ರಾಜ್ಯಹುಬ್ಬಳ್ಳಿಯಲ್ಲಿ ಇಂದು ಮಧ್ಯಾಹ್ನ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ, ಸಾರ್ವಜನಿಕ ದರ್ಶನಕ್ಕೆ ಅವಕಾಶ
ಆಪ್ತ ಶಿಷ್ಯರಿಂದಲೇ ನಿನ್ನೆ ಮಂಗಳವಾರ ಮಧ್ಯಾಹ್ನ ಹುಬ್ಬಳ್ಳಿಯ ಹೊಟೇಲ್ ನಲ್ಲಿ ಭೀಕರವಾಗಿ ಹತ್ಯೆಗೀಡಾಗಿರುವ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರ ಅಂತ್ಯಕ್ರಿಯೆ ಹುಬ್ಬಳ್ಳಿಯ ಅವರ ಜಮೀನಿನಲ್ಲಿ ಇಂದು ಬುಧವಾರ ಮಧ್ಯಾಹ್ನ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಲಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.