ರಾಜ್ಯಭಿಕ್ಷಾಟನೆಗೆ ಮಕ್ಕಳ ಬಳಕೆ: 115 ಮಂದಿ ವಿರುದ್ಧ ಎಫ್ಐಆರ್, 99 ಮಕ್ಕಳ ರಕ್ಷಣೆ; ಹೈಕೋರ್ಟ್ಗೆ ಸರ್ಕಾರ ಮಾಹಿತಿ
ನಗರದ ರಸ್ತೆ ಬದಿ, ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವುದು ಮತ್ತು ಆಟಿಕೆಗಳ ಮಾರಾಟಕ್ಕೆ ಮಕ್ಕಳನ್ನು ಬಳಕೆ ಮಾಡುವವರ ವಿರುದ್ಧ ಕರ್ನಾಟಕ ಭಿಕ್ಷಾಟನೆ ನಿರ್ಮೂಲನಾ ಕಾಯಿದೆಯಡಿಯಲ್ಲಿ 2021ರಿಂದ ಈವರೆಗೂ 115 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದು, 99 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.