ರಾಜ್ಯಚನ್ನಗಿರಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು: ರೊಚ್ಚಿಗೆದ್ದ ಸಂಬಂಧಿಕರಿಂದ ಠಾಣೆ ಧ್ವಂಸ, 11 ಪೊಲೀಸರಿಗೆ ಗಾಯ
ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯೊಬ್ಬ ಸಾವಿಗೀಡಾಗಿದ್ದು, ಇದರಿಂದ ರೊಚ್ಚಿಗೆದ್ದ ಆರೋಪಿ ಸಂಬಂಧಿಕರು ಠಾಣೆ ಮೇಲೆ ದಾಳಿ ಮಾಡಿ, ಧ್ವಂಸಗೊಳಿಸಿದ್ದಾರೆ. ಘಟನೆಯಲ್ಲಿ 11 ಮಂದಿ ಪೊಲೀಸರಿಗೆ ಗಾಯಗಳಾಗಿದ್ದು, ಹಲವು ವಾಹನಗಳು ಜಖಂಗೊಂಡಿವೆ ಎಂದು ತಿಳಿದುಬಂದಿದೆ.