CID

ಕೆಇಎ ನೇಮಕಾತಿ ಪರೀಕ್ಷೆ ಹಗರಣ; ಆರ್‌ಡಿ ಪಾಟೀಲ್ ಸೇರಿ 12 ಆರೋಪಿಗಳ ವಿರುದ್ಧ ಕೆಸಿಒಸಿಎ ಕಾಯ್ದೆಯಡಿ ಪ್ರಕರಣ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಹಗರಣದ ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ಇಲಾಖೆ (ಸಿಐಡಿ) ಪ್ರಕರಣಕ್ಕೆ ಸಂಬಂಧಿಸಿದಂತೆ 12 ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೆಸಿಒಸಿಎ) ಯನ್ನು ಜಾರಿಗೊಳಿಸಿದೆ.

ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ
ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.

ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಮತ್ತೊರ್ವ ನರ್ಸ್ ಬಂಧನ; ಸಿಐಡಿ ತನಿಖೆ ಆರಂಭ
ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಹೆಣ್ಣು ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಮತ್ತೋರ್ವ ನರ್ಸ'ನ್ನು ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದು, ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ.

ಭ್ರೂಣ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ, ಇಬ್ಬರು ಅಧಿಕಾರಿಗಳ ಅಮಾನತು- ದಿನೇಶ್ ಗುಂಡೂರಾವ್
ಭ್ರೂಣ ಹತ್ಯೆ ಜಾಲವನ್ನು ಬುಡ ಸಮೇತ ಕಿತ್ತು ಹಾಕಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಜೊತೆ ಚರ್ಚೆ ನಡೆಸಿ ಮಂಡ್ಯದಲ್ಲಿನ ಭ್ರೂಣ ಹತ್ಯೆ ಪ್ರಕರಣವನ್ನು 'ಸಿಐಡಿ' ತನಿಖೆಗೆ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಹಾಸನ: ಕೃಷ್ಣೇಗೌಡ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ
ಗ್ರಾನೈಟ್ ಉದ್ಯಮಿ, ಮಾಜಿ ಸಚಿವ ಹೆಚ್ ಡಿ ರೇವಣ್ಣ ಆಪ್ತ ಕೃಷ್ಣೇಗೌಡ ಹತ್ಯೆ ಪ್ರಕರಣವನ್ನು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಸಿಐಡಿಗೆ ವಹಿಸಿದ್ದಾರೆ.

ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಆರ್ ಡಿ ಪಾಟೀಲ್ 9 ದಿನ ಸಿಐಡಿ ವಶಕ್ಕೆ
ಬ್ಲೂಟೂತ್ ಸಾಧನ ಬಳಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನೇಮಕಾತಿ ಪರೀಕ್ಷೆ ಬರೆದ ಅಕ್ರಮ ಪ್ರಕರಣದ ಬಂಧಿತ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್'ನನ್ನು ಸಿಐಡಿ ಪೊಲೀಸರು ಬುಧವಾರ ವಶಕ್ಕೆ ಪಡೆದುಕೊಂಡಿದ್ದಾರೆ.

ಬೋವಿ ನಿಗಮದ ಮಾಜಿ ಎಂಡಿ, ಸಿಬ್ಬಂದಿಗಳಿಂದ 97 ಕೋಟಿ ರೂಪಾಯಿ ದುರುಪಯೋಗ: ಸಿಐಡಿ ವರದಿ ಸಲ್ಲಿಕೆ
ಕರ್ನಾಟಕ ಬೋವಿ ಅಭಿವೃದ್ಧಿ ನಿಗಮಕ್ಕೆ (KBDC) ಉದ್ಯೋಗ ಯೋಜನೆಯಡಿ ರಾಜ್ಯ ಸರ್ಕಾರ ನೀಡಿದ್ದ 97 ಕೋಟಿ ರೂಪಾಯಿಗೂ ಅಧಿಕ ಮೊತ್ತ ಹಣವನ್ನು 500 ಮಂದಿ ಫಲಾನುಭವಿಗಳ ಹೆಸರಿನಲ್ಲಿ ಅಕ್ರಮವಾಗಿ ಬಳಕೆ ಮಾಡಲಾಗಿದೆ ಎಂದು ಅಪರಾಧ ತನಿಖಾ ಇಲಾಖೆ (CID) ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ.

ಎಫ್'ಡಿಎ ಪರೀಕ್ಷೆಯಲ್ಲಿ ಅಕ್ರಮ: ಕೊನೆಗೂ ಸಿಐಡಿ ತನಿಖೆಗೆ ಸರ್ಕಾರ ಆದೇಶ
ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದ ಪರೀಕ್ಷಾ ಅಕ್ರಮ ಪ್ರಕರಣವನ್ನು ರಾಜ್ಯ ಗೃಹ ಇಲಾಖೆ ಸೂಚನೆ ಮೇರೆಗೆ ಶನಿವಾರ ಅಪರಾಧ ತನಿಖಾ ವಿಭಾಗಕ್ಕೆ (ಸಿಐಡಿ) ವರ್ಗಾಯಿಸಲಾಗಿದೆ.

ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಗೃಹ ಸಚಿವ ಡಿ. ಪರಮೇಶ್ವರ್
ಕಲಬುರಗಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಶಿವಕುಮಾರ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

