Chief Justice of India

ಪ್ರೀತಿಸಿ ಮದುವೆಯಾದ, ಅನ್ಯ ಜಾತಿಯವರನ್ನು ವಿವಾಹವಾದ ನೂರಾರು ಯುವಜನರ ಹತ್ಯೆಯಾಗುತ್ತಿದೆ: ಸಿಜೆಐ ಆತಂಕ
ದೇಶದಲ್ಲಿ ಹೆಚ್ಚುತ್ತಿರುವ ಮರ್ಯಾದಾ ಹತ್ಯೆ ವಿಚಾರವಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಕಳವಳ ವ್ಯಕ್ತಪಡಿಸಿದ್ದು, ಯಾರನ್ನಾದರೂ ಪ್ರೀತಿಸಿದ ಕಾರಣಕ್ಕೆ ಮತ್ತು ಅನ್ಯ ಜಾತಿಯವರನ್ನು ಮದುವೆಯಾದ ಕಾರಣಕ್ಕೆ ನಡೆಯುವ ಮರ್ಯಾದೆಗೇಡು ಹತ್ಯೆಯಿಂದ ನೂರಾರು ಯುವಜನರು ಸಾಯುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಸುಪ್ರೀಂ ಕೋರ್ಟ್ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ಪ್ರಮಾಣ ಸ್ವೀಕಾರ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನ್ಯಾ. ವೈವಿ ಚಂದ್ರಚೂಡ್ ಎದುರು ನನ್ನ 'ಸುಪ್ರೀಂ ಕೋರ್ಟ್ʼ ಯಾನ ಆರಂಭ, ಈಗ ಅವರ ಮಗನಿಗೆ ಅಧಿಕಾರ ಹಸ್ತಾಂತರಿಸುತ್ತಿರುವೆ: ಸಿಜೆಐ ಲಲಿತ್
ನ್ಯಾ. ವೈವಿ ಚಂದ್ರಚೂಡ್ ಎದುರು ನನ್ನ ʼಸುಪ್ರೀಂಕೋರ್ಟ್ʼ ಯಾನ ಆರಂಭವಾಗಿತ್ತು. ಇದೀಗ ಅವರ ಮಗನಿಗೆ ಅಧಿಕಾರ ಹಸ್ತಾಂತರಿಸುತ್ತಿರುವೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಯು ಯು ಲಲಿತ್ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ನೇಮಕ, ನವಂಬರ್ 9ರಂದು ಪ್ರಮಾಣ
ನವೆಂಬರ್ 9, 2022 ರಿಂದ ಜಾರಿಗೆ ಬರುವಂತೆ ಸುಪ್ರೀಂ ಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಡಿವೈ ಚಂದ್ರಚೂಡ್ ಹೆಸರು ಶಿಫಾರಸು ಮಾಡಿದ CJI ಯುಯು ಲಲಿತ್
ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಹೆಸರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ವ್ಯಕ್ತಿಚಿತ್ರ
ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರನ್ನು ಹಾಲಿ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರು ಶಿಫಾರಸ್ಸು ಮಾಡಿದ್ದು, ಚಂದ್ರಚೂಡ್ ಅವರ ವ್ಯಕ್ತಿಚಿತ್ರ ಇಲ್ಲಿದೆ.

ನವೆಂಬರ್ 8 ರಂದು ಸಿಜೆಐ ನಿವೃತ್ತಿ; ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಸರ್ಕಾರ ಪತ್ರ
ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ಬಿಲ್ಕಿಸ್ ಬಾನೊ ಪ್ರಕರಣದ 'ಭಯಾನಕ ತಪ್ಪು ನಿರ್ಧಾರ' ಸರಿಪಡಿಸಿ: 134 ಮಾಜಿ ಅಧಿಕಾರಿಗಳಿಂದ ಸಿಜೆಐಗೆ ಪತ್ರ
ಬಿಲ್ಕಿಸ್ ಬಾನೊ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ 11 ಮಂದಿಯನ್ನು ಅವಧಿಗೆ ಮುನ್ನ ಬಿಡುಗಡೆ ಮಾಡಿರುವುದರ ವಿರುದ್ಧ ಧನಿ ಎತ್ತಿರುವ 130 ಕ್ಕೂ ಹೆಚ್ಚು ಮಾಜಿ ನಾಗರಿಕ ಸೇವಕ ಅಧಿಕಾರಿಗಳು ಶನಿವಾರ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅವರಿಗೆ ಬಹಿರಂಗ ಪತ್ರ ಬರೆದು ಈ “ಭಯಾನಕ ತಪ್ಪನ್ನು ಸರಿಪಡಿಸುವಂತೆ ಮನವಿ ಮಾಡಿದ್ದಾರೆ.

ದೇಶದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಉದಯ್ ಉಮೇಶ್ ಲಲಿತ್ ನೇಮಕ
ದೇಶದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಉಮೇಶ್ ಲಲಿತ್ ಅವರನ್ನು ನೇಮಕ ಮಾಡಲಾಗಿದೆ.

