Cheating

ಬೆಂಗಳೂರು: ಕಾಸ್ಮೆಟಿಕ್ ಚಿಕಿತ್ಸೆಗೆ ಬಂದ ಮಹಿಳೆ; ಐಷಾರಾಮಿ ಕಾರು ಕೊಡಿಸೋದಾಗಿ ವೈದ್ಯ ದಂಪತಿಗೆ 6.20 ಕೋಟಿ ವಂಚನೆ!
ಕಾಸ್ಮೆಟಿಕ್ಸ್ ಚಿಕಿತ್ಸೆಗೆ ಬಂದ ಮಹಿಳೆಯೊಬ್ಬಳು ಖಾಸಗಿ ಆಸ್ಪತ್ರೆಯ ವೈದ್ಯ ದಂಪತಿ ಸೆಕೆಂಡ್ ಹ್ಯಾಂಡ್ ಐಷಾರಾಮಿ ಕಾರು ಕೊಡಿಸುವುದಾಗಿ ಭರವಸೆ ನೀಡಿ 6 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕೊಡಗು: ಸುದ್ದಿ ನಿರೂಪಕಿ ಕೆಲಸ ಕೊಡಿಸುವುದಾಗಿ ಹೇಳಿ ನರ್ಸ್'ಗೆ ವಂಚನೆ, ಹಲ್ಲೆ!
ಸುದ್ದಿ ನಿರೂಪಕಿ ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆಯಿಂದ ಚಿನ್ನಾಭರಣಗಳನ್ನು ಪಡೆದಿದ್ದ ಪತ್ರಕರ್ತನೊಬ್ಬ ನಂತರ ಆಕೆಗೆ ವಂಚಿಸಿ, ಹಲ್ಲೆ ನಡೆಸಿರುವ ಘಟನೆಯೊಂದು ಗೋಣಿಕೊಪ್ಪಲುವಿನಲ್ಲಿ ನಡೆದಿದೆ.

36 ಸರ್ಕಾರಿ ಅಧಿಕಾರಿಗಳಿಗೆ ವಂಚಿಸಿದ ನಕಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಬಂಧನ
ಸರ್ಕಾರಿ ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಕೇಂದ್ರ ಅಪರಾಧ ವಿಭಾಗದ (CCB) ಪೊಲೀಸರು ನಕಲಿ ಲೋಕಾಯುಕ್ತ ಅಧಿಕಾರಿಯನ್ನು ಬಂಧಿಸಿದ್ದಾರೆ. ಆರೋಪಿ ಶ್ರೀನಾಥ್ ರೆಡ್ಡಿ (34ವ) ಆಂಧ್ರಪ್ರದೇಶ ಮೂಲದವನಾಗಿದ್ದು, 2007ರಿಂದ ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದನು.

ಕಂಪನಿಯ 1 ಕೋಟಿ ರುಪಾಯಿ ಲಪಟಾಯಿಸಿ ವಂಚನೆ: ಇಂಜಿನಿಯರಿಂಗ್ ಪದವೀಧರ ಬಂಧನ
ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ಮತ್ತು ಸಚಿವರ ಆಪ್ತ ಸಹಾಯಕನ ಸೋಗಿನಲ್ಲಿ ಸ್ಟಾರ್ಟ್‌ಅಪ್ ಹೂಡಿಕೆದಾರರಿಗೆ ಹಾಗೂ ನಂದಿನಿ ಲೇಔಟ್‌ನ ಸಾಫ್ಟ್‌ವೇರ್ ಕಂಪನಿಯೊಂದರ ಪಾಲುದಾರನಿಗೆ ವಂಚಿಸಿದ್ದೆ ಇಂಜಿನಿಯರಿಂಗ್ ಪದವೀಧರನೊಬ್ಬನನ್ನು ಮಹಾಲಕ್ಷ್ಮೀಪುರಂ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಸ್ರೋ ವಿಜ್ಞಾನಿಗೆ ವಂಚನೆ: ಇಬ್ಬರು ಯುವಕರ ಜಾಮೀನು ಅರ್ಜಿ ವಜಾ
ಅನ್ನದಾಸೋಹಕ್ಕೆ (ಲಂಗರ್) ದೇಣಿಗೆ ನೀಡುವ ನೆಪದಲ್ಲಿ ಬೆಂಗಳೂರಿನಲ್ಲಿ ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದ ವಿಜ್ಞಾನಿಯೊಬ್ಬರಿಗೆ ವಂಚಿಸಿದ ಆರೋಪದ ಮೇಲೆ ದೆಹಲಿ ಮೂಲದ ಇಬ್ಬರು ಯುವಕರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಿಟಿ ಕೋರ್ಟ್ ತಿರಸ್ಕರಿಸಿದೆ.

ತುಮಕೂರು: ಯುವತಿಯಂತೆ ನಟಿಸಿ ವಿದ್ಯಾರ್ಥಿಗೆ ಲಕ್ಷಾಂತರ ರು. ವಂಚಿಸಿದ್ದ ಯುವಕನ ಬಂಧನ
ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಹುದ್ದೆಗಾಗಿ ಸತ್ಯಾಂಶಗಳ ಮುಚ್ಚಿಡುವುದೂ ವಂಚನೆ: ಹೈಕೋರ್ಟ್
ಭದ್ರತೆಯಿರುವ ಉದ್ಯೋಗ ಮೌಲ್ಯಯುತವಾದ ಆಸ್ತಿಗೆ ಸಮಾನವಾದದ್ದು ಎಂದಿರುವ ಹೈಕೋರ್ಟ್, ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಮರೆ ಮಾಚಿದ ಆರೋಪ ಎದುರಿಸುತ್ತಿದ್ದ ವಕೀಲರೊಬ್ಬರ ವಿರುದ್ಧದ ಆರೋಪ ಪಟ್ಟಿ ರದ್ದು ಪಡಿಸಲು ನಿರಾಕರಿಸಿದೆ.

ಬೆಂಗಳೂರು: ಸ್ಟಾರ್ಟಪ್ ಸಂಸ್ಥಾಪಕನಿಂದ ಮಹಿಳಾ ಉದ್ಯಮಿಗೆ 1.2 ಕೋಟಿ ರೂ. ವಂಚನೆ
ಮೇಕ್ ಇನ್ ಇಂಡಿಯಾ ಯೋಜನೆಯಡಿ ವ್ಯಕ್ತಿಯೊಬ್ಬ ತನಗೆ ಸುಮಾರು 1.2 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು 47 ವರ್ಷದ ಮಹಿಳಾ ಉದ್ಯಮಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

ಬೆಂಗಳೂರು: ಬಿಬಿಎಂಪಿಯಲ್ಲಿ ಮಾರ್ಷಲ್ ನೌಕರಿ ಕೊಡಿಸುವುದಾಗಿ 200 ಮಂದಿಗೆ ವಂಚಿಸಿದ್ದ ಆರೋಪಿ ಬಂಧನ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಮಾರ್ಷಲ್ ನೌಕರಿಯನ್ನು ಕೊಡಿಸುವುದಾಗಿ ನಂಬಿಸಿ 200ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಲಸೂರುಗೇಟ್ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

