CM B S Yedyurappa

ಬೆಳಗಾವಿಯಲ್ಲಿ ಅತಿವೃಷ್ಟಿಯಿಂದ ಅಪಾರ ಹಾನಿ, ಜನರು ತತ್ತರ: ನಾಳೆ ಜಿಲ್ಲೆಗೆ ಸಿಎಂ ಯಡಿಯೂರಪ್ಪ ಭೇಟಿ
ಧಾರಾಕಾರ ಮಳೆಗೆ ಕುಂದಾನಗರಿ ಬೆಳಗಾವಿ ತತ್ತರಿಸಿ ಹೋಗಿದೆ, ಉತ್ತರ ಕರ್ನಾಟಕ್ಕೆ ಮಳೆಯ ಪ್ರವಾಹ ತೀವ್ರ ಮಟ್ಟದಲ್ಲಿ ಹೊಡೆತ ನೀಡಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ನಾಳೆ ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಸ್ಥಿತಿಗಳನ್ನು ಅವಲೋಕಿಸಲಿದ್ದಾರೆ.

ಯಾವುದೂ ಶಾಶ್ವತವಲ್ಲ, ನಾವೇನು ಶಾಶ್ವತವಾಗಿ ಮಂತ್ರಿಗಳಾಗಿ ಇರುವುದಿಲ್ಲ, ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಲಾರೆ: ಸಿ.ಪಿ. ಯೋಗೇಶ್ವರ್
ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಬದಲಾವಣೆ ಸುದ್ದಿ ಭಾರೀ ಸದ್ದು ಮಾಡುತ್ತಿದೆ. ಜುಲೈ 26ಕ್ಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿದ್ದು ಅಂದೇ ಬಿಎಸ್ ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ವದಂತಿ ದಟ್ಟವಾಗಿದೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ವಿರೋಧಿ ಬಣಕ್ಕೆ ಬಿ.ಎಸ್. ಯಡಿಯೂರಪ್ಪ ಖಡಕ್ ಸಂದೇಶ!
ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ರಾಜೀನಾಮೆ ಕೊಡಿ ಅಂತ ಹೈಕಮಾಂಡ್ ಕೇಳಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ವಿರೋಧಿ ಬಣಕ್ಕೆ ಖಡಕ್ ಸಂದೇಶ ನೀಡಿದ್ದಾರೆ.

ಸಿಎಂ ಯಡಿಯೂರಪ್ಪನವರ ಹಗರಣಗಳು ಹೊರಗೆ ಬಂದರೆ ಮಠಾಧೀಶರು ಮಠ ಬಿಟ್ಟು ಹೋಗಬೇಕಾಗುತ್ತದೆ: ಬಸನಗೌಡ ಪಾಟೀಲ್ ಯತ್ನಾಳ್
ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ. ಸಿಎಂ ಬಿಎಸ್ ವೈ ಚಕ್ರವ್ಯೂಹ ವಿರುದ್ಧ ಹೋರಾಡಿ ನಾನು ಅರ್ಜುನನಾಗಿ ಗೆಲ್ಲುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಜುಲೈ 5ರ ನಂತರ ಅನ್ ಲಾಕ್ 3.0 ಜಾರಿ?: ಮುಖ್ಯಮಂತ್ರಿ ನೇತೃತ್ವದಲ್ಲಿ ಇಂದು ಸಭೆ
ಕೋವಿಡ್ 2ನೇ ಅಲೆಯ ಪ್ರಮಾಣ ತೀವ್ರ ಮಟ್ಟದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಳಿಕೆಯಾಗಿರುವುದರಿಂದ ಅನ್ ಲಾಕ್ 3.0 ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಆರಂಭಿಸಲಿದ್ದು, ಈ ಬಗ್ಗೆ ಶನಿವಾರ ನಡೆಯುವ ಸಭೆಯಲ್ಲಿ ತೀರ್ಮಾನಿಸುವ ಸಾಧ್ಯತೆಯಿದೆ.

ಯಡಿಯೂರಪ್ಪನವರನ್ನು ಮುಟ್ಟಿದ್ರೆ ಸುಟ್ಟು ಹೋಗುತ್ತೇವೆ: ಸಚಿವ ಸಿ.ಪಿ. ಯೋಗೇಶ್ವರ್
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ವಿರುದ್ಧ ಕಾರ್ಯತಂತ್ರ ಹೆಣೆಯುವ ಕೆಲಸ ನಾನು ಎಂದಿಗೂ ಮಾಡುವುದಿಲ್ಲ ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಸಿ ಪಿ ಯೋಗೇಶ್ವರ್ ಪುನರುಚ್ಛರಿಸಿದ್ದಾರೆ.

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ನಾನೂ ಜೈಲುವಾಸ ಅನುಭವಿಸಿದ್ದೆ: ಮುಖ್ಯಮಂತ್ರಿ ಯಡಿಯೂರಪ್ಪ
46 ವರ್ಷಗಳ ಹಿಂದೆ ಇದೇ ದಿನ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಯಾವುದೇ ಕಾರಣ ಇಲ್ಲದೆ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿ ದೇಶದ ಜನರು ಕಷ್ಟಪಡುವಂತೆ ಮಾಡಿದ್ದರು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಡಿಯೂರಪ್ಪ ನೆನಪು ಮಾಡಿಕೊಂಡಿದ್ದಾರೆ.

ಸಚಿವ ಎಂಟಿಬಿ ನಾಗರಾಜ್ ಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ: ಬೆಂಗಳೂರು ನಗರ ಮೇಲೆ ಆರ್.ಅಶೋಕ್ ಕಣ್ಣು!
ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಉಸ್ತುವಾರಿ ಸಚಿವರನ್ನಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇಮಕ ಮಾಡಿದ್ದಾರೆ. ಈ ಹಿಂದೆ ಆರ್ ಅಶೋಕ್ ಅವರ ಕೈಯಲ್ಲಿ ಗ್ರಾಮಾಂತರ ಜಿಲ್ಲೆಯ ಉಸ್ತುವಾರಿಯಿತ್ತು.

ರಾಜ್ಯದಲ್ಲಿ ವಯಸ್ಕರಿಗೆ ಉಚಿತ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ
ದೇಶಾದ್ಯಂತ ಜೂ.21ರಿಂದ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ರಾಜ್ಯದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಬೌರಿಂಗ್ ಆಸ್ಪತ್ರೆಯಲ್ಲಿ ಉಚಿತ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು.

