ರಾಜ್ಯಇನ್ಮುಂದೆ ಆಯ್ದ ಅಂಚೆ ಕಚೇರಿಗಳಲ್ಲಿ ವಿದ್ಯುತ್, ನೀರು, ಗ್ಯಾಸ್ ಬಿಲ್ ಪಾವತಿಸುವ ಸೌಲಭ್ಯ
ರಾಜ್ಯದ 800ಕ್ಕೂ ಹೆಚ್ಚು ಅಂಚೆ ಕಚೇರಿಗಳಲ್ಲಿ ಇನ್ನು ಮುಂದೆ ನಾಗರಿಕರು ವಿದ್ಯುತ್, ಗ್ಯಾಸ್ ಮತ್ತು ನೀರಿನ ಬಿಲ್ ಪಾವತಿಸಬಹುದು, ಜೀವ ವಿಮೆ, ಸಾಮಾನ್ಯ ವಿಮೆ ಪಾಲಿಸಿಗಳು, ಇಎಂಐಗಳನ್ನು ಸಹ ಪಾವತಿಸಬಹುದು ಹಾಗೂ ಸಾಲಗಳಿಗೆ ಆನ್ ಲೈನ್ ಅರ್ಜಿಯನ್ನು ಸಹ ಅಂಚೆ ಕಚೇರಿ ಮೂಲಕ ಭರ್ತಿ ಮಾಡಬಹುದು.