ರಾಜ್ಯ'ಚಾಣಕ್ಯ ವಿಶ್ವವಿದ್ಯಾಲಯ ಮಸೂದೆ-2021' ಬಹುದೊಡ್ಡ ಹಗರಣ: ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ
ರಾಜ್ಯದ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಚಾಣಕ್ಯ ಖಾಸಗಿ ವಿಶ್ವವಿದ್ಯಾಲಯ ಮಸೂದೆ 2021ನ್ನು ವಿರೋಧಿಸುತ್ತಿದೆ. ಶಿಕ್ಷಣ ಮತ್ತು ಸಾಮಾಜಿಕ ಅಧ್ಯಯನ ಕೇಂದ್ರದ ಸದಸ್ಯರೆಲ್ಲರೂ ಆರ್ ಎಸ್ ಎಸ್ ಸದಸ್ಯರಾಗಿದ್ದಾರೆ. ಈ ಶಿಕ್ಷಣ ಸಂಸ್ಥೆಯಿಂದ ಸಮಾಜದ ಬಹುತೇಕ ವರ್ಗದ ಜನರಿಗೆ ಪ್ರಯೋಜನವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.