ರಾಜ್ಯಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ, ಮುಖ್ಯ ಆಯುಕ್ತರಿಂದ ಮತ ಎಣಿಕೆ ಕೇಂದ್ರಗಳ ವೀಕ್ಷಣೆ
ಬೆಂಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳ ಪೈಕಿ 4 ವಿವಿಧ ಸ್ಥಳಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಪೈಕಿ ನಾಲ್ಕೂ ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು.