chitradurga

'ಒಮಿಕ್ರಾನ್' ಕಟ್ಟೆಚ್ಚರ: ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಕಡ್ಡಾಯ ಕೋವಿಡ್ ಟೆಸ್ಟ್ ನಿಯಮ ಹೊರಡಿಸಿದ ಚಿತ್ರದುರ್ಗ ಜಿಲ್ಲಾಧಿಕಾರಿ
ಕೋವಿಡ್-19 ಸೋಂಕಿಗೆ ಇತ್ತೀಚೆಗೆ ಹೆಚ್ಚಾಗಿ ಕಾಲೇಜು ವಿದ್ಯಾರ್ಥಿಗಳು ಒಳಗಾಗುತ್ತಿರುವುದರಿಂದ ಚಿತ್ರದುರ್ಗದಲ್ಲಿ ಶಿಕ್ಷಣ ಸಂಸ್ಥೆಗಳು ತಮ್ಮ ವಿದ್ಯಾರ್ಥಿಗಳನ್ನು ಕೊರೋನಾ ಪರೀಕ್ಷೆಗೊಳಪಡಿಸುವಂತೆ ಚಿತ್ರದುರ್ಗ ಜಿಲ್ಲಾಡಳಿತ ಸೂಚಿಸಿದೆ. ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಕೊರೋನಾ ಪರೀಕ್ಷೆಯನ್ನು ಕಡ್ಡಾಯ ಮಾಡಲಾಗಿದೆ.

ಚಿತ್ರದುರ್ಗ: ಮಳೆಯಿಂದ ಗೋಡೆ ಕುಸಿದು ಮೂವರು ದುರ್ಮರಣ
ಗುರುವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಗೋಡೆ ಕುಸಿದು ದಂಪತಿ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ.

ರಾಜ್ಯಾದ್ಯಂತ ನ.11ಕ್ಕೆ ಒನಕೆ ಓಬವ್ವ ಜಯಂತಿ ಆಚರಣೆಗೆ ಸರ್ಕಾರ ಆದೇಶ
ನವೆಂಬರ್ 11ರಂದು ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿಯನ್ನಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಚಿತ್ರದುರ್ಗ: ಕೋಡಿಹಳ್ಳಿ ಶ್ರೀ ಆದಿಜಾಂಬವ ಮಹಾಸಂಸ್ಥಾನ ಮಠದ ಹಿರಿಯ ಶ್ರೀಗಳು ಲಿಂಗೈಕ್ಯ
ಹಿರಿಯೂರು ತಾಲೂಕು ಕೋಡಿಹಳ್ಳಿ ಶ್ರೀ ಆದಿಜಾಂಬವ ಮಹಾಸಂಸ್ಥಾನ ಮಠದ ಹಿರಿಯ ಶ್ರೀಗಳಾದ ಮಾರ್ಕಾಂಡಮುನಿ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ ಎಂದು ತಿಳಿದುಬಂದಿದೆ.

ಪುನೀತ್ ಗೆ ಮರಣೋತ್ತರವಾಗಿ ಪ್ರತಿಷ್ಠಿತ 'ಬಸವಶ್ರೀ ಪ್ರಶಸ್ತಿ: ಶಿವಮೂರ್ತಿ ಮುರುಘಾ ಶರಣರು
ಕಳೆದ ಶುಕ್ರವಾರ ನಿಧನರಾದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರತಿಷ್ಠಿತ 'ಬಸವಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.

ನ 8, 9 ರಂದು ಎರಡು ದಿನ ರಾಜ್ಯಮಟ್ಟದ ಬುಡಕಟ್ಟು ಉತ್ಸವ: ಸಚಿವ ಬಿ ಶ್ರೀರಾಮುಲು
ಚಿತ್ರದುರ್ಗದಲ್ಲಿ ನವೆಂಬರ್ 8 ಹಾಗೂ 9 ರಂದು ಎರಡು ದಿನಗಳ ಕಾಲ ರಾಜ್ಯಮಟ್ಟದ ಬುಡಕಟ್ಟು ಉತ್ಸವ ಹಮ್ಮಿಕೊಳ್ಳಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಶ್ರೀ ಮುರುಘಾ ಶರಣರ ಕುರಿತಾದ ಕಾಫಿ ಟೇಬಲ್ ಬುಕ್ ಲೋಕಾರ್ಪಣೆ: ಮಠಾಧೀಶರಾಗಿ 30 ವರ್ಷ ಪೂರೈಸಿದ ಶ್ರೀಗಳು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮೀಜಿ, ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಸಂಸ್ಥೆಯ ಹಿರಿಯ ಪ್ರಧಾನ ವ್ಯವಸ್ಥಾಪಕ ಪಿ.ಸುರೇಶ್ ಕುಮಾರ್ ಹಾಗೂ ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರ ಅವರು ಹಾಜರಿದ್ದರು.

ಚಿತ್ರದುರ್ಗ: ಒಂದೇ ಕುಟುಂಬದ ನಾಲ್ವರ ಸಾವಿಗೆ ಟ್ವಿಸ್ಟ್: ಅಪ್ರಾಪ್ತ ಮಗಳಿಂದಲೇ ಮನೆಮಂದಿಗೆಲ್ಲಾ ವಿಷಪ್ರಾಶನ!
ಕಳೆದ ಮೂರು ತಿಂಗಳ ಹಿಂದೆ ಚಿತ್ರದುರ್ಗ ಜಿಲ್ಲೆಯಲ್ಲಿ ವಿಷ ಆಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಸೌರ ವಿದ್ಯುತ್ ನಿಂದ ಬದುಕು: ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ಬಡ ಕುಟುಂಬಗಳಿಗೆ ಆಸರೆಯಾದ ಸೆಲ್ಕೊ ಫೌಂಡೇಶನ್
ಕೋವಿಡ್-19 ಸಾಂಕ್ರಾಮಿಕ ಜಗತ್ತಿನಾದ್ಯಂತ ಪರಿಣಾಮ ಬೀರಿದೆ. ವಿವಿಧ ವರ್ಗಗಳ ಜನರಿಗೆ ವಿವಿಧ ರೀತಿಯಲ್ಲಿ ತೊಂದರೆಯನ್ನುಂಟುಮಾಡಿದೆ. ಸಾವಿರಾರು ಮಂದಿ ಬೀದಿಗೆ ಬಂದಿದ್ದಾರೆ. ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿದ್ದಾರೆ. ಜನರಿಗೆ ಈ ಕೋವಿಡ್-19 ಸಾಂಕ್ರಾಮಿಕ ಭಾವನಾತ್ಮಕವಾಗಿ, ಮಾನಸಿಕವಾಗಿ ಮತ್ತು ಶಾರೀರಿಕವಾಗಿ ಕೂಡ ಒತ್ತಡ,ಆತಂಕವನ್ನುಂಟುಮಾಡಿದೆ.

