Chandrayaan-3

ಕಕ್ಷೆ ಬದಲಿಸುವ 4ನೇ ಪ್ರಕ್ರಿಯೆಯಲ್ಲಿ ಚಂದ್ರಯಾನ-3 ಯಶಸ್ವಿ
ಭಾರತದ ಬಹು ನಿರೀಕ್ಷಿತ ಮಿಷನ್ ಚಂದ್ರಯಾನ-3ರ ಕಕ್ಷೆ ಬದಲಾಯಿಸುವ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಚಂದ್ರಯಾನ-3 ಬಗ್ಗೆ ಕನ್ನಡ ಉಪನ್ಯಾಸಕ ಅಪಹಾಸ್ಯ; ಸ್ಪಷ್ಟನೆ ಕೋರಿ ಮಧು ಬಂಗಾರಪ್ಪಗೆ ಬಿಜೆಪಿ ಶಾಸಕ ಪತ್ರ
ಬಿಜೆಪಿ ನಾಯಕ ಎಸ್ ಸುರೇಶ್ ಕುಮಾರ್ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದು, ಇಸ್ರೋದ ಚಂದ್ರಯಾನ-3 ಮಿಷನ್ ಅನ್ನು ಅಪಹಾಸ್ಯ ಮಾಡಿದ ಆರೋಪದ ಮೇಲೆ ಕನ್ನಡ ಉಪನ್ಯಾಸಕರು ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಚಂದ್ರಯಾನ-3 ಯಶಸ್ವಿ ಉಡಾವಣೆ: ಕ್ಯಾಮೆರಾ ವಿನ್ಯಾಸಕ ಅನುಜ್ ನಂದಿ ಕುಟುಂಬದಲ್ಲಿ ಕಳೆಕಟ್ಟಿದ ಸಂಭ್ರಮ!
ಚಂದ್ರಯಾನ 3ರ ಕ್ಯಾಮೆರಾವನ್ನು ವಿನ್ಯಾಸಗೊಳಿಸಿದ ಇಸ್ರೋ ವಿಜ್ಞಾನಿ ಅನುಜ್ ನಂದಿ ಅವರ ಕುಟುಂಬ ಸದಸ್ಯರು ಯಶಸ್ವಿ ಉಡಾವಣೆಯ ನಂತರವೂ ತಮ್ಮ ನೆರಹೊರೆಯವರೊಂದಿಗೆ ಖುಷಿಯನ್ನು ಹಂಚಿಕೊಳ್ಳುತ್ತಿದ್ದಾರೆ.

ಚಂದ್ರಯಾನ-3 ಉಡ್ಡಯನ ಯಶಸ್ವಿ: ಭಾರತಕ್ಕೆ ಹೆಮ್ಮೆಯ ಕ್ಷಣ; ಸಿಎಂ ಸಿದ್ದರಾಮಯ್ಯ ಮೆಚ್ಚುಗೆ
ಚಂದ್ರಯಾನ-3 ಮಿಷನ್‌ನ ಯಶಸ್ವಿ ಉಡಾವಣೆ ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ಚಂದ್ರಯಾನ-3 ಭಾರತದ ಬಾಹ್ಯಾಕಾಶ ಚರಿತ್ರೆಯಲ್ಲಿ ಹೊಸ ಅಧ್ಯಾಯ ಬರೆದಿದೆ: ಪ್ರಧಾನಿ ಮೋದಿ
ಐತಿಹಾಸಿಕ ಚಂದ್ರಯಾನ-3 ಉಡಾವಣೆ ಯಶಸ್ವಿಗೊಳಿಸಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ವಿಜ್ಞಾನಿಗಳ ಪರಿಶ್ರಮ ಮತ್ತು ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ರಾಕೆಟ್ ರಿತು: ಇಸ್ರೋದ ಐತಿಹಾಸಿಕ ಚಂದ್ರಯಾನ-3 ಯೋಜನೆಗೆ ಮಹಿಳಾ ವಿಜ್ಞಾನಿ ಸಾರಥ್ಯ
ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಯಾಗಿದ್ದು, ಮಹಿಳೆಯೊಬ್ಬರು ಈ ಮಿಷನ್ ನ ಸಾರಥ್ಯ ವಹಿಸಿದ್ದಾರೆ.

ಚಂದ್ರಯಾನ-3 ಉಡಾವಣೆಗೆ ಇಸ್ರೋ ಸಜ್ಜು: ಪ್ರತಿಕೃತಿ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ವಿಜ್ಞಾನಿಗಳ ತಂಡ!
ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನವು ತನ್ನ ಮೂರನೇ ದಂಡಯಾತ್ರೆಯಲ್ಲಿ ಚಂದ್ರನ ಕಡೆಗೆ ಹಾರಲು ಸಿದ್ಧವಾಗಿದ್ದು, ಈ ಮಧ್ಯೆ ಚಂದ್ರಯಾನ-3 ಉಪಗ್ರಹ ನೌಕೆಯ ಪ್ರತಿಕೃತಿ ಜೊತೆ ಇಸ್ರೋ ವಿಜ್ಞಾನಿಗಳು ಹಾಗೂ ಸಿಬ್ಬಂದಿಗಳ ತಂಡ ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದೆ.

ಇಸ್ರೋದ ಚಂದ್ರಯಾನ-3ಗೆ ಎಲ್ ಅಂಡ್ ಟಿ ಸಾಥ್; ಭಾರತದ ಅತಿದೊಡ್ಡ ನಿರ್ಮಾಣ ಸಂಸ್ಥೆ ಮಾಡಿದ್ದೇನು? ಅಂತಿಮ ಸಿದ್ಧತೆ ಹೇಗಿದೆ ಗೊತ್ತಾ?
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ತನ್ನ ಮೂರನೇ ಚಂದ್ರಯಾನ ಯೋಜನೆ ಚಂದ್ರಯಾನ-3 ಸಕಲ ರೀತಿಯಲ್ಲೂ ಅಂತಿಮ ಸಿದ್ದತೆ ನಡೆಸಿದ್ದು, ಇಸ್ರೋದ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಭಾರತದ ಅತಿದೊಡ್ಡ ನಿರ್ಮಾಣ ಸಂಸ್ಥೆ ಎಲ್ ಅಂಡ್ ಟಿ ಕೂಡ ಕೈ ಜೋಡಿಸಿದೆ.

ಜುಲೈ 14 ರಂದು ಮಧ್ಯಾಹ್ನ 2.35ಕ್ಕೆ ಭಾರತದ ಚಂದ್ರಯಾನ-3 ಉಡಾವಣೆ
ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಮೂರನೇ ಪ್ರಯತ್ನ ಅಂತಿಮ ಘಟ್ಟ ತಲುಪಿದ್ದು, ಜುಲೈ 14 ರಂದು ಮಧ್ಯಾಹ್ನ 2.35ಕ್ಕೆ ಶ್ರೀಹರಿಕೋಟಾದಿಂದ ಉಡಾವಣೆಯಾಗಲಿದೆ.

