Citizenship Act

ಬೆಂಗಳೂರು: ಏಕಾಂಗಿಯಾಗಿ ಪ್ರತಿಭಟಿಸುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ, ಮುಂದುವರೆದ ಬಿಗಿ ಭದ್ರತೆ
ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ನಗರದ ಟೌನ್ ಹಾಲ್ ಬಳಿ ಒಬ್ಬೊಂಟಿಯಾಗಿ ಪ್ರತಿನಡೆಸುತ್ತಿದ್ದ ವ್ಯಕ್ತಿಯೋರ್ವನ ಮನವೊಲಿಸಿ ಪೊಲೀಸರು ಆತನ್ನನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಬೂದಿ ಮುಚ್ಚಿದ ಕೆಂಡ: ಕೆಲವೆಡೆ ಕಲ್ಲು ತೂರಾಟ; ಜಿಲ್ಲೆಯಾದ್ಯಂತ ಸ್ವಯಂ ಪ್ರೇರಿತ ಬಂದ್, ಕರ್ಫ್ಯೂ ಸಡಿಲಿಕೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವ್ಯಾಪಕ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸರ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟ ಘಟನೆ ನಂತರ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದ ಮಂಗಳೂರು ನಗರದಲ್ಲಿ ಕರ್ಫ್ಯೂ ಮುಂದುವರಿದಿದ್ದು ಶುಕ್ರವಾರ ಉದ್ವಿಗ್ನ ವಾತಾವರಣವಿದೆ.

ಮಂಗಳೂರಿನಲ್ಲಿ ಗುಂಡೇಟಿಗೆ 2 ಬಲಿ: 48 ಗಂಟೆ ಇಂಟರ್ ನೆಟ್ ಸ್ಧಗಿತ; 22ರವರೆಗೆ ಕರ್ಫ್ಯೂ ಜಾರಿ!
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರನ್ನು ಹತ್ತಿಕ್ಕುವ ಸಲುವಾಗಿ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಮೃತಪಟ್ಟಿದ್ದಾರೆ. ಇನ್ನು ಜಿಲ್ಲೆಯಾದ್ಯಂತ ಮುಂದಿನ 48 ಗಂಟೆ ಇಂಟರ್ ನೆಟ್ ಸ್ಧಗಿತಗೊಳಿಸಲಾಗಿದ್ದು 22ರವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಪೌರತ್ವ ಕಿಚ್ಚು: ಮಂಗಳೂರಿನಲ್ಲಿ ಪೊಲೀಸರ ಗುಂಡೇಟಿಗೆ ಇಬ್ಬರು ಬಲಿ!
ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದು ಹಿಂಸಾಚಾರದ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ.

ವಿದೇಶಿ ಹಿಂದೂ ವಲಸಿಗರಿಗೆ ನೀವು ಎಲ್ಲಿ ನೆಲೆ ಕಲ್ಪಿಸುತ್ತೀರಿ?: ಕೇಂದ್ರಕ್ಕೆ ಉದ್ಧವ್ ಠಾಕ್ರೆ
ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ದೇಶದಲ್ಲಿ ವಿದೇಶಿ ಹಿಂದೂ ಅಕ್ರಮ ವಲಸಿಗರಿಗೆ ನೀವು ಎಲ್ಲಿ ಮತ್ತು ಹೇಗೆ ನೆಲೆ ಕಲ್ಪಿಸುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ 2003ರಲ್ಲಿ ಪೌರತ್ವ ಕಾಯ್ದೆಗೆ ಬೆಂಬಲಿಸಿದ್ದರು: ವಿಡಿಯೊ ಬಿಡುಗಡೆ ಮಾಡಿದ ಬಿಜೆಪಿ
ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ 2003ರಲ್ಲಿ ಅದರ ಪರವಾಗಿತ್ತೇ ಎಂಬ ಪ್ರಶ್ನೆ ಕಾಡುತ್ತಿದೆ. ಇದಕ್ಕೆ ಕಾರಣ ಬಿಜೆಪಿ ಗುರುವಾರ 2003ರಲ್ಲಿ ರಾಜ್ಯಸಭೆಯಲ್ಲಿ ನಡೆದ ಕಲಾಪದ ವಿಡಿಯೊ ತುಣುಕನ್ನು ಹೊರಬಿಟ್ಟಿದ್ದು ಅದರಲ್ಲಿ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಪೌರತ್ವ ತಿದ್ದುಪಡಿ ಮಸೂದೆ ಜಾರಿಗೆ ತರಲು ಮನವ

ಪೌರತ್ವ ವಿರೋಧಿಸಿ ಪ್ರತಿಭಟನೆ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡಿ.21ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿ
ಪೌರತ್ವ ಕಾಯ್ದೆ ವಿರೋಧಿಸಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿರುವುದರಿಂದ ಮುಂಜಾಗೃತ ಕ್ರಮವಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡಿಸೆಂಬರ್ 21ರವರೆಗೂ ನಿಷೇಧಾಜ್ಞೆ ಹೇರಲಾಗಿದೆ.

ನಾವು ಬೀದಿಗಿಳಿದರೆ ನಿಮ್ಮ ಗತಿ ಏನಾಗುತ್ತದೆ ಎಂಬುದನ್ನು ಆಲೋಚಿಸಿ: ಯು.ಟಿ.ಖಾದರ್‌ಗೆ ಸಿ.ಟಿ.ರವಿ ಎಚ್ಚರಿಕೆ
ಪೌರತ್ವ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸಿದ್ದೇ ಆದಲ್ಲಿ ರಾಜ್ಯ ಹೊತ್ತಿ ಉರಿಯಲಿದೆ ಎಂಬ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಪ್ರವಾಸೋದ್ಯಮ, ಕನ್ನಡ ಸಂಸ್ಕೃತಿ ಸಚಿವ ಸಿ.ಟಿ. ರವಿ...

ವಿಪಕ್ಷಗಳ ವಿರೋಧವಿದ್ದರೂ ಪೌರತ್ವ ಕಾಯ್ದೆ ಜಾರಿಗೆ ತಂದೆ ತರ್ತೀವಿ: ಅಮಿತ್ ಶಾ ಸವಾಲು
ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರವಾದಾಗಿನಿಂದಲೂ ದೇಶದಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಪಕ್ಷಗಳ ವಿರೋಧವಿದ್ದರೂ ಪೌರತ್ವ ಕಾಯ್ದೆ ಜಾರಿಗೆ ತಂದೆ ತರ್ತೀವಿ ಎಂದು ಸವಾಲು ಹಾಕಿದ್ದಾರೆ.

