲ್ಲಿ ಭಾರೀ ಬೆಳವಣಿಗೆ ನಡೆದಿದೆ.

ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ನೀವೇ ಇದರ ಸೃಷ್ಟಿಕರ್ತರೋ? ಅಥವಾ ನಿಮ್ಮ "ಬ್ರದರ್ರೋ"?
ಕೃಷಿ ಸಚಿವ ಚಲುವರಾಯ ಸ್ವಾಮಿ ವಿರುದ್ಧ ಕೇಳಿಬಂದಿರುವ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.

