Chamarajanagar

ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ, ಸರ್ಕಾರಕ್ಕೆ ಪಟ್ಟಿ ರವಾನೆ
ಸಾಂಕ್ರಾಮಿಕ ರೋಗ ಕೋವಿಡ್ ಉಲ್ಬಣಗೊಂಡ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ್ದ ಆಕ್ಸಿಜನ್ ದುರಂತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡುವ ಪ್ರಸ್ತಾವನೆ ಸರ್ಕಾರ ಮುಂದಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಶುಕ್ರವಾರ ಹೇಳಿದ್ದಾರೆ.

ಚಾಮರಾಜನಗರ: ಬಂಡೀಪುರ ಅರಣ್ಯ ರಸ್ತೆಯಲ್ಲಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಪಲ್ಟಿ; 24 ಮಂದಿಗೆ ಗಾಯ
ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ರಸ್ತೆಯಲ್ಲಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಪಲ್ಟಿ ಹೊಡೆದ ಪರಿಣಾಮ 24 ಜನರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ತಮಿಳುನಾಡಿನ ಊಟಿ ಗಿರಿಧಾಮದಿಂದ ಬರುತ್ತಿದ್ದ ಬಸ್ಸು ಕರ್ನಾಟಕದ ಮೈಸೂರಿಗೆ ತೆರಳುತ್ತಿತ್ತು.

ಚಾಮರಾಜನಗರ: ಗ್ರಾಮದಿಂದ ಸಾಮಾಜಿಕ ಬಹಿಷ್ಕಾರಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ, 17 ಮಂದಿ ವಿರುದ್ಧ ಪ್ರಕರಣ ದಾಖಲು
ತಮ್ಮ ಗ್ರಾಮದಿಂದ ಬಹಿಷ್ಕಾರದ ನಂತರ ಚಾಮರಾಜನಗರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ 17 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮೃತರನ್ನು ಶಿವರಾಜು (45) ಎಂದು ಗುರುತಿಸಲಾಗಿದ್ದು, ಶುಕ್ರವಾರ ಗುಂಡ್ಲುಪೇಟೆ ಪಟ್ಟಣದ ಯಡವನಹಳ್ಳಿಯಲ್ಲಿ ಘಟನೆ ನಡೆದಿದೆ.

ಮೈಸೂರು, ಚಾಮರಾಜನಗರದಲ್ಲಿ 830 ಕೋಟಿ ರೂ. ಹೂಡಿಕೆ; ಪಿಸಿಬಿ ಘಟಕ ಸ್ಥಾಪನೆಗೆ ಕ್ರಿಪ್ಟನ್ ಸಲ್ಯೂಷನ್ಸ್ ಒಲವು!
ಅಮೆರಿಕದ ಡಲ್ಲಾಸ್ ನಗರದಲ್ಲಿರುವ ಏರೋಸ್ಪೇಸ್, ಸೆಮಿಕಂಡಕ್ಟರ್, ಟೆಲಿಕಮ್ಯುನಿಕೇಶನ್ಸ್ ಮತ್ತು ಡಿಫೆನ್ಸ್ ಸಂಸ್ಥಯಾದ ಕ್ರಿಪ್ಟನ್ ಸಲ್ಯೂಷನ್ಸ್ ಸಂಸ್ಥೆಯು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸುಮಾರು 100 ಮಿಲಿಯನ್ ಡಾಲರ್ (832 ಕೋಟಿ ರೂ.) ಬಂಡವಾಳ ಹೂಡಲು ಆಸಕ್ತಿ ವ್ಯಕ್ತಪಡಿಸಿದೆ.

ಚಾಮರಾಜನಗರದ ಎಲ್ಲಾ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಸರ್ಕಾರಕ್ಕೆ ರೈತರ ಆಗ್ರಹ
ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಬರ ಇದೆ. ಆದರೆ, ಸರ್ಕಾರ 3 ತಾಲ್ಲೂಕುಗಳಲ್ಲಿ ಸಾಧಾರಣ ಬರ ಎಂದು ಘೋಷಿಸಿದೆ. ಸಮಗ್ರ ಮಾಹಿತಿ ನೀಡಲು ಅಧಿಕಾರಿಗಳು ವಿಫಲವಾಗಿದ್ದು, ಸರ್ಕಾರ ಇಡೀ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕು’ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಆಗ್ರಹಿಸಿದೆ.

ಗುಂಡ್ಲುಪೇಟೆ: ಮಹಿಳೆ, ಇಬ್ಬರು ಮಕ್ಕಳು ಅನುಮಾನಾಸ್ಪದ ಸಾವು; ಪತಿಯಿಂದ ಕೊಲೆ ಶಂಕೆ, ಸ್ಥಳದಿಂದ ಪರಾರಿ!
ಕೌಟುಂಬಿಕ ಕಲಹದ ಹಿನ್ನಲೆ ಇಬ್ಬರು ಪುಟ್ಟ ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಹೊರ ವಲಯದಲ್ಲಿ ತಡರಾತ್ರಿ ನಡೆದಿದೆ.

ಚಾಮರಾಜನಗರ: ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ, ಇಬ್ಬರು ಸಾವು
ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡಾಲ್ ಬಳಿ ಶನಿವಾರ ನಡೆದಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಾಮರಾಜನಗರ: ಆನೆ ದಾಳಿಗೆ ಓರ್ವ ಬಲಿ, ಮತ್ತೋರ್ವನಿಗೆ ಗಾಯ
ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮತ್ತೊಂದು ಆನೆ ದಾಳಿ ಪ್ರಕರಣ ವರದಿಯಾಗಿದ್ದು, ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

ಚಾಮರಾಜನಗರ: ಮುತ್ತಯ್ಯ ಮುರಳೀಧರನ್ ಮಾಲೀಕತ್ವದಲ್ಲಿ ಪಾನೀಯ ಉತ್ಪಾದನಾ ಘಟಕ ಸ್ಥಾಪನೆ!
ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರು ಚಾಮರಾಜನಗರದಲ್ಲಿ ಪ್ರಮುಖ ಉದ್ಯಮವನ್ನು ಸ್ಥಾಪಿಸುವ ಮೂಲಕ ಕೈಗಾರಿಕೋದ್ಯಮಿಯಾಗಲಿದ್ದಾರೆ. ಇವರು 46 ಎಕರೆ ಭೂಮಿಯಲ್ಲಿ ಪಾನೀಯ ಉತ್ಪಾದನಾ ಘಟಕ ನಿರ್ಮಿಸುವ ಗುರಿ ಹೊಂದಿದ್ದಾರೆ. ಆ ಮೂಲಕ ಮೊದಲ ಹಂತದಲ್ಲಿ 800 ಕ್ಕೂ ಹೆಚ್ಚು ವ್ಯಕ್ತಿಗಳಿಗೆ ಉದ್ಯೋಗವಕಾಶವನ್ನು ಕಲ್ಪಿಸುತ್ತಿದ್ದಾರೆ.

