Chamarajanagara

ಚಾಮರಾಜನಗರಕ್ಕೆ ಬರುವುದರಿಂದ ನನಗೆ ಅಧಿಕಾರ ಮತ್ತಷ್ಟು ಗಟ್ಟಿಯಾಗ್ತಿದೆ, ವಿನಯ್ ಕುಲಕರ್ಣಿ ಮನೆ ಮೇಲೆ ಇಡಿ ದಾಳಿ ದ್ವೇಷದ ರಾಜಕಾರಣ: ಸಿದ್ದರಾಮಯ್ಯ
ಚಾಮರಾಜನಗರ ಜಿಲ್ಲೆ ಬಹಳ ಹಿಂದುಳಿದ ಜಿಲ್ಲೆ, ಅದಕ್ಕೆ ವಿಶೇಷ ಗಮನ ನೀಡಬೇಕೆಂಬುದು ನಮ್ಮ ಆದ್ಯತೆಯಾಗಿದೆ ಎಂದರು.

ಚಾಮರಾಜನಗರದಲ್ಲಿ ಜನವರಿ ತಿಂಗಳಲ್ಲಿ ವಿಶೇಷ ಸಂಪುಟ ಸಭೆ: ಅಧಿಕ ಅನುದಾನ ನಿರೀಕ್ಷೆ
ಕೆಡಿಪಿ ಸಭೆ ನಡೆಸಿ ಜಿಲ್ಲೆಯ ಸಮಸ್ಯೆಗಳ ಪಟ್ಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಸಿಎಂ ಸಿದ್ದರಾಮಯ್ಯ ಸಂಪುಟ ಸಭೆ ನಡೆಸುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಉದ್ಯೋಗ ನೀಡಿ: ಜಿಲ್ಲಾಧಿಕಾರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಯಾರೂ ದಯಾಮರಣ ಕೇಳಬಾರದು. ಆಕ್ಸಿಜನ್ ದುರಂತದ ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸುವಂತೆ ಮತ್ತು ಉದ್ಯೋಗ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಫಲಶ್ರುತಿ: ಕೊನೆಗೂ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂತು ಆಂಬ್ಯುಲೆನ್ಸ್!
ಚಾಮರಾಜನಗರ ಜಿಲ್ಲೆಯ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರದ (ಪಿಎಚ್‌ಸಿ) ಆಂಬ್ಯುಲೆನ್ಸ್ ಸೇವೆ ಸ್ಥಗಿತಗೊಂಡಿದ್ದು, ಗ್ರಾಮಸ್ಥರು ಪರದಾಡುವಂತಾಗಿತ್ತು. ಈ ಬಿಕ್ಕಟ್ಟಿನ ಕುರಿತು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದ ಒಂದು ದಿನದ ನಂತರ, ಜಿಲ್ಲೆಯ ಗಡಿಯಲ್ಲಿರುವ ದೂರದ ಹಳ್ಳಿಗಳು ಎದುರಿಸುತ್ತಿದ್ದ ಸವಾಲನ್ನು ಪರಿಹರಿಸಲು ಕೊನೆಗೂ ಆಂಬ್ಯುಲೆನ್ಸ್ ಅನ್ನು ಒದಗಿಸಲಾಗಿದೆ.

ಚಾಮರಾಜನಗರ: ರೈತನ ಮೇಲೆ ಹುಲಿ ದಾಳಿ
ಚಾಮರಾಜನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ರೈತನ ಮೇಲೆ ಹುಲಿ ದಾಳಿ ನಡೆಸಿದ್ದು, ಘಟನೆಯಲ್ಲಿ 22 ವರ್ಷದ ಯುವಕ ಗಾಯಗೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಶನಿವಾರ ತಿಳಿಸಿದೆ.

ಮೈಸೂರು-ಕೊಡಗು, ಚಾಮರಾಜನಗರ ಕ್ಷೇತ್ರಗಳನ್ನು ಶತಾಯಗತಾಯ ಗೆಲ್ಲಲೇಬೇಕಾದ ಸವಾಲು: ಇಂದಿನಿಂದ 3 ದಿನ ಸಿಎಂ ಸಿದ್ದರಾಮಯ್ಯ ಪ್ರವಾಸ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಜಿಲ್ಲೆಯಾದ ಮೈಸೂರು-ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳೆರಡೂ ಗೆಲ್ಲುವುದು ಪ್ರತಿಷ್ಠೆಯ ವಿಷಯವಾಗಿದ್ದು, ಪಕ್ಷದ ಅಭ್ಯರ್ಥಿಗಳ ಗೆಲುವಿನ ಜವಾಬ್ದಾರಿಯನ್ನು ಸ್ಥಳೀಯ ಶಾಸಕರು ಮತ್ತು ಮುಖಂಡರಿಗೆ ವಹಿಸಿದ್ದಾರೆ.

ʻಕರಿಮಣಿ ಮಾಲೀಕ ನೀನಲ್ಲʼ ಎಂದು ರೀಲ್ಸ್ ಮಾಡಿದ ಪತ್ನಿ; ಮನನೊಂದು ಪತಿ ಆತ್ಮಹತ್ಯೆಗೆ ಶರಣು
ಪಿ.ಜಿ.ಪಾಳ್ಯ ಗ್ರಾಮದ ಕುಮಾರ್ ಅವರು ಇಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರ ಗೆಲ್ಲುವ ಗುರಿ: ಪ್ರಬಲರನ್ನು ಕಣಕ್ಕಿಳಿಸುವ ಸಿಎಂ ಸಿದ್ದರಾಮಯ್ಯ ಉತ್ಸುಕ!
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ ಸೀಟು ಹಂಚಿಕೆಯ ಮಾತುಕತೆ ಆರಂಭವಾಗಲಿದ್ದು, ಆಡಳಿತಾರೂಢ ಕಾಂಗ್ರೆಸ್‌ಗೆ ಸೆಡ್ಡುಹೊಡೆಯಲು ಹಲವು ತಂತ್ರಗಳನ್ನು ಹೆಣೆಯುತ್ತಿದೆ. ಇನ್ನೊಂದೆಡೆ ಆಡಳಿತಾರೂಢ ಕಾಂಗ್ರೆಸ್ ಕೂಡ ಹಿಂದೆಬಿದ್ದಿಲ್ಲ.

14 ವರ್ಷಗಳ ನಂತರ ಚಾಮರಾಜನಗರ ಜಿಲ್ಲೆಯ ಬುಡಕಟ್ಟು ಜನರಿಗೆ ಆಧಾರ್ ಕಾರ್ಡು ಪಡೆಯುವ ಯೋಗ!
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಆರಂಭಗೊಂಡು 14 ವರ್ಷಗಳಾಗಿವೆ. ಹದಿನಾಲ್ಕು ವರ್ಷಗಳ ನಂತರ ಚಾಮರಾಜನಗರ ಜಿಲ್ಲೆಯ ಹಿಂದುಳಿದ ಪ್ರದೇಶಗಳಲ್ಲಿ ವಾಸಿಸುವ ಆದಿವಾಸಿಗಳು ತಮ್ಮ ಆಧಾರ್ ಕಾರ್ಡ್‌ಗಳನ್ನು ಪಡೆಯುವ ಭಾಗ್ಯ ಪಡೆದಿದ್ದಾರೆ.

