ರಾಜ್ಯಪಿಎಸ್ಐ ಪರಶುರಾಮ್ ಸಾವು ಪ್ರಕರಣ: ಶಾಸಕ ಚನ್ನಾರೆಡ್ಡಿ ಪಾಟೀಲ್, ಪುತ್ರ ಪಂಪನಗೌಡ ವಿರುದ್ಧ FIR
ಶಾಸಕ ಪಾಟೀಲ್ ನಂಬರ್ 1 ಮತ್ತು ಅವರ ಪುತ್ರ ಎರಡನೇ ಆರೋಪಿಯಾಗಿದ್ದಾರೆ. ಪರುಶರಾಮ್ ಅವರ ಪತ್ನಿ ಎನ್. ವಿ. ಶ್ವೇತಾ ದಾಖಲಿಸಿರುವ ದೂರಿನ ಮೇರೆಗೆ ಶಾಸಕ ಮತ್ತು ಅವರ ಪುತ್ರನ ವಿರುದ್ಧ ಶಾಂತಿ ಕದಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನ, ಆತ್ಮಹತ್ಯೆಗೆ ಪ್ರಚೋದನೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.