Citizenship Bill

ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ: ಮೋದಿ ಸರ್ಕಾರದಿಂದ ಮತ್ತೊಂದು ಐತಿಹಾಸಿಕ ಕಾನೂನು
ಭಾರತಕ್ಕೆ ವಲಸೆ ಬಂದಿರುವ ಅಫ್ಘಾನಿಸ್ತಾನ, ಬಾಂಗ್ಲಾದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಇಲ್ಲಿನ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯಲ್ಲಿ ಡಿ.11 ರಂದು ಅಂಗೀಕಾರ ದೊರೆತಿದೆ.

ಪೌರತ್ವ ಮಸೂದೆ ವಿರೋಧಿಸಿ ಪ್ರತಿಭಟನೆ: ಗುವಾಹಟಿಯಲ್ಲಿ ಕರ್ಫ್ಯೂ, ಅಸ್ಸಾಂನಲ್ಲಿ ಇಂಟರ್‌ನೆಟ್ ಸೇವೆ ಸ್ಧಗಿತ!
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಈಶಾನ್ಯ ಭಾರತದ ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು ತ್ರಿಪುರಕ್ಕೆ ಭಾರತೀಯ ಸೇನೆಯನ್ನು ನಿಯೋಜಿಸಲಾಗಿದ್ದು ಅಸ್ಸಾಂನಲ್ಲಿ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಸಂವಿಧಾನ ಧ್ವಂಸಗೊಳಿಸಲಾಗುತ್ತಿದೆ, ಕೋರ್ಟ್ ಪೌರತ್ವ ತಿದ್ದುಪಡಿ ಮಸೂದೆ ತಿರಸ್ಕರಿಸುತ್ತೆ: ಚಿದಂಬರಂ
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೇಶದ ಹಲವು ರಾಜ್ಯಗಳಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿದ್ದು, ಮತ್ತೊಂದೆಡೆ ರಾಜ್ಯಸಭೆಯಲ್ಲಿ ಕಾವೇರಿದ ಚರ್ಚೆ ನಡೆಯುತ್ತಿದೆ.

ಪೌರತ್ವ ತಿದ್ದುಪಡಿ ಮಸೂದೆ ಭಾರತೀಯ ಮುಸ್ಲಿಮರ ಮೇಲೆ ಯಾವುದೇ ಪರಿಣಾಮವಿಲ್ಲ: ರಾಜ್ಯಸಭೆಯಲ್ಲಿ ಅಮಿತ್ ಶಾ
ದೇಶದಾದ್ಯಂತ ಭಾರೀ ಚರ್ಚೆ ಹಾಗೂ ವಿರೋಧಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಮಂಡನೆ ಮಾಡಿದ್ದು, ಚರ್ಚೆ ಆರಂಭಗೊಂಡಿದೆ.

ಪೌರತ್ವ ಮಸೂದೆ: ಪ್ರತಿಪಕ್ಷಗಳು ಪಾಕಿಸ್ತಾನ ಭಾಷೆಯಲ್ಲಿ ಮಾತನಾಡುತ್ತಿವೆ- ಪ್ರಧಾನಿ ಮೋದಿ
ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಪೌರತ್ವ ತಿದ್ದುಪಡಿ ಮಸೂದೆ ಬಗ್ಗೆ ಪ್ರತಿಪಕ್ಷಗಳು ಪಾಕಿಸ್ತಾನದ ಭಾಷೆಯಲ್ಲಿ ಮಾತನಾಡುತ್ತಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿರುಗೇಟು ನೀಡಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆ:ಈಶಾನ್ಯ ರಾಜ್ಯಗಳಲ್ಲಿ ತೀವ್ರಗೊಂಡ ಪ್ರತಿಭಟನೆ, ತ್ರಿಪುರಾದಲ್ಲಿ ಮೊಬೈಲ್ ಸಂಪರ್ಕ ಕಡಿತ
ಕೇಂದ್ರ ಸರ್ಕಾರದ ಉದ್ದೇಶಿತ ಪೌರತ್ವ ತಿದ್ದುಪಡಿ ಮಸೂದೆಗೆ ಈಶಾನ್ಯ ರಾಜ್ಯಗಳ ಜನರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು ನಿನ್ನೆಯಿಂದ ಪ್ರತಿಭಟನೆ, ಕೋಲಾಹಲ ತೀವ್ರವಾಗಿದೆ.

ಪೌರತ್ವ ಮಸೂದೆಗೆ ಸೇನಾ ಬೆಂಬಲ ಇಲ್ಲ, ದೇಶದ ಬಗ್ಗೆ ಬಿಜೆಪಿಗೆ ಮಾತ್ರ ಕಾಳಜಿ ಎಂಬುದು ಭ್ರಮೆ: ಠಾಕ್ರೆ
ಲೋಕಸಭೆಯಲ್ಲಿ ನಮ್ಮ ಪಕ್ಷ ಎತ್ತಿದ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡುವವರೆಗೆ ರಾಜ್ಯಸಭೆಯಲ್ಲಿ ಪೌರತ್ವ (ತಿದ್ದುಪಡಿ) ಮಸೂದೆಗೆ ಬೆಂಬಲ ನೀಡುವುದಿಲ್ಲ ಎಂದು ಶಿವಸೇನಾ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮಂಗಳವಾರ ಹೇಳಿದ್ದಾರೆ.

ಪೌರತ್ವ ಸಾಬೀತು ಪಡಿಸಲು ಯಾವುದೇ ದಾಖಲೆ ಸಲ್ಲಿಸುವುದಿಲ್ಲ: ಸಸಿಕಾಂತ್ ಸೆಂಥಿಲ್
ತನ್ನ ಪೌರತ್ವ ಸಾಬೀತು ಪಡಿಸಲು ಯಾವುದೇ ರೀತಿಯ ದಾಖಲೆ ಸಲ್ಲಿಸುವುದಿಲ್ಲ ಎಂದು ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾಜಿ ಐ.ಎ.ಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಖಾರವಾಗಿ ಪತ್ರ ಬರೆದಿದ್ದಾರೆ.

ಪೌರತ್ವ ಮಸೂದೆಗೆ ಬೆಂಬಲ; ನಿತೀಶ್, ಜೆಡಿಯು ವಿರುದ್ಧ ಪ್ರಶಾಂತ್ ಕಿಶೋರ್ ಅಸಮಾಧಾನ
ಕೇಂದ್ರ ಗೃಹಸಚಿವ ಅಮಿತ್ ಶಾ ಮಂಡಿಸಿದ ಪೌರತ್ವ ತಿದ್ದುಪಡಿ ಮಸೂದೆಗೆ ಬೆಂಬಲ ನೀಡಿದ ವಿಚಾರವಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ಜೆಡಿಯು ಪಕ್ಷದ ವಿರುದ್ಧ ಖ್ಯಾತ ರಾಜಕೀಯ ತಂತ್ರಜ್ಞ ಹಾಗೂ ಜೆಡಿಯು ಮುಖಂಡ ಪ್ರಶಾಂತ್ ಕಿಶೋರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

