CM Basavaraja Bommai

ಪ್ರವೀಣ್ ನೆಟ್ಟಾರು ಹತ್ಯೆಯಾದ ಬೆಳ್ಳಾರೆಯಲ್ಲಿ ಪರಿಸ್ಥಿತಿ ಹೇಗಿದೆ? ಸದ್ಯದಲ್ಲೆ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರಿನ(Praveen Nettaru) ಹತ್ಯೆ ಖಂಡಿಸಿ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಗುರುವಾರ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದ 'ಜನೋತ್ಸವ' ಕಾರ್ಯಕ್ರಮವನ್ನು ರದ್ದುಪಡಿಸಿದೆ.

ಸಿಎಂ ಬೊಮ್ಮಾಯಿ ಜುಲೈ 25ರಿಂದ ಎರಡು ದಿನ ದೆಹಲಿ ಪ್ರವಾಸ: ಹೈಕಮಾಂಡ್ ಜೊತೆ ಸಂಪುಟ ವಿಸ್ತರಣೆ ಚರ್ಚೆ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇದೇ 25 ಮತ್ತು 26 ರಂದು ದೆಹಲಿ ಪ್ರವಾಸ ಕೈಗೊಂಡು, ಪಕ್ಷ ಸಂಘಟನೆ, ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

'ಮೊದ್ಲು ನಿಮ್ಮ ಅಧಿಕಾರಿಗಳಿಗೆ ಕನ್ನಡ ಕಲ್ಸಿ': ಬೊಮ್ಮಾಯಿಗೆ ನೆಟ್ಟಿಗರ ತರಾಟೆ; ತಿದ್ದುಪಡಿ ಮಾಡಿ ಹೊಸ ಆದೇಶ ಹೊರಡಿಸಿದ ಸರ್ಕಾರ!
ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಪ್ರಧಾನ ಮತ್ತು ಸಾರ್ವಭೌಮ.ಕನ್ನಡಿಗರು ಕನ್ನಡ ಬರೆಯುವಾಗ, ಮಾತನಾಡುವಾಗ, ನಿತ್ಯ ವ್ಯವಹಾರದಲ್ಲಿ ಕನ್ನಡ ಪದಗಳನ್ನು ತಪ್ಪಿಲ್ಲದೆ ಬಳಸಬೇಕಾದ್ದು ಕರ್ತವ್ಯ.

ಪ್ರವಾಹಪೀಡಿತ ಪ್ರದೇಶಗಳ ಜನರ ರಕ್ಷಣೆ, ಪುನರ್ವಸತಿ ಸರ್ಕಾರದ ಆದ್ಯತೆ: ಸಿಎಂ ಬೊಮ್ಮಾಯಿ
ಕರಾವಳಿ, ಮಲೆನಾಡು ಮಾತ್ರವಲ್ಲದೆ ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಸೇರಿದಂತೆ ಗಡಿ ಕರ್ನಾಟಕ ಭಾಗಗಳಲ್ಲಿ ಕೂಡ ವ್ಯಾಪಕ ಮಳೆಯಾಗುತ್ತಿದ್ದು, ಬಹುತೇಕ ಕಡೆ ಪ್ರವಾಹ ಉಂಟಾಗಿದೆ. ಮಳೆ ಸಂಬಂಧಿ ಜೀವಹಾನಿ, ಅವಘಡಗಳು ಸಂಭವಿಸುತ್ತಲೇ ಇದೆ.

ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ, ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ: ಮುಖ್ಯಮಂತ್ರಿ ಬೊಮ್ಮಾಯಿ ಸಮರ್ಥನೆ
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ-ವಿಡಿಯೊ ತೆಗೆಯಬಾರದು ಎಂದು ಸರ್ಕಾರ ಆದೇಶ ಹೊರಡಿಸಿದ ದಿನವೇ ವಾಪಸ್ ಪಡೆದು ನಗೆಪಾಟಲಿಗೀಡಾಗಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ರಾಜ್ಯ ಸರ್ಕಾರ ಯು ಟರ್ನ್: ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೊಗೆ ನಿರ್ಬಂಧ ಆದೇಶ ಮಧ್ಯರಾತ್ರಿ ವಾಪಸ್!
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಅಂದರೆ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ತೆಗೆಯುವುದು, ವಿಡಿಯೊ ಮಾಡುವುದಕ್ಕೆ ನಿರ್ಬಂಧ ಹೇರಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆದಿದೆ.

ಮಳೆ ಹಾನಿ: ಮೂಲಸೌಕರ್ಯ ಪರಿಹಾರ ಕಾರ್ಯಗಳಿಗೆ 500 ಕೋಟಿ ರೂ. ಬಿಡುಗಡೆ- ಮುಖ್ಯಮಂತ್ರಿ ಬೊಮ್ಮಾಯಿ
ಜುಲೈ ತಿಂಗಳಲ್ಲಿ ಕರಾವಳಿ, ಮಲೆನಾಡು, ಕೊಡಗು, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜೀವಹಾನಿ, ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಈ ನಿಟ್ಟಿನಲ್ಲಿ ಪರಿಹಾರ, ಪುನರ್ವಸತಿ ಕಾರ್ಯಗಳಿಗೆ 500 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.

ಕಡಲ್ಕೊರೆತ ತಡೆಗೆ ಹೊಸ ಶಾಶ್ವತ ತಂತ್ರಜ್ಞಾನ, ಭೂಕುಸಿತ-ಭೂಕಂಪನ ಬಗ್ಗೆ ನಾಲ್ಕು ಸಂಸ್ಥೆಗಳಿಂದ ಅಧ್ಯಯನ: ಸಿಎಂ ಬೊಮ್ಮಾಯಿ
ಕೊಡಗು ಮತ್ತು ಕರಾವಳಿ ಜಿಲ್ಲೆಯಲ್ಲಿ ಅವ್ಯಾಹತ ಮಳೆಯಿಂದ ಪ್ರವಾಹ ಉಂಟಾಗಿ ಭೂಕುಸಿತವಾಗಿದ್ದು ಮತ್ತು ಅದರ ಜೊತೆಗೆ ಭೂಕಂಪವಾಗಿರುವ ಘಟನೆಗಳಿಗೆ ಸಂಬಂಧಿಸಿದಂತೆ ನಾಲ್ಕು ಸಂಸ್ಥೆಗಳಿಂದ ಅಧ್ಯಯನ ನಡೆಸಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೊಡಗು: ಮಡಿಕೇರಿಯಲ್ಲಿ ಮಳೆಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ, ಪರಿಹಾರ ಚೆಕ್ ವಿತರಣೆ
ಭಾರೀ ಮಳೆಯಿಂದ ವ್ಯಾಪಕ ಹಾನಿಗೀಡಾಗಿರುವ ಕೊಡಗು ಜಿಲ್ಲೆಗೆ ಇಂದು ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಳೆಗೆ ಗೋಡೆ ಕುಸಿತಗೊಂಡು ನೆಲೆ ಕಳೆದುಕೊಂಡಿರುವ ಜನರನ್ನು ಭೇಟಿ ಮಾಡಿ ಅವರ ಕಷ್ಟಗಳನ್ನು ಆಲಿಸಿದರು, ಸರ್ಕಾರದ ವತಿಯಿಂದ ಪರಿಹಾರದ ಚೆಕ್ ವಿತರಿಸಿದರು.

