CM Basavaraj Bommai

ಪಂಚಮ ಸಾಲಿ ಸಮುದಾಯ ಮೀಸಲಾತಿಗೆ ಸೂಕ್ತ ನಿರ್ಣಯ; ದಕ್ಷಿಣದಲ್ಲಿ ತುಂಗಾ ಆರತಿ ಮಂಟಪ ನಿರ್ಮಾಣ: ಬೊಮ್ಮಾಯಿ
ಕಾಶಿಯಲ್ಲಿ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿ ಮಂಪಟಗಳನ್ನು ನಿರ್ಮಿಸುವ 30 ಕೋಟಿ ರೂ. ವೆಚ್ಚದ ಯೋಜನೆಗೆ ಮುಂದಿನ ತಿಂಗಳು ನಡೆಯಲಿರುವ ಹರಜಾತ್ರೆ ಸಂದರ್ಭದಲ್ಲಿ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಿಳಿಸಿದರು.

ರಾಜ್ಯದಲ್ಲಿ ಶೀಘ್ರದಲ್ಲೇ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷಾ ಕೇಂದ್ರಗಳ ಹೆಚ್ಚಳ: ಮುಖ್ಯಮಂತ್ರಿ ಬೊಮ್ಮಾಯಿ
ರಾಜ್ಯದಲ್ಲಿ ಶೀಘ್ರದಲ್ಲೇ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬುರುಡೆ ಬೊಮ್ಮಾಯಿ ಮೇಲಿನ ನಿರೀಕ್ಷೆಗಳೆಲ್ಲ ಹುಸಿಯಾಗಿದೆ: ಸಿದ್ದರಾಮಯ್ಯ
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮುಂದಕ್ಕೆ ಕೊಂಡೊಯ್ಯುವ ಕಾಳಜಿ ತೋರಿಸುತ್ತಾರೆ ಎನ್ನುವ ನಿರೀಕ್ಷೆಯಿತ್ತು. ಆದರೆ, ಆ ನಿರೀಕ್ಷೆಗಳೆಲ್ಲ ಈಗ ಹುಸಿಯಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮಧ್ಯಾಹ್ನದ ಬಿಸಿಯೂಟ ಆಹಾರ ಮೆನುವಿನಿಂದ ಮೊಟ್ಟೆ, ಬಾಳೆಹಣ್ಣು ಕೈ ಬಿಡಿ: ಸಿಎಂಗೆ ಸ್ವಾಮೀಜಿಗಳ ಒತ್ತಾಯ
ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದಡಿ 1 ರಿಂದ 8ನೇ ತರಗತಿವರೆಗಿನ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆ ಹಣ್ಣು ನೀಡುವ ಆದೇಶವನ್ನು ಸರ್ಕಾರ ಹಿಂಪಡೆಯಬೇಕೆಂದು ಬಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದ ದೇವರು ನೇತೃತ್ವದಲ್ಲಿನ ಅನೇಕ ಮಠಗಳ ಸ್ವಾಮೀಜಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಎರಡು ಓಮಿಕ್ರಾನ್ ಕೇಸ್ ಪತ್ತೆ ಹಿನ್ನೆಲೆ, ನಾಳೆ ಮಹತ್ವದ ಸಭೆ: ಮುಖ್ಯಮಂತ್ರಿ ಬೊಮ್ಮಾಯಿ
ದೇಶದಲ್ಲಿಯೇ ಮೊದಲಿಗೆ ಬೆಂಗಳೂರಿನಲ್ಲಿ ಕೋವಿಡ್-19 ರೂಪಾಂತರಿ 'ಓಮಿಕ್ರಾನ್' ತಳಿಯ ಕೇಸ್ ಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ನಾಳೆ ಮಹತ್ವದ ಸಭೆ ನಡೆಸಿ, ಹೊಸ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೋವಿಡ್ ಕ್ಲಸ್ಟರ್ ಗಳ ಬಗ್ಗೆ ರಾಜ್ಯ ಸರ್ಕಾರ ವಿಶೇಷ ನಿಗಾ: ಮುಖ್ಯಮಂತ್ರಿ ಬೊಮ್ಮಾಯಿ
ಒಮಿಕ್ರಾನ್ ಹೊಸ ರೂಪಾಂತರಿ ಬಗ್ಗೆ ವಿಶ್ವದ ರಾಷ್ಟ್ರಗಳು ತಬ್ಬಿಬ್ಬುಗೊಂಡಿವೆ. ಈ ಮಧ್ಯೆ, ಹೊಸ ರೂಪಾಂತರಿಯಿಂದ ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರ, ರಾಜ್ಯದಲ್ಲಿ ಯಾವ ರೀತಿಯ ಪರಿಣಾಮ ಉಂಟಾಗುತ್ತದೆ ಅನ್ನೋದರ ಬಗ್ಗೆ ತೀವ್ರ ನಿಗಾ ಇರಿಸಿದ್ದೇವೆ ಅಂತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ
ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಭಾರಿ ಮಳೆ: ರಸ್ತೆ ದುರಸ್ತಿಗೆ 500 ಕೋಟಿ ರೂ., ಸಂಪೂರ್ಣ ಮನೆ ಹಾನಿಗೆ 1 ಲಕ್ಷ ರೂ. ಪರಿಹಾರ- ಸಿಎಂ ಬೊಮ್ಮಾಯಿ
ರಾಜ್ಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಹಾನಿಗೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆ ಮಾಡಿದ್ದು, ರಸ್ತೆ ದುರಸ್ತಿಗೆ 500 ಕೋಟಿ ರೂ ಹಾಗೂ ಸಂಪೂರ್ಣ ಮನೆ ಹಾನಿಗೆ 1 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

ಕೋಲಾರದಲ್ಲಿ ಭಾರಿ ಮಳೆಯಿಂದ ಬೆಳೆ ಹಾನಿ; ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ
ಭಾರಿ ಮಳೆಯಿಂದಾಗಿ ಕೋಲಾರ ಜಿಲ್ಲೆಯಲ್ಲಿ ಸಂಭವಿಸಿದ ಬೆಳೆ ಹಾನಿ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

