Chamarajanagar

ಸಂಸದ ಶ್ರೀನಿವಾಸ ಪ್ರಸಾದ್ ನಿಧನ; ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಇಂದು ರಜೆ ಘೋಷಣೆ
ಸೋಮವಾರ ಮುಂಜಾನೆ ನಿಧನರಾದ ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ವಿ ಶ್ರೀನಿವಾಸ ಪ್ರಸಾದ್ ಅವರ ಗೌರವಾರ್ಥ ಕರ್ನಾಟಕ ಸರ್ಕಾರವು ಮಂಗಳವಾರ ರಾಜ್ಯದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಿಸಿದೆ.

ಚಾಮರಾಜನಗರ: ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಮರು ಮತದಾನ ಶಾಂತಿಯುತ
ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಹನೂರಿನ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆಗಳ ನಡುವೆ ಸೋಮವಾರ ಶಾಂತಿಯುತವಾಗಿ ಮರು ಮತದಾನ ನಡೆಯಿತು.

V. Srinivas Prasad: ಕೇಂದ್ರ ಮಾಜಿ ಸಚಿವ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನ
ಇತ್ತೀಚೆಗೆ ಬಹು ಅಂಗಾಂಗ ವೈಫಲ್ಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.

ಚಾಮರಾಜನಗರ: ಮತದಾನದ ವೇಳೆ ಗುಂಪು ಘರ್ಷಣೆ: ಮನವೊಲಿಸಲು ಯತ್ನಿಸಿದ ಅಧಿಕಾರಿಗಳ ಮೇಲೂ ಗ್ರಾಮಸ್ಥರ ದಾಳಿ, ಲಾಠಿ ಚಾರ್ಜ್!
ಮತದಾನ ಬಹಿಷ್ಕಾರ ಅಥವಾ ಮತದಾನ ಮಾಡಬೇಕೇ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಸಂಭವಿಸಿದ ಘರ್ಷಣೆ ಬಳಿಕ ಹಿಂಸಾಚಾರಕ್ಕೆ ತಿರುಗಿದ್ದು, ಗ್ರಾಮಸ್ಥರಮನವೊಲಿಸಲು ತೆರಳಿದ್ದ ಅಧಿಕಾರಿಗಳ ಮೇಲೆಯೇ ಜನ ದಾಳಿ ನಡೆಸಿ ಕಲ್ಲು ತೂರಾಟ ನಡೆಸಿದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ: ಶಾಸಕರ ಕಾರ್ಯವೈಖರಿಗೆ ಅಸಮಾಧಾನ; ಮೈಸೂರು-ಊಟಿ ಹೆದ್ದಾರಿ ಅಗಲೀಕರಣಕ್ಕೆ ಬೇಡಿಕೆ
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಉತ್ಸಾಹ, ನಿರೀಕ್ಷೆಯ ಕಾವು ಹೆಚ್ಚುತ್ತಿದೆ. ಇದರ ಜೊತೆಗೆ, ಇಲ್ಲಿನ ನಿವಾಸಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಡುತ್ತಿದ್ದಾರೆ. ಈ ಬೇಡಿಕೆಗಳ ಪೈಕಿ ಮೈಸೂರು-ಊಟಿ ಹೆದ್ದಾರಿ ಅಗಲೀಕರಣವೇ ಪ್ರಮುಖ ಸ್ಥಾನ ಪಡೆದುಕೊಂಡಿದೆ.

Elephant Attack: ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಬರುತ್ತಿದ್ದ ಭಕ್ತರ ಮೇಲೆ ಕಾಡಾನೆ ದಾಳಿ, ಮಹಿಳೆ ಸಾವು
ಮಹದೇಶ್ವರ ಸ್ವಾಮಿ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಬರುತ್ತಿದ್ದ ಭಕ್ತರ ಮೇಲೆ ಕಾಡಾನೆ ದಾಳಿ ಮಾಡಿದ್ದು, ದಾಳಿಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ವರದಿಯಾಗಿದೆ.

ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿಗೆ ಸಂಕಷ್ಟ: ವೈಯಕ್ತಿಕ ಮಾಹಿತಿ ಮುಚ್ಚಿಟ್ರಾ ಸುನೀಲ್ ಬೋಸ್? ನಾಮಪತ್ರ ತಿರಸ್ಕರಿಸುವಂತೆ ಬಿಜೆಪಿ ದೂರು!
ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸಮಾಜ ಕಲ್ಯಾಣ ಸಚಿವ ಎಚ್ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೊಸ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿದಿದ್ದಾರೆ.

ಚಾಮರಾಜನಗರ: ಜಲಾಶಯದಲ್ಲಿ ಮುಳುಗುತ್ತಿದ್ದ ತಾಯಿಯನ್ನು ರಕ್ಷಿಸಲು ಹೋದ ಮಕ್ಕಳಿಬ್ಬರು ಸೇರಿ ಮೂವರು ಜಲಸಮಾಧಿ
ಗೋಪಿನಾಥಂ ಜಲಾಶಯದಲ್ಲಿ ಬಟ್ಟೆ ತೊಳೆಯಲು ಹೋಗಿ ಮೂವರು ನೀರುಪಾಲಾದ ದಾರುಣ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಲೋಕಸಭೆ ಅಖಾಡದಲ್ಲಿ ಸುನೀಲ್ ಬೋಸ್: ಭಿನ್ನಮತದ ಕಾರ್ಮೋಡದ ನಡುವೆ ಚಾಮರಾಜನಗರದಲ್ಲಿ ಮಹಾದೇವಪ್ಪ 'ಸನ್ ರೈಸ್'!
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರವು ಚಾಮರಾಜನಗರ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುವುದರಿಂದ ಮುಂಬರುವ ಲೋಕಸಭೆ ಚುನಾವಣೆ ಎಲ್ಲಾ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠಿತ ಕಣವಾಗಿದೆ.

