chitradurga

ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; 5ನೇ ಆರೋಪಿ ಗಂಗಾಧರಯ್ಯ ಬಂಧನ
ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿರುವ ಮುರಾಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗಳ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುರುಘಾ ಮಠದ ಹಾಸ್ಟೆಲ್‌ನಲ್ಲಿದ್ದ ಮಗಳನ್ನು ಹುಡುಕಿಕೊಂಡು ಬಂದ ದೃಷ್ಟಿದೋಷವುಳ್ಳ ತಂದೆಗೆ ಶಾಕ್!
ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದ ಮುನಿಸ್ವಾಮಿ ಮತ್ತು ಅವರ ಪತ್ನಿ ಶಂಕರಿಯಮ್ಮ ಅವರು ತಮ್ಮ ಮಗಳನ್ನು ಹುಡುಕಲು ಗೌರಿಬಿದನೂರು ತಾಲೂಕಿನಿಂದ ಚಿತ್ರದುರ್ಗಕ್ಕೆ ಬಂದಿದ್ದರು.

ಪೋಕ್ಸೋ ಪ್ರಕರಣ: ಮುರುಘಾ ಶ್ರೀಗೆ ಮತ್ತೆ ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನ
ಮಠದ ಆಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೀಡಾಗಿರುವ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶ್ರೀಗಳನ್ನು ನ್ಯಾಯಾಲಯ ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ವೈದ್ಯಕೀಯ ತಪಾಸಣೆಗೆ ಕರೆತಂದಿದ್ದ ಮುರುಘಾ ಶ್ರೀಗಳು ಐಸಿಯುಗೆ ಶಿಫ್ಟ್: 1 ದಿನ ನ್ಯಾಯಾಂಗ ಬಂಧನ
ಪೋಕ್ಸೊ ಕಾಯ್ದೆಯಡಿ ಬಂಧಿತಕ್ಕೊಳಗಾಗಿರುವ ಮುರುಘಾ ಮಠದ ಡಾ ಶಿವಮೂರ್ತಿ ಶಿವಾಚಾರ್ಯ ಶರಣರು ಚಿತ್ರದುರ್ಗದ ಕಾರಾಗೃಹಕ್ಕೆ ಸೇರಿದ ಬೆನ್ನಲ್ಲೇ ಎದೆನೋವು ಕಾಣಿಸಿಕೊಂಡು ಆರೋಗ್ಯದಲ್ಲಿ ಏರುಪೇರು ಆದ ಹಿನ್ನೆಲೆಯಲ್ಲಿ ಅವರನ್ನು ಜಿಲ್ಲಾಸ್ಪತ್ರೆಯ ಐಸಿಯುಗೆ ಶಿಫ್ಟ್ ಮಾಡಲಾಗಿದೆ.ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆ ಸಿಬ್ಬಂದಿ ಐಸಿಯುಗೆ ಸ್ಥಳಾಂತರಿಸಿದ್ದಾರೆ.

ಕಾರಾಗೃಹದಲ್ಲಿ ರಾತ್ರಿಯಿಡೀ ಕಳೆದ ಮುರುಘಾ ಶ್ರೀಗಳಿಗೆ ಎದೆನೋವು: ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಶಿಫ್ಟ್
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ ಶಿವಮೂರ್ತಿ ಶಿವಾಚಾರ್ಯ ಶರಣರನ್ನು ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ರಾತ್ರೋರಾತ್ರಿ ಬಂಧಿಸಿ ಮುಂಜಾನೆಯವರೆಗೆ ಜೈಲಿನಲ್ಲಿದ್ದ ಶ್ರೀಗಳು ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಬೆಳಗ್ಗೆ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ.

ಲೈಂಗಿಕ ದೌರ್ಜನ್ಯ ಆರೋಪ: ಮುರುಘಾ ಶ್ರೀ ಬಂಧನ, ಮಠದಿಂದಲೇ ಕರೆದೊಯ್ದ ಪೊಲೀಸರು!
ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಬಂಧಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.

ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ತನಿಖಾ ವರದಿ ಕೇಳಿದ ಎನ್ ಸಿಪಿಸಿಆರ್
ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಪ್ರಭಾವಿ ಪ್ರಸಿದ್ಧ ಮುರುಘಾ ಮಠದ ಪ್ರಧಾನ ಮಠಾಧೀಶ ಡಾ ಶಿವಮೂರ್ತಿ ಶಿವಾಚಾರ್ಯರ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪದ ಕುರಿತು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು (NCPCR) ಕರ್ನಾಟಕ ಪೊಲೀಸರಿಂದ ತನಿಖಾ ವರದಿಯನ್ನು ಕೇಳಿದೆ.

ಚಿತ್ರದುರ್ಗ: ನ್ಯಾಯಾಲಯದಲ್ಲಿ ಮುರುಘಾ ಮಠದ ಶ್ರೀಗಳ ವಿರುದ್ಧ ಸಂತ್ರಸ್ತ ಬಾಲಕಿಯರ ಹೇಳಿಕೆ ದಾಖಲು
ಮುರುಘಾ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರು ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಸಂತ್ರಸ್ತ ಇಬ್ಬರು ಅಪ್ರಾಪ್ತ ಬಾಲಕಿಯರು ಚಿತ್ರದುರ್ಗದ ಒಂದನೇ ಹೆಚ್ಚುವರಿ ಜಿಲ್ಲಾಸ್ಪತ್ರೆ ಮತ್ತು ಸೆಷನ್ಸ್ ಎದುರು ಮಂಗಳವಾರ ಹೇಳಿಕೆಯನ್ನು ದಾಖಲಿಸಿದ್ದಾರೆ.

ನನ್ನ ವಿರುದ್ಧ ಪಿತೂರಿ, ಯಾವುದೇ ಪಲಾಯನವಾದ ಇಲ್ಲ, ತನಿಖೆಗೆ ಸಂಪೂರ್ಣ ಸಹಕಾರ: ಮುರುಘಾ ಶ್ರೀ
ನನ್ನ ವಿರುದ್ಧ ಮುರುಘಾ ಮಠದ ಒಳಗಡೆ ನಡೆಯುತ್ತಿದ್ದ ಪಿತೂರಿ ಇದೀಗ ಹೊರಗಡೆ ನಡೆಯುತ್ತಿದೆ ಎಂದು ಮರಾಧೀಶ ಡಾ. ಶಿವಮೂರ್ತಿ ಶರಣರು ಸೋಮವಾರ ಹೇಳಿದರು.

