CM B S Yedyurappa

ಪಶು ಪಾಲಕರು ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ
ಭಾರತ ಸರ್ಕಾರವು ಪಶು ಪಾಲಕರು ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ವಿಸ್ತರಿಸಲು ಅನುಮತಿ ನೀಡಿದ್ದು, ಈ ಸೌಲಭ್ಯವನ್ನು ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸುವರ್ಣಸೌಧಕ್ಕೆ ಸರ್ಕಾರಿ ಕಚೇರಿಗಳನ್ನು ಸ್ಥಳಾಂತರಿಸಲು ಕ್ರಮ ವಹಿಸಿ: ಬಿ.ಎಸ್.ಯಡಿಯೂರಪ್ಪ
ರಾಜ್ಯ ಮಟ್ಟದ ಹಲವಾರು ಸರ್ಕಾರಿ ಕಚೇರಿಗಳನ್ನು ಒಂದು ತಿಂಗಳಲ್ಲಿ ಗುರುತಿಸಿ ಬೆಂಗಳೂರಿನಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಸ್ಥಳಾಂತರಿಸುವುದನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಗತವಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.

ರಾಜ್ಯದಲ್ಲಿ ಭಾನುವಾರದ ಸಂಪೂರ್ಣ ಲಾಕ್ ಡೌನ್ ರದ್ದು, ರಾತ್ರಿ 7 ಗಂಟೆಯಿಂದ ಕರ್ಫ್ಯೂ: ಮುಖ್ಯಮಂತ್ರಿ ಕಚೇರಿ ಪ್ರಕಟಣೆ
ಭಾನುವಾರದಂದು ಸಂಪೂರ್ಣ ಲಾಕ್ ಡೌನ್ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ಎಂದಿನಂತೆ ಭಾನುವಾರ ಸಹ ಬೆಳಿಗ್ಗೆ 7 ರಿಂದ ರಾತ್ರಿ 7 ಗಂಟೆವರೆಗೆ ಎಲ್ಲಾ ರೀತಿಯ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.

ಮುಖ್ಯಮಂತ್ರಿಗಳಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಮೆಕ್ಕೆಜೋಳ ಬೆಳೆದ ರೈತರಿಗೆ 500 ಕೋಟಿ ರೂ. ಪ್ಯಾಕೇಜ್ ಘೋಷಿಸಿದ ಸಿಎಂ ಯಡಿಯೂರಪ್ಪ
ಪ್ರಾಕೃತಿಕ ವಿಕೋಪಗಳಲ್ಲಿ ಮೃತಪಟ್ಟ ಕುರಿ, ಮೇಕೆ, ಜಾನುವಾರುಗಳಿಗೆ ತಲಾ 5 ಸಾವಿರ ರೂಪಾಯಿ ಪರಿಹಾರ ಮುಂದುವರೆಸಲಾಗುವುದು. ಮೆಕ್ಕೆಜೋಳ ಬೆಳೆದ ರಾಜ್ಯದ 10 ಲಕ್ಷ ರೈತರಿಗೆ ತಲಾ ಐದು ಸಾವಿರ ರೂಪಾಯಿಯಂತೆ ಪರಿಹಾರ ನೀಡಲಾಗುವುದು. ಈ ಯೋಜನೆಗೆ 500 ಕೋಟಿ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ರೇಷ್ಮೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಅನುದಾನ ನೀಡಲು ಸಚಿವ ಡಾ. ನಾರಾಯಣ ಗೌಡ ಸಿಎಂಗೆ ಮನವಿ
ರೇಷ್ಮೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದು ಸಚಿವ ಡಾ. ನಾರಾಯಣ ಗೌಡ ಸಿಎಂ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.

ಲಾಕ್‌ಡೌನ್ ವಿಸ್ತರಣೆ ಸ್ವಾಗತ; ರೂಪುರೇಷೆ, ಮದ್ಯ ಮಾರಾಟ ಬಗ್ಗೆ ಕೇಂದ್ರದ ಮಾರ್ಗಸೂಚಿಯಂತೆ ನಿರ್ಧಾರ: ಸಿಎಂ ಯಡಿಯೂರಪ್ಪ
ಕೋವಿಡ್-19 ನಿಯಂತ್ರಣಕ್ಕೆ ಮೇ 3ರವರೆಗೆ ಲಾಕ್ ಡೌನ್ ವಿಸ್ತರಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಇನ್ನಷ್ಟು ಕಠಿಣ ಕ್ರಮ ತರಲಾಗುವುದು ಎಂದಿದ್ದಾರೆ.

ಲಾಕ್ ಡೌನ್ ಸಮಯದಲ್ಲಿ ಮಾರ್ಗ ಮಧ್ಯೆ ಅಸುನೀಗಿದ ಗಂಗಮ್ಮ ಕುಟುಂಬಕ್ಕೆ ಸೂಕ್ತ ನೆರವು: ಸಿಎಂ ಯಡಿಯೂರಪ್ಪ
ಲಾಕ್ ಡೌನ್ ಸಂದರ್ಭದಲ್ಲಿ ತನ್ನೂರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಮಾರ್ಗಮಧ್ಯೆ ಅಸೌಖ್ಯಕ್ಕೀಡಾಗಿ ಸರಿಯಾಗಿ ಆಹಾರ ಸಿಗದೆ ಅಸುನೀಗಿದ ರಾಯಚೂರು ಜಿಲ್ಲೆಯ ಸಿಂಧನೂರಿನ ಮಹಿಳೆ ಕುಟುಂಬಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಪಡಿತರ ಚೀಟಿ ಇಲ್ಲದವರಿಗೂ ಆಹಾರ ಧಾನ್ಯಗಳ ವಿತರಣೆ: ಸಿಎಂ ಯಡಿಯೂರಪ್ಪ
ಕೊರೋನಾ ವೈರಸ್ ಸೋಂಕಿನ ತಡೆಗೆ ಲಾಕ್ ಡೌನ್ ಆಗಿರುವುದರಿಂದ ಕೂಲಿ ಕಾರ್ಮಿಕರು ಸೇರಿದಂತೆ ಬಡವರಿಗೆ ಒಂದು ಹೊತ್ತಿನ ಊಟಕ್ಕೂ ತೊಂದರೆಯಾಗಿದ್ದು ಈ ನಿಟ್ಟಿನಲ್ಲಿ ಜನರು ಹಸಿವಿನಿಂದ ಪರಿತಪಿಸಬಾರದು ಎಂದು ಪಡಿತರ ಚೀಟಿ ಇಲ್ಲದವರಿಗೂ ಆಹಾರ ಧಾನ್ಯಗಳನ್ನು ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

