ರಾಜ್ಯಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಬಗ್ಗೆ ಮಾಹಿತಿ ನೀಡಿದ ಅಳಿಯ ಡಾ ಸಿ ಎನ್ ಮಂಜುನಾಥ್
ಮಾಜಿ ಪ್ರಧಾನಿ ದೇವೇಗೌಡರು ಚೆನ್ನಾಗಿದ್ದಾರೆ, ಯಾರೂ ಆತಂಕಪಡುವ ಅಗತ್ಯವಿಲ್ಲ. ಹಲವು ದಿನಗಳಿಂದ ಮಂಡಿನೋವು, ಕಾಲುನೋವಿನಿಂದ ಬಳಲುತ್ತಿದ್ದಾರೆ. ದಿನಂಪ್ರತಿಯ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅವರ ಅಳಿಯ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ ಸಿ ಎನ್ ಮಂಜುನಾಥ್ ತಿಳಿಸಿದ್ದಾರೆ.