ದೇಶದೆಹಲಿ: ಚಾಂದಿನಿ ಚೌಕ್ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ, ಕಟ್ಟಡದ ಒಂದು ಭಾಗ ಕುಸಿತ
ಮಧ್ಯ ದೆಹಲಿಯ ಅತ್ಯಂತ ಜನನಿಬಿಡ ಮತ್ತು ದಟ್ಟಣೆಯ ಮಾರುಕಟ್ಟೆ ಚಾಂದಿನಿ ಚೌಕ್ನ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದ ಮೇಲಿನ ಮಹಡಿಯಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ನಂತರ ಕಟ್ಟಡದ ಒಂದು ಭಾಗ ಕುಸಿದಿದೆ.