CM, ALL legislators

ಇಂದಿನಿಂದ ರಾಜ್ಯದಲ್ಲಿ ಹೊಸ ಸರ್ಕಾರ: 2ನೇ ಬಾರಿಗೆ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ, ಆಹ್ವಾನ ನೀಡದ್ದಕ್ಕೆ ಕೇರಳ ಸಿಪಿಐ(ಎಂ) ಅಸಮಾಧಾನ
ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಭೂತಪೂರ್ವ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ಸಿಗ ಸಿದ್ದರಾಮಯ್ಯ ಅವರು 2ನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮೊದಲ ಬಾರಿ ಉಪ ಮುಖ್ಯಮಂತ್ರಿಯಾಗಿ ಶನಿವಾರ ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಸಿಎಂ ಆಯ್ಕೆ ಪ್ರಹಸನ ಮುಕ್ತಾಯ: ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್ ಒಬ್ಬರೇ ಡಿಸಿಎಂ; ಎಐಸಿಸಿ ಅಧಿಕೃತ ಘೋಷಣೆ
ರಾಜ್ಯದ ಮುಖ್ಯಮಂತ್ರಿ ಆಯ್ಕೆ ಪ್ರಹಸನ ಕೊನೆಗೂ ಮುಕ್ತಾಯಗೊಂಡಿದ್ದು, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ... ಅಧಿಕೃತ ಘೋಷಣೆ ಬಾಕಿ: ವರದಿ
ಬಹುಮತದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ಕೊನೆಗೂ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದ್ದು, ಈ ಕುರಿತು ಅಧಿಕೃತ ಘೋಷಣೆ ಬಾಕಿ ಇದೆ ಎಂದು ಹೇಳಲಾಗಿದೆ.

ತನ್ನ ಶ್ರಮಕ್ಕೆ ಡಿಕೆ ಶಿವಕುಮಾರ್ ಕೂಲಿ ಕೇಳುತ್ತಿದ್ದಾರೆ: ಡಿಕೆ ಸುರೇಶ್
ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಬೇಕೆಂಬುದು ನನ್ನ ಆಸೆ ಎಂದು ಕಾಂಗ್ರೆಸ್ ಸಂಸದ ಡಿಕೆ.ಸುರೇಶ್ ಅವರು ಮಂಗಳವಾರ ಹೇಳಿದ್ದಾರೆ.

ಸಿಎಂ ಹುದ್ದೆ ತಿಕ್ಕಾಟ ನಡುವೆಯೇ ಸಚಿವ ಸ್ಥಾನಕ್ಕಾಗಿ ಕೈ ಪಾಳಯದಲ್ಲಿ ಭರ್ಜರಿ ಲಾಬಿ: ಶುರುವಾಗಲಿದೆ ಹೊಸ ತಲೆನೋವು!
ಮುಖ್ಯಮಂತ್ರ ಆಯ್ಕೆ ಕಗ್ಗಂಟಿನ ನಡುವೆ 10ಕ್ಕೂ ಹೆಚ್ಚು ಸಚಿವ ಸ್ಥಾನದ ಆಕಾಂಕ್ಷಿಗಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಯ್ಯ ಅವರ ಮನೆಗಳಿಗೆ ಪರೇಡ್ ನಡೆಸಿ ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಬೇಕು: ಓಲಾ-ಉಬರ್ ಚಾಲಕರ ಸಂಘ ಒತ್ತಾಯ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಓಲಾ ಮತ್ತು ಉಬರ್ ಕ್ಯಾಬ್ ಚಾಲಕರು ಮತ್ತು ಮಾಲೀಕರ ಸಂಘ ಮತ್ತು ಕರ್ನಾಟಕ ವಾಣಿಜ್ಯ ವಾಹನ ಚಾಲಕರ ಒಕ್ಕೂಟದ ಸದಸ್ಯರು ಸೋಮವಾರ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಶಾಸಕರ ಅಭಿಪ್ರಾಯ ಸಂಗ್ರಹ: ಪ್ರಕ್ರಿಯೆ ಬಳಿಕ ಯಾವುದೇ ಪ್ರತಿಕ್ರಿಯೆ ನೀಡದೆ ಸಿದ್ದರಾಮಯ್ಯ ನಿರ್ಗಮನ!
ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಪ್ರಕ್ರಿಯೆ ಕಸರತ್ತು ಮುಂದುವರೆದಿದ್ದು, ತಡರಾತ್ರಿ 1 ಗಂಟೆ ವರೆಗೂ ನಗರದ ಶಾಂಗ್ರಿಲಾ ಹೊಟೆಲ್ ನಲ್ಲಿ ಕಾಂಗ್ರೆಸ್ ಹೈಕಮಾಂಡ್ ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿದರು.

ರಾಜ್ಯ ವಿಧಾನಸಭಾ ಚುನಾವಣೆ 2023: ಸ್ಪಷ್ಟ ಬಹುಮತದತ್ತ ಕಾಂಗ್ರೆಸ್, ಸಿಎಂ ಆಯ್ಕೆಗೆ ಶುರುವಾಯ್ತು ಕಸರತ್ತು, ಯಾರಿಗೆ ಸಿಗಲಿದೆ ಪಟ್ಟ?
ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳಲು ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತಪಡೆದು ಸರ್ಕಾರ ರಚಿಸುವ ಸಾಧ್ಯತೆಗಳು ಹೆಚ್ಚಾಗತೊಡಗಿದೆ. ಸ್ಪಷ್ಟಬಹುಮತದತ್ತ ಕಾಂಗ್ರೆಸ್ ಸಾಗಿದ್ದು, ಈಗಾಗಲೇ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ...

ರಾಮನಗರದಿಂದ ನಾಲ್ವರು ಸಿಎಂ ಆಗಿದ್ದಾರೆ, ನನಗೂ ಅವಕಾಶ ಕೊಡಿ: ಡಿಕೆ.ಶಿವಕುಮಾರ್
ರಾಮನಗರ ಜಿಲ್ಲೆಯಿಂದ ನಾಲ್ವರು ಮುಖ್ಯಮಂತ್ರಿ ಆಗಿದ್ದಾರೆ. ಈ ಬಾರಿ ನನಗೂ ಅವಕಾಶ ಕೊಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ಜನರಲ್ಲಿ ಮನವಿ ಮಾಡಿದ್ದಾರೆ.

