chitradurga

ಚಿತ್ರದುರ್ಗ: ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಡಿಕ್ಕಿ, ಮೂವರ ದಾರುಣ ಸಾವು
ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

ಚಿತ್ರದುರ್ಗ ಮುರುಘಾ ಮಠದ ಉಸ್ತುವಾರಿಯಾಗಿ ಬಸವಪ್ರಭು ಸ್ವಾಮೀಜಿ ಆಯ್ಕೆ
ಮಠ ಮತ್ತು ಎಸ್‌ಜೆಎಂ ಶಿಕ್ಷಣ ಸಂಸ್ಥೆಗಳ ದೈನಂದಿನ ವ್ಯವಹಾರಗಳ ಮೇಲ್ವಿಚಾರಣೆ ಮಾಡಲು ರಚಿಸಲಾದ ತಾತ್ಕಾಲಿಕ ಆಡಳಿತ ಸಮಿತಿಯು ಮುರುಘಾ ಮಠದ ಉಸ್ತುವಾರಿಯಾಗಿ ಬಸವಪ್ರಭು ಸ್ವಾಮೀಜಿ ಅವರನ್ನು ಆಯ್ಕೆ ಮಾಡಿದೆ.

ರಾಜ್ಯದಾದ್ಯಂತ ಭಾರಿ ಮಳೆ: ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಬೆಳೆ ಹಾನಿ, ರೈತರು ಕಂಗಾಲು
ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಬೀಸಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಭತ್ತ, ಬಾಳೆ, ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆ ಹಾನಿಯಾಗಿದೆ. ದಾವಣಗೆರೆ ತಾಲೂಕಿನಲ್ಲಿ ಗಾಳಿಗೆ 150 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಭತ್ತ ಹಾನಿಯಾಗಿದ್ದು, ಮನೆ ಕೂಡ ಕುಸಿದಿದೆ.

ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ವಸ್ತ್ರದ್ ನೇಮಕ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್
ಚಿತ್ರದುರ್ಗದ ಮುರುಘರಾಜೇಂದ್ರ ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ರದ್ದುಪಡಿಸಿದೆ.

ಕಾಂಗ್ರೆಸ್ ಸರ್ಕಾರ ಬರ್ತಿದೆ, ನಾವು ಕರೆಂಟ್ ಬಿಲ್ ಕಟ್ಟಲ್ಲ: ಬೆಸ್ಕಾಂ ಸಿಬ್ಬಂದಿ ಮುಂದೆ ಪಟ್ಟುಹಿಡಿದ ಗ್ರಾಮಸ್ಥರು!
ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 5 ಗ್ಯಾರಂಟಿ ಈಡೇರಿಸುತ್ತೇವೆ ಎಂದು ಕಾಂಗ್ರೆಸ್ ಘೋಷಿಸಿತ್ತು. ಅದರಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಕೂಡ ಒಂದು. ಈಗ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ಸರ್ಕಾರ ರಚಿಸಲು ಹೊರಟಿರುವ ಕಾಂಗ್ರೆಸ್ ಗೆ ಸಿಎಂ ಆಯ್ಕೆ ಕಗ್ಗಂಟಾಗಿ ಉಳಿದಿದೆ.

ಚಿತ್ರದುರ್ಗ: ಕರ್ನಾಟಕ ಗಡಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.39 ಕೋಟಿ ರು. ಮೌಲ್ಯದ ಚಿನ್ನಾಭರಣ ವಶ
ಅನುಮಾನಾಸ್ಪದವಾಗಿ ಸಾಗಣೆ ಮಾಡುತ್ತಿದ್ದ 6.39 ಕೋಟಿ ರು. ಮೌಲ್ಯದ ಚಿನ್ನ ಮತ್ತು ವಜ್ರಾಭರಣವನ್ನು ಕರ್ನಾಟಕ ಆಂಧ್ರಪ್ರದೇಶದ ಗಡಿಯಲ್ಲಿರುವ ಕಣಕುಪ್ಪೆ ಚೆಕ್‌ಪೋಸ್ಟ್‌ನಲ್ಲಿ ಚುನಾವಣಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ನಿಜಲಿಂಗಪ್ಪಗೆ ಕಾಂಗ್ರೆಸ್ ಅಪಮಾನ ಮಾಡಿದೆ, ನನ್ನನ್ನೂ 90ಕ್ಕೂ ಹೆಚ್ಚು ಬಾರಿ ನಿಂದಿಸಿದೆ: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲವೆಂದು ಸ್ವತಃ ಕಾಂಗ್ರೆಸ್ ನಾಯಕರಿಗೆ ಗೊತ್ತಿದೆ. ಹೀಗಾಗಿ ಸುಳ್ಳಿನ ಗ್ಯಾರೆಂಟಿಗಳನ್ನು ನೀಡುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿಯ ಎಲ್ಲ ಯೋಜನೆಗಳನ್ನು ನಾಶ ಮಾಡುತ್ತವೆ.ಇದಕ್ಕಾಗಿ ಡಬಲ್ ಎಂಜಿನ್ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದು ಕರ್ನಾಟಕವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಿರಿ ಎಂದು ಪ್ರ

ಚಿತ್ರದುರ್ಗ: ಸಾರ್ವಜನಿಕವಾಗಿ ಮೇಕೆ ಬಲಿ ಕೊಟ್ಟ ವ್ಯಕ್ತಿ ವಿರುದ್ಧ ಕೇಸ್ ದಾಖಲು
ಚಿತ್ರದುರ್ಗ ಜಿಲ್ಲೆಯ ಪರಶುರಾಂಪುರ ಗ್ರಾಮದಲ್ಲಿ ಯುಗಾದಿ ಹಬ್ಬದ ವೇಳೆ ಸಾರ್ವಜನಿಕವಾಗಿ ಮೂರು ಮೇಕೆಗಳನ್ನು ಬಲಿ ಕೊಟ್ಟ ವ್ಯಕ್ತಿಯೊಬ್ಬನ ವಿರುದ್ಧ ಚಿತ್ರದುರ್ಗ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಚಿತ್ರದುರ್ಗ: ಕಾರು–ಲಾರಿ ಮುಖಾಮುಖಿ ಡಿಕ್ಕಿ, ಖ್ಯಾತ ರಂಗಭೂಮಿ ಕಲಾವಿದ ಬೆಳಗಲ್ ವೀರಣ್ಣ ಸಾವು
ಚಿತ್ರದುರ್ಗದಲ್ಲಿ ಕಾರು–ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಖ್ಯಾತ ರಂಗಭೂಮಿ ಕಲಾವಿದ ಬೆಳಗಲ್ ವೀರಣ್ಣ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

