CM Basavaraj Bommai

ಜಲಜೀವನ್ ಮಿಷನ್: ನವೆಂಬರ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸಿಇಒಗಳಿಗೆ ಸಿಎಂ ಬೊಮ್ಮಾಯಿ ಸೂಚನೆ
ಜಲ ಜೀವನ್ ಮಿಷನ್ ಯೋಜನೆಯಡಿ ಎರಡು ಹಂತಗಳಲ್ಲಿ ಕಾಮಗಾರಿಗಳು ಪ್ರಾರಂಭವಾಗಿದ್ದು, ಬ್ಯಾಚ್ 1ರಡಿ ಶೇ. 88 ರಷ್ಟು ಕಾಮಗಾರಿಗಳು ಪೂರ್ಣಗೊಂಡಿದೆ. ಉಳಿದ ಕಾಮಗಾರಿಗಳನ್ನು ನವೆಂಬರ್ ಅಂತ್ಯದೊಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ: ರಾಜ್ಯದ 50 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ-ಸಿಎಂ ಬೊಮ್ಮಾಯಿ
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ರಾಜ್ಯದ 50 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಳವಳ್ಳಿಯಲ್ಲಿ ಅತ್ಯಾಚಾರದಿಂದ ಬಾಲಕಿ ಸಾವು: ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ- ಸಿಎಂ ಬೊಮ್ಮಾಯಿ
ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಇತ್ತೀಚಿಗೆ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ರಾಜ್ಯದಲ್ಲಿ ಮಳೆ ಅಬ್ಬರ: ನಾಳೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ- ಮುಖ್ಯಮಂತ್ರಿ ಬೊಮ್ಮಾಯಿ
ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಧೀರ್ಘ ಕಾಲಿಕ ಹಾಗೂ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

'ದಲಿತರ ಮನೆಯ ಊಟ' ಪ್ರಹಸನ, ಸಂಘ ಪರಿವಾರದ ಅಸಲಿ ಮನಸ್ಥಿತಿ ಅನಾವರಣ: ಕಾಂಗ್ರೆಸ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ 'ದಲಿತರ ಮನೆಯ ಊಟ' ಪ್ರಹಸನದಲ್ಲಿ ಸಂಘಪರಿವಾರದ ಅಸಲಿ ಮನಸ್ಥಿತಿ ಅನಾವರಣವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ರಾಜ್ಯದಲ್ಲಿ ಅಕ್ಟೋಬರ್ ತಿಂಗಳಲ್ಲೇ ಮಳೆಗೆ 13 ಜನರ ಸಾವು, ಪರಿಹಾರ ಕಲ್ಪಿಸಲು ಸಿಎಂ ಬೊಮ್ಮಾಯಿ ನಿರ್ದೇಶನ
ಈ ತಿಂಗಳ ಆರಂಭದಿಂದಲೂ ರಾಜ್ಯದ ವಿವಿಧೆಡೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ 13 ಜನರು ಸಾವನ್ನಪ್ಪಿದ್ದು, ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟ ಸಂಭವಿಸಿದ್ದು, ಮಳೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಎಸ್ ಸಿ, ಎಸ್.ಟಿ ಮೀಸಲಾತಿ ಹೆಚ್ಚಳ: ಕಾನೂನು ಬಿಕ್ಕಟ್ಟಿನ ಬಗ್ಗೆ ಸರ್ಕಾರ ನಿಲುವು ಸ್ಪಷ್ಟಪಡಿಸಬೇಕು- ಸಿದ್ದರಾಮಯ್ಯ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಸರ್ಕಾರ ಈ ಸಮುದಾಯವನ್ನು ತಪ್ಪು ದಾರಿಗೆಳೆಯುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ತುಳಿತಕ್ಕೊಳಗಾದವರಿಗೆ ಸಮಾನ ಅವಕಾಶ, ಸ್ವಾಭಿಮಾನದ ಬದುಕು ಕಲ್ಪಿಸಲು ಸರ್ಕಾರ ಬದ್ಧ- ಮುಖ್ಯಮಂತ್ರಿ ಬೊಮ್ಮಾಯಿ
ತುಳಿತಕ್ಕೆ ಒಳಪಟ್ಟ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಆತ್ಮಗೌರವ , ಆತ್ಮಸನ್ಮಾನ , ಸಮಾನ ಅವಕಾಶ ಹಾಗೂ ಸ್ವಾಭಿಮಾನದ ಬದುಕು ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಮುದಾಯ ಆರೋಗ್ಯ ಕೇಂದ್ರಗಳಿಗೆ ಆರು ಕಮಾಂಡರ್ ಸೆಂಟರ್ ಗಳ ಜೋಡಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
24x7 ಗಳಿಗೆ ಆರೋಗ್ಯ ಕೇಂದ್ರಗಳಿಗೆ ಸಲಹೆ ಸೂಚನೆಗಳನ್ನು ನೀಡುವ ಆರು ಕಮಾಂಡರ್ ಸೆಂಟರ್ ಗಳನ್ನು ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಜೋಡಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

