Chikkaballapura

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜು ಪುಡಿ ಪುಡಿ
ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ.

Breaking News: ಇನ್ನು ಕೆಲವೇ ಗಂಟೆಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ರಾಜಿನಾಮೆ?: ಪ್ರತಾಪ್ ಸಿಂಹ ಟ್ವೀಟ್!
ಕರ್ನಾಟಕ ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. 28 ಕ್ಷೇತ್ರಗಳ ಪೈಕಿ ಬಿಜೆಪಿ 17, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ ಸುಧಾಕರ್ ಗೆದ್ದರೆ ತಾವು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ.

ಚಿಕ್ಕಬಳ್ಳಾಪುರ: 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಶಾಲಾ ಮುಖ್ಯೋಪಾಧ್ಯಾಯನ ಬಂಧನ
ಪೊಲೀಸ್ ಮೂಲಗಳ ಪ್ರಕಾರ, ವಿದ್ಯಾರ್ಥಿನಿ ಚಿಕ್ಕಬಳ್ಳಾಪುರ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದಳು. ಒಂದು ವರ್ಷದ ಹಿಂದೆ ಶಾಲಾ ಮುಖ್ಯೋಪಾಧ್ಯಾಯ ವೆಂಕಟೇಶ್ ಎಂಬಾತ ತಮ್ಮ ಕಚೇರಿಯಲ್ಲಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಖಾಸಗಿ ಅಂಗಗಳನ್ನು ಸ್ಪರ್ಶಿಸಿದ್ದರು ಎಂದು ಆರೋಪಿಸಲಾಗಿದೆ.

BJP ಅಭ್ಯರ್ಥಿ ಡಾ. ಕೆ.ಸುಧಾಕರ್ ಆಪ್ತನ ಮನೆ ಮೇಲೆ ಐಟಿ ದಾಳಿ, ಕೋಟ್ಯಾಂತರ ಹಣ ಪತ್ತೆ!
ಲೋಕಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದ್ದು ಇದಕ್ಕೂ ಮುನ್ನ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆ ಐಟಿ ಶಾಕ್ ನೀಡಿದೆ.

ಬೆಂಗಳೂರು-ಚಿಕ್ಕಬಳ್ಳಾಪುರದಲ್ಲಿ ಇಂದು ಮೋದಿ ಸಾರ್ವಜನಿಕ ಸಭೆ: ಸಂಚಾರ ಮಾರ್ಗ ಬದಲಾವಣೆ ಮಾಹಿತಿ!
ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಇಂದು ಕರ್ನಾಟಕ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ ಅವರು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ಎರಡು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Loksabha Polls 2024: ಚಿಕ್ಕಬಳ್ಳಾಪುರ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಎಡವಟ್ಟು, ನಾಮಪತ್ರ ಸಲ್ಲಿಸದೆ ವಾಪಸ್!
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಎಡವಟ್ಟು ಮಾಡಿಕೊಂಡಿದ್ದು ಇಂದು ನಾಮಪತ್ರ ಸಲ್ಲಿಸದೆ ವಾಪಸ್ ಆಗಿದ್ದಾರೆ.

ಮಹಾ ಶಿವರಾತ್ರಿ: ಚಿಕ್ಕಬಳ್ಳಾಪುರ ಇಶಾ ಫೌಂಡೇಶನ್ ಗೆ ಬಿಎಂಟಿಸಿಯಿಂದ ಹೊಸ ಟೂರ್ ಪ್ಯಾಕೇಜ್ ಆರಂಭ
ಸಾರ್ವಜನಿಕ ರಜಾದಿನ ಮತ್ತು ವಾರಾಂತ್ಯಗಳಲ್ಲಿ ಬೆಂಗಳೂರು ಮಹಾನಗರ ಸಾರಿಗೆ ನಿಗಮ ಚಿಕ್ಕಬಳ್ಳಾಪುರ ಸುತ್ತಮುತ್ತ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಅಗ್ಗದ ದರದಲ್ಲಿ ಹವಾ ನಿಯಂತ್ರಿತ ಬಸ್ಸು ಸಂಚಾರ ಸೇವೆ ಆರಂಭಿಸಲಿದೆ.

ಮಧುಗಿರಿ ಸರ್ಕಾರಿ ಹಾಸ್ಟೆಲ್ ನಲ್ಲಿದ್ದ ಅಪ್ರಾಪ್ತ ಬಾಲಕಿಗೆ ಹೆರಿಗೆ; ಪೋಕ್ಸೋ ಪ್ರಕರಣ ದಾಖಲು
ತುಮಕೂರು ಜಿಲ್ಲೆಯ ಮಧುಗಿರಿ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯ ಹಾಸ್ಟೆಲ್ ನಲ್ಲಿದ್ದ 9ನೇ ತರಗತಿ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣದ ಸಂಬಂಧ ಪೊಲೀಸರು ಗುರುವಾರ ಪೋಕ್ಸೋ ಕಾಯ್ದೆ ಅಡಿ...

ಚಿಕ್ಕಬಳ್ಳಾಪುರ: ಓಡಿಹೋಗಿ ಮದುವೆಯಾದ ಪ್ರೇಮಿಗಳು; ಹುಡುಗನ ಮನೆಗೆ ನುಗ್ಗಿ ಹಲ್ಲೆ
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ದಪ್ಪರ್ತಿ ಗ್ರಾಮದಲ್ಲಿ ಪ್ರೇಮಿಗಳಿಬ್ಬರು ಮನೆಯಿಂದ ಓಡಿಹೋಗಿ ಮದುವೆ ಮಾಡಿಕೊಂಡಿದ್ದು, ಇದರಿಂದ ಆಕ್ರೋಶ ಹುಡುಗಿಯ ತಂದೆ, ತಾಯಿ ಹಾಗೂ ಸಂಬಂಧಿಕರು ಹುಡುಗನ ಮನೆಗೆ ನುಗ್ಗಿ, ಆತನ ತಂದೆ ಮತ್ತು ತಾಯಿ ಹಲ್ಲೆ ನಡೆಸಿದ್ದಾರೆ.

