Chikkamagaluru

ಚಿಕ್ಕಮಗಳೂರಿನಲ್ಲಿ ದ್ರವ ಆಮ್ಲಜನಕ ಸ್ಥಾವರ ಸ್ಥಾಪನೆ ಶೀಘ್ರ!
ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ದ್ರವ ಆಮ್ಲಜನಕ ಘಟಕ ಸ್ಥಾಪಿಸಲು ಯೋಜಿಸುತ್ತಿದೆ, ಒಂದು ವಾರದಲ್ಲಿ ಕಾರ್ಯಾರಂಭ ಮಾಡಲಿದೆ.

ಚಿಕ್ಕಮಗಳೂರು: ಸೋಂಕಿತ ವ್ಯಕ್ತಿಗೆ ಹೃದಯನಾಳ ಸ್ಟೆಂಟ್ ಕಸಿ ಯಶಸ್ವಿಯಾಗಿ ನಡೆಸಿದ ವೈದ್ಯರ ತಂಡ!
ಇದೇ ಮೊದಲ ಬಾರಿಗೆ ಕೊರೋನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಚಿಕ್ಕಮಗಳೂರಿನ ವೈದ್ಯರು ಹೃದಯನಾಳ ಸ್ಟೆಂಟ್ ಕಸಿಯನ್ನು ಯಶಸ್ವಿಯಾಗಿ ನೆಡಸಿದ್ದಾರೆ.

'1978 ರ ಚಿಕ್ಕಮಗಳೂರು ಚುನಾವಣೆಯಲ್ಲಿ ಇಂದಿರಾ ಗಾಂಧಿ ವಿಜಯದ ಹಿಂದಿನ ಮಾಸ್ಟರ್ ಮೈಂಡ್ ಪ್ರಣಬ್ ಮುಖರ್ಜಿ'
1978 ರಲ್ಲಿ ಚಿಕ್ಕಮಗಳೂರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಾಜಿ ಪ್ರದಾನಿ ಇಂದಿರಾ ಗಾಂಧಿ ಅವರ ಗೆಲುವಿಗಾಗಿ ಕರ್ನಾಟಕದಾದ್ಯಂತ ಸಂಚರಿಸಿದ್ದ ದಿವಂಗತ ಪ್ರಣಬ್ ಮುಖರ್ಜಿ ಗೆಲುವಿಗೆ ಕಾರಣರಾಗಿದ್ದರು.

ಚಿಕ್ಕಮಗಳೂರು: ಚಿಪ್ಪುಹಂದಿ ವ್ಯಾಪಾರ ನಡೆಸಿದ್ದ 10 ಮಂದಿಯ ಗ್ಯಾಂಗ್ ಅರೆಸ್ಟ್
ಕರ್ನಾಟಕ ಅರಣ್ಯ ಇಲಾಖೆಯು ರಾಜ್ಯದ ಚಿಕ್ಕಮಗಳೂರಿನಲ್ಲಿ ಕಾನೂನುಬಾಹಿರವಾಗಿ ನಡೆಯುತ್ತಿದ್ದ ಚಿಪ್ಪುಹಂದಿ ವ್ಯಾಪಾರ ದಂಧೆಯನ್ನು ಭೇದಿಸಿದೆ ಮತ್ತು ಚೀನಾದ ಸಾಂಪ್ರದಾಯಿಕ ಔಷಧದ ತಯಾರಿಕೆಯಲ್ಲಿ ಹೆಚ್ಚು ಬೇಡಿಕೆಯಿರುವ ಸಸ್ತನಿಗಳ ಚಿಪ್ಪನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಈವರೆಗೆ 10 ಜನರನ್ನು ಬಂಧಿಸಲಾಗಿದೆ.

ಡಾ. ಆರತಿ ಕೃಷ್ಣ ಸಹಾಯದಿಂದ ಫಿಲಿಪ್ಪೈನ್ಸ್ ನಿಂದ ಚಿಕ್ಕಮಗಳೂರು ತಲುಪಿದ ವಿದ್ಯಾರ್ಥಿನಿ
ಅನಿವಾಸಿ ಭಾರತೀಯ ಸಚಿವಾಲಯದ ಮಾಜಿ ಸಲಹೆಗಾರ್ತಿ ಆರತಿ ಕೃಷ್ಣ ಅವರ ನೆರವಿನಿಂದಾಗಿ ಚಿಕ್ಕಮಗಳೂರಿನ ಮೆಡಿಕಲ್ ವಿದ್ಯಾರ್ಥಿನಿ ಫಿಲಿಪ್ಪೈನ್ಸ್ ನಿಂದ ಚಿಕ್ಕಮಗಳೂರಿಗೆ ವಾಪಸಾಗಿದ್ದಾರೆ.

ಚಿಕ್ಕಮಗಳೂರು: ಇಬ್ಬರು ಮಕ್ಕಳ ಜೊತೆ ಕೆರೆಗೆ ಹಾರಿದ ತಾಯಿ, ಮೂವರೂ ಸಾವು
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರು ಹೆಣ್ಣು ಮಕ್ಕಳ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಬಳಿಯ ಹುಣಸೇಕೊಪ್ಪದಲ್ಲಿ ನಡೆದಿದೆ.

ಆಸ್ಪತ್ರೆಗಳ ನಿರ್ಲಕ್ಷ್ಯ: ಕೊರೋನಾ ಸೋಂಕಿಗೊಳಗಾಗಿದ್ದ ವಿಕಲಚೇತನ ಯುವತಿ ಸಾವು!
ಆಸ್ಪತ್ರೆಗಳ ನಿರ್ಲಕ್ಷ್ಯದಿಂದಾಗಿ ಕೊರೋನಾ ಸೋಂಕಿಗೊಳಗಾಗಿ ಬಳಲುತ್ತಿದ್ದ 20 ವರ್ಷದ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂರು ಪೊಲೀಸ್ ಠಾಣೆ ಸೀಲ್ ಡೌನ್: ಹೆಚ್ಚಿದ ಆತಂಕ
ನಾಲ್ವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ಸಂಚಾರ ನಿಷೇಧ: ಚಿಕ್ಕಮಗಳೂರು ಡಿಸಿ ಆದೇಶ
ಕಳೆದ ವರ್ಷ ಭಾರಿ ಮಳೆಯ ಸಂದರ್ಭದಲ್ಲಿ ಸಂಚಾರಕ್ಕೆ ಅಡ್ಡಿಯಾಗಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಆಗಾಗ್ಗೆ ಭೂಕುಸಿತ ಸಂಭವಿಸುತ್ತಿದ್ದು. ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗಿದ್ದರೂ, ಈ ವರ್ಷವೂ ಭೂಕುಸಿತ ಸಂಭವಿಸುವ ಭೀತಿ ತಪ್ಪಿಲ್ಲ.

