Chikkamagaluru

ಚಿಕ್ಕಮಗಳೂರು: ಡೆಂಗ್ಯೂಗೆ ಕಾಲೇಜು ವಿದ್ಯಾರ್ಥಿನಿ ಬಲಿ!
ಚಿಕ್ಕಮಗಳೂರು ನಗರದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

10 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಚಿಕ್ಕಮಗಳೂರು KSRTC ಡಿಸಿ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸುತ್ತಿದ್ದಾಗ ಚಿಕ್ಕಮಗಳೂರು ಕೆಎಸ್ಆರ್ಟಿಸಿ ವಿಭಾಗ ನಿಯಂತ್ರಕ ಬಸವರಾಜು ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲೋಕಸಭೆ ಚುನಾವಣೆ: ತುಮಕೂರಿಗೆ ಬರಲ್ಲ, ಚಿಕ್ಕಮಗಳೂರಿನಿಂದಲೇ ಸ್ಪರ್ಧೆ; ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು– ಉಡುಪಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ’ ಎಂದು ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಹಾಗೂ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಬುಧವಾರ ಸ್ಪಷ್ಟಪಡಿಸಿದರು.

ಇಲ್ಲಿನ ಮುಸ್ಲಿಮರು ಘಜ್ನಿ, ಘೋರಿ, ಬಾಬರ್ ಮನಸ್ಥಿತಿಯಿಂದ ಹೊರಬರಬೇಕು: ಬಿಜೆಪಿ ಮುಖಂಡ ಸಿಟಿ ರವಿ
ಘಜ್ನಿ, ಘೋರಿ ಮತ್ತು ಬಾಬರ್‌ನ ಮನಸ್ಥಿತಿ ಅಪಾಯಕಾರಿಯಾಗಿದ್ದು, 'ಇಲ್ಲಿನ ಮುಸ್ಲಿಮರು ಆ ಮನಸ್ಥಿತಿಯಿಂದ ಹೊರಬರಬೇಕು' ಎಂದು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿಯ ಹಿರಿಯ ನಾಯಕ ಸಿಟಿ ರವಿ ಮಂಗಳವಾರ ಹೇಳಿದ್ದಾರೆ.

ಚಿಕ್ಕಮಗಳೂರು: ತಮ್ಮ ಪ್ರದೇಶಕ್ಕೆ ಬಂದಿದ್ದಕ್ಕೆ ದಲಿತ ಯುವಕನಿಗೆ ಥಳಿಸಿದ ಮೇಲ್ಜಾತಿಯ ಗುಂಪು
ಚಿಕ್ಕಮಗಳೂರು ಜಿಲ್ಲೆಯಲ್ಲಿ ದಲಿತ ಯುವಕನ ಮೇಲೆ ಮೇಲ್ಜಾತಿಗಳ ಗುಂಪೊಂದು ತಮ್ಮ ಪ್ರದೇಶಕ್ಕೆ ಪ್ರವೇಶಿಸಿದ್ದಕ್ಕಾಗಿ ಹಲ್ಲೆ ನಡೆಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಗೇರಮರಡಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ.

ಮಗುವಿಗೆ ಜನ್ಮನೀಡಿ ಬಾಣಂತಿ ಸಾವು; ವರದಿ ಬಳಿಕ ಶಿಸ್ತುಕ್ರಮ ಎಂದ ಆರೋಗ್ಯ ಇಲಾಖೆ
ಮಗುವಿಗೆ ಜನ್ಮನೀಡಿ ಬಾಣಂತಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ವರದಿ ಕೇಳಿರುವ ರಾಜ್ಯ ಆರೋಗ್ಯ ಇಲಾಖೆ ವರದಿ ಬಂದ ಬಳಿಕ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದೆ.

ದತ್ತ ಜಯಂತಿ ಶೋಭಾ ಯಾತ್ರೆ: ಕಾರ್ಯಕರ್ತರೊಂದಿಗೆ ಶೋಭಾ ಕರಂದ್ಲಾಜೆ, ಸಿಟಿ ರವಿ ಹೆಜ್ಜೆ! ವಿಡಿಯೋ
ಜಿಲ್ಲೆಯ ಹಲವೆಡೆ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ ಮಾಡಲಾಗುತ್ತಿದೆ. ತಾಲೂಕಿನ ಆಲ್ದೂರಿನಲ್ಲಿ ಶನಿವಾರ ನಡೆದ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಸಿ.ಟಿ. ರವಿ ಕಾರ್ಯಕರ್ತರೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ.

ಹಿಜಾಬ್ ಮೇಲಿನ ನಿಷೇಧ ತೆರವು: 'ಇತರರು ಕೇಸರಿ, ನೀಲಿ, ಹಳದಿ ಶಾಲು ಬಳಸಲು ಕೇಳಬಹುದು' ಎಂದ ಸಿಟಿ ರವಿ
ಕಾಂಗ್ರೆಸ್ ಸರ್ಕಾರವು ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವುದಾಗಿ ಹೇಳಿರುವುದು ಶಾಲಾ-ಕಾಲೇಜುಗಳಲ್ಲಿ ಅಶಾಂತಿ ಉಂಟಾಗುವ ಸಾಧ್ಯತೆಗಳನ್ನು ಸೂಚಿಸುತ್ತದೆ. ಹಿಜಾಬ್ ಧರಿಸಲು ಅವಕಾಶ ನೀಡಿದರೆ, ಇತರರು ಕೂಡ ಕೇಸರಿ ಮತ್ತು ಇತರ ಬಣ್ಣದ ಶಾಲುಗಳನ್ನು ಧರಿಸಲು ಬಯಸುತ್ತಾರೆ ಎಂದು ಬಿಜೆಪಿ ನಾಯಕ ಸಿಟಿ ರವಿ ಶನಿವಾರ ಹೇಳಿದ್ದಾರೆ.

ಚಿಕ್ಕಮಗಳೂರು: ಶಾಲೆಗೆ ತೆರಳುತ್ತಿದ್ದ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು!
ಶಾಲೆಗೆ ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿ 7ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ.

