Cheating

ಬೆಂಗಳೂರು: ಕುರುಹಿನಶೆಟ್ಟಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್ ಕರ್ಮಕಾಂಡ; 2,400 ಠೇವಣಿದಾರರಿಗೆ 93 ಕೋಟಿ ರು. ವಂಚನೆ; ಐವರ ಬಂಧನ
ಸುಮಾರು 2,400 ಠೇವಣಿದಾರರಿಗೆ 93 ಕೋಟಿ ರೂಪಾಯಿ ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ಚಾಮರಾಜಪೇಟೆಯಲ್ಲಿರುವ ಕುರುಹಿನಶೆಟ್ಟಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್‌ನಿಂದ ವಂಚನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ.

ಸಂಸದ ಬಿ.ವೈ ರಾಘವೇಂದ್ರ ಖಾತೆಯಿಂದ 15 ಲಕ್ಷ ರೂ. ಎಗರಿಸಿದ್ದ ಕ್ರಿಮಿನಲ್: ಹಣ ಕಳೆದುಕೊಂಡಿದ್ದೇಗೆ ಮಾಜಿ ಸಿಎಂ ಪುತ್ರ?
ಕೆಲವು ತಿಂಗಳ ಹಿಂದೆ ರಾಷ್ಟ್ರೀಕೃತ ಬ್ಯಾಂಕ್‌ನ ನಕಲಿ ಚೆಕ್‌ನಲ್ಲಿ ತಮ್ಮ ಸಹಿಯನ್ನು ನಕಲಿ ಮಾಡಿ 14-15 ಲಕ್ಷ ರೂಪಾಯಿಗಳನ್ನು ನನ್ನ ಬ್ಯಾಂಕ್ ಖಾತೆಯಿಂದ ಲಪಟಾಯಿಸಿದ್ದರು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಕೆಎಎಸ್ ಅಧಿಕಾರಿಯ ಸೋಗಿನಲ್ಲಿ ವೃದ್ಧರೊಬ್ಬರಿಗೆ ವಂಚನೆ
ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ನಿವಾಸಿಯಾಗಿರುವ ಫೆಡರೇಷನ್ ಆಫ್ ಕರ್ನಾಟಕ ಲಾರಿ ಮಾಲೀಕರ ಸಂಘದ ಉಪಾಧ್ಯಕ್ಷರಾಗಿರುವ 63 ವರ್ಷದ ವ್ಯಕ್ತಿಯೊಬ್ಬರು ರಾಮನಗರ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯೊಳಗೆ ಇಬ್ಬರು ಅಪರಿಚಿತ ದುಷ್ಕರ್ಮಿಗಳಿಂದ ವಂಚನೆಗೊಳಗಾಗಿದ್ದಾರೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 42 ಕೋಟಿ ರೂಪಾಯಿ ವಂಚನೆ ಆರೋಪ: ಮಾಜಿ ಸಂಸದೆ ಗೀತಾಗೆ ಐದು ವರ್ಷ ಜೈಲು ಶಿಕ್ಷೆ
ಪಂಜಾಬ್ ನ್ಯಾಷನಲ್ ಬ್ಯಾಂಕ್ ಪ್ರಕರಣದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದೆ ಕೊತಪಲ್ಲಿ ಗೀತಾ ಅವರಿಗೆ ಐದು ವರ್ಷಗಳ ಶಿಕ್ಷೆ ವಿಧಿಸಿ ಸಿಬಿಐ ಕೋರ್ಟ್ ಆದೇಶಿಸಿದೆ

ಬೆಂಗಳೂರು: ವಿದೇಶದಲ್ಲಿ ನೌಕರಿ ಆಸೆಗೆ ಬಿದ್ದು 6.6 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ!
ಗಲ್ಫ್ ರಾಷ್ಟ್ರಗಳಲ್ಲಿ ಕೆಲಸ ಹುಡುಕುತ್ತಿದ್ದ 49 ವರ್ಷದ ವ್ಯಕ್ತಿಯೊಬ್ಬರು ಆನ್‌ಲೈನ್ ವಂಚಕರ ಬಲೆಗೆ ಬಿದ್ದು 6.67 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ

ಬೆಂಗಳೂರು: ಕೆಎಎಸ್ ಆಕಾಂಕ್ಷಿಗೆ 59.50 ಲಕ್ಷ ರೂ. ಮೋಸ, ವಂಚಕನ ಬಂಧನ
ಕೆಎಎಸ್ ಆಕಾಂಕ್ಷಿಗಳನ್ನು ಗುರಿಯಾಗಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಲು ಸಹಾಯ ಮಾಡುವುದಾಗಿ ಭರವಸೆ ನೀಡಿ ಅವರಿಂದ ಹಣ ವಸೂಲಿ ಮಾಡುತ್ತಿದ್ದ 32 ವರ್ಷದ ಆರೋಪಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.

ಕೆನಡಾ ಪ್ರಜೆಗೆ ಜೆಡಿಎಸ್ ನಾಯಕ ಪ್ರಭಾಕರ್ ರೆಡ್ಡಿ 21 ಲಕ್ಷ ರು. ವಂಚನೆ: ಎಫ್ ಐಆರ್ ದಾಖಲಿಸಲು ಬೆಂಗಳೂರು ಪೊಲೀಸರ ಹಿಂದೇಟು!
ಬೆಂಗಳೂರು ದಕ್ಷಿಣ ತಾಲೂಕಿನ ಚಾಮುಂಡೇಶ್ವರಿ ಲೇಔಟ್ 2ನೇ ಹಂತದ ಜಮೀನಿಗೆ ಸೇರಿದಂತೆ ಜೆಡಿಎಸ್ ನಾಯಕ ಪ್ರಭಾಕರ್ ರೆಡ್ಡಿ 21 ಲಕ್ಷ ರು ಹಣ ವಂಚಿಸಿದ್ದಾರೆ ಎಂದು ಕೆನಡಾ ಪ್ರಜೆ ಶಾಹಿದ್ ಹಬೀಬ್ ಆರೋಪಿಸಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರಲ್ಲಿ ಹಲವರಿಗೆ ವಂಚನೆ: ಸಿಸಿಬಿ ತನಿಖೆಗೆ ಆಗ್ರಹ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರಲ್ಲಿ ಹಲವರಿಗೆ ವಂಚನೆ ನಡೆಸಿರುವ ಕುರಿತು ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ನಾಗಶೇಖರ್ ಗೆ ಮಹಿಳೆಯಿಂದ ದೋಖಾ: ಪೊಲೀಸ್ ಠಾಣೆ ಮೆಟ್ಟಿಲೇರಿದ ಖ್ಯಾತ ನಿರ್ದೇಶಕ
ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ನಾಗಶೇಖರ್ ತಮಗೆ ವಂಚನೆಯಾಗಿದೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 50 ಲಕ್ಷ ರೂಪಾಯಿ ವಂಚಿಸಲಾಗಿದೆ ಎಂದು ಬೆಂಗಳೂರಿನ ಆರ್.ಆರ್ ನಗರ ಪೊಲೀಸ್ ಠಾಣೆಗೆ ನಿರ್ದೇಶಕ ದೂರು ನೀಡಿದ್ದಾರೆ.

