ವಾಣಿಜ್ಯಅಕ್ರಮ ಹಣ ವರ್ಗಾವಣೆ ಕೇಸು: ಎನ್ಎಸ್ ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಜಾಮೀನು ಅರ್ಜಿ ವಜಾ
ಅಕ್ರಮವಾಗಿ ಫೋನ್ ಕದ್ದಾಲಿಕೆ ಮತ್ತು ರಾಷ್ಟ್ರೀಯ ಷೇರು ವಿನಿಮಯ(NSE) ಉದ್ಯೋಗಿಗಳ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (ಎನ್ಎಸ್ಇ) ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಿತ್ರಾ ರಾಮಕೃಷ್ಣ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.