Chikkaballapur

ಚಿಕ್ಕಬಳ್ಳಾಪುರ: ಭಾರೀ ಮಳೆಗೆ ಮನೆ ಕುಸಿತ, ತಂದೆ-ಮಗ ದುರ್ಮರಣ
ಕಳೆದ ರಾತ್ರಿ ಸುರಿದ ಬಾರೀ ಮಳೆಗೆ ನಿದ್ರೆ ಮಾಡುತ್ತಿದ್ದಾಗ ಮನೆ ಕುಸಿದು ಬಿದ್ದು ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದಲ್ಲಿ ನಡೆದಿದೆ.

ಗಡಿಭಾಗದ ನೀರಿನ ಸಮಸ್ಯೆ ಪರಿಹರಿಸಲು ಆಂಧ್ರ ಪ್ರದೇಶದೊಂದಿಗೆ ನೀರು ಹಂಚಿಕೆ: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್
ಚಿಕ್ಕಬಳ್ಳಾಪುರದ ಗಡಿಭಾಗದಲ್ಲಿ ಕುಡಿಯುವ ನೀರಿನ ಕೊರತೆ ನೀಗಿಸಲು ಆಂಧ್ರಪ್ರದೇಶದಿಂದ ನೀರು ಪಡೆಯುವ ಕುರಿತು ಚರ್ಚೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಮಗಳ ಸಾವಿಗೆ ಆಕ್ರೋಶ, ಪ್ರಿಯಕರನನ್ನು ಕೊಂದ ತಂದೆ
ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪುತ್ರಿಯ ಸಾವಿಗೆ ಆಕೆಯ ಪ್ರಿಯಕರನನ್ನು ಕೊಂದು ತಂದೆ ಸೇಡು ತೀರಿಸಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಚಿಕ್ಕಬಳ್ಳಾಪುರ: ಕೊರೋನಾ ಗೆದ್ದ ಪೊಲೀಸ್ ಪೇದೆಗೆ ಹೂ ಮಳೆ ಸ್ವಾಗತ, ಸಿಬ್ಬಂದಿಗೆ ಆತ್ಮಸ್ಥೈರ್ಯ ತುಂಬಿದ ಐಜಿಪಿ
ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮರಳಿ ಕರ್ತವ್ಯಕ್ಕೆ ವಾಪಸ್ ಬಂದ ಪೊಲೀಸ್ ಪೇದೆಯೊಬ್ಬರಿಗೆ ಕೇಂದ್ರವಲಯದ ಐಜಿಪಿ ಕೆ.ವಿ.ಶರತ್ ಚಂದ್ರ ಮತ್ತಿತರೆ ಸಿಬ್ಬಂದಿಯಿಂದ, ಆತ್ಮೀಯ , ಹೃದಯಸ್ಪರ್ಶಿ ಸ್ವಾಗತ ನೀಡಿ, ಆತ್ಮಸ್ಥೈರ್ಯ ತುಂಬಿದ ಅಪರೂಪದ ಘಟನೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಎಸ್ಪಿ ಕಚೇರಿ ಆವರಣ ಸಾಕ್ಷಿಯಾಯಿತು.

ಲಾಕ್ ಡೌನ್: ಚಿಕ್ಕಬಳ್ಳಾಪುರದಲ್ಲಿ ವಿಷ ಸೇವಿಸಿ ಹೂವು ಬೆಳೆಗಾರ ಆತ್ಮಹತ್ಯೆ
ಜಮೀನಿನಲ್ಲಿ ಹೂವು ಬೆಳೆದಿದ್ದ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಕಸಬಾ ಹೋಬಳಿಯ ಕತ್ತರಿಗುಪ್ಪೆ ಗ್ರಾಮದಲ್ಲಿ ನಡೆದಿದೆ.

ಇ–ಗ್ರಾಮ್ ಸ್ವರಾಜ್, ಸ್ವಾಮಿತ್ವ ಯೋಜನೆಗೆ ಪ್ರಧಾನಮಂತ್ರಿ ಚಾಲನ; ಚಿಕ್ಕಬಳ್ಳಾಪುರದ ಕ್ರಮಕ್ಕೆ ಪ್ರಧಾನಿ ಮೆಚ್ಚುಗೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಪಂಚಾಯತ್ ರಾಜ್ ದಿನದ ಅಂಗವಾಗಿ ಇ- ಗ್ರಾಮ್ ಸ್ವರಾಜ್ ಮತ್ತು ಸ್ವಾಮಿತ್ವ ಯೋಜನೆಗೆ ಚಾಲನೆ ನೀಡಿ ಶುಭಾಶಯ ಕೋರಿದರು.

ಚಿಕ್ಕಬಳ್ಳಾಪುರ: ಕೊರೋನಾ ಕರ್ತವ್ಯದಲ್ಲಿದ್ದ ಡಾ. ಅನಿಲ್ ಕುಮಾರ್ ನಿಧನ
ಕೊರೋನಾ ವೈರಸ್ ಕರ್ತವ್ಯದಲ್ಲಿದ್ದ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಅನಿಲ್ ಕುಮಾರ್ ತೀವ್ರ ಹೃದಯಾಘಾದಿಂದ ಗುರುವಾರ ನಿಧನರಾಗಿದ್ದಾರೆ.

ಕೊರೋನಾ ಮಹಾಮಾರಿಗೆ ಬೆಂಗಳೂರಿನಲ್ಲಿ ಚಿಕ್ಕಬಳ್ಳಾಪುರ ಮೂಲದ ವೃದ್ಧ ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆ
ಮಾರಕ ಕೊರೋನಾ ವೈರಸ್ ಗೆ ಕರ್ನಾಟಕದಲ್ಲಿ ಮತ್ತೊಂದು ಬಲಿಯಾಗಿದ್ದು, ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕಬಳ್ಳಾಪುರ ಮೂಲದ 65 ವರ್ಷದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಕೊರೋನಾ ಅಬ್ಬರ: ಗೌರಿಬಿದನೂರಿನಲ್ಲಿ 1 ಸಾವಿರ ಮಂದಿಗೆ ಹೋಂ ಕ್ವಾರಂಟೈನ್
ಚಿಕ್ಕಬಳ್ಳಾಪುರದಲ್ಲೂ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ವೈರಸ್ ಸೋಂಕಿತರೊಂದಿಗೆ ಸಂಪರ್ಕ ಸಾಧಿಸಿರುವ ಶಂಕೆ ಹಿನ್ನಲೆಯಲ್ಲಿ ಗೌರಿಬಿದನೂರಿನ ಬರೊಬ್ಬರಿ 1 ಸಾವಿರ ಮಂದಿ ನಿವಾಸಿಗಳನ್ನು ಕ್ವಾರಂಟೈನ್ ನಲ್ಲಿಡಲಾಗಿದೆ.

