ರಾಜಕೀಯಬಂಡಾಯವೆದ್ದಿಲ್ಲ, ಕತ್ತಿ ಮನೆಯಲ್ಲಿ ರೊಟ್ಟಿ ತಿನ್ನಲು ಹೋಗಿದ್ದೆವು: ಯತ್ನಾಳ್
ಕತ್ತಿ ಮನೆಯಲ್ಲಿ ರೊಟ್ಟಿ ತಿನ್ನಲು ಹೋಗಿದ್ದೆವು, ಯಡಿಯೂರಪ್ಪ ವಿರುದ್ಧ ಅಸಮಾಧಾನ ಚರ್ಚೆ ಆಗಿಲ್ಲ. ಲೋಕಾಭಿರಾಮವಾಗಿ ಮಾತಾಡಿದ್ದೇವೆ. ಸರ್ಕಾರ ಕೆಡುವ ಕೆಲಸ ಮಾಡುವುದಿಲ್ಲ. ನಾವು ಒಟ್ಟಿಗೆ ಸೇರಿ ಹರಟೆ ಹೊಡೆದಿದ್ದೇವೆ ಎಂದು ಬಿಜೆಪಿ ಹಿರಿಯ ನಾಯಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ' ರಾಜ್ಯ ಬಿಜೆಪಿಯಲ್ಲಿನ ಬಂಡಾಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.