ರಾಜಕೀಯವಿಜಯೇಂದ್ರ ಭೇಟಿ: ಚಿಕ್ಕೋಡಿ ಲೋಕಸಭಾ ಟಿಕೆಟ್ ಕೇಳಿದ್ರಾ ರಮೇಶ್ ಕತ್ತಿ?
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ರಮೇಶ್ ವಿ ಕತ್ತಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ್ದು, ಭೇಟಿ ವೇಳೆ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.