CM Basavaraja Bommai

ಬಿಟ್ ಕಾಯಿನ್ ಕೇಸಿನ ದಾಖಲೆಯಿದ್ದರೆ 'ಇಡಿ'ಗೊ, ನಮ್ಮ ಪೊಲೀಸರಿಗೋ ಕೊಡಿ: ಕಾಂಗ್ರೆಸ್ ನಾಯಕರಿಗೆ ಸಿಎಂ ಬೊಮ್ಮಾಯಿ ಸವಾಲು
ಬಿಟ್ ಕಾಯಿನ್ ಕೇಸಿನಲ್ಲಿ ದಾಖಲೆಗಳಿದ್ದರೆ ಜಾರಿ ನಿರ್ದೇಶನಾಲಯಕ್ಕೆ ಅಥವಾ ಪೊಲೀಸರಿಗೆ ನೀಡಲಿ ಅದರಲ್ಲಿ ಏನಾದರೂ ಲೋಪದೋಷಗಳಿದ್ದರೆ ಮುಂದಿನ ತನಿಖೆ ಮಾಡುತ್ತೇವೆ ಎಂದು ಈ ಹಿಂದೆ ಕೂಡ ಹೇಳಿದ್ದು, ಈಗಲೂ ಹೇಳುತ್ತಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪುನರುಚ್ಛರಿಸಿದ್ದಾರೆ.

ತಿರುಮಲ: ಕರ್ನಾಟಕ ಭವನ ನಿರ್ಮಾಣ ಕಟ್ಟಡ ಕಾಮಗಾರಿ ಪರಿಶೀಲಿಸಿದ ಸಿಎಂ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ನಿರ್ಮಾಣದ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು.

ಬಿಟ್ ಕಾಯಿನ್ ಬಡಿದಾಟ: 2018ರಲ್ಲಿ ಶ್ರೀಕಿಯನ್ನು ಬಂಧಿಸಿ ನಂತರ ಯಾಕೆ ಬಿಟ್ಟಿರಿ; ಕಾಂಗ್ರೆಸ್ ನಾಯಕರಿಗೆ ಸಿಎಂ ಬೊಮ್ಮಾಯಿ ಪ್ರಶ್ನೆ
ಭಾರತದ ಅತಿದೊಡ್ಡ ಬಿಟ್‌ಕಾಯಿನ್ ಹಗರಣವನ್ನು ಕರ್ನಾಟಕ ಬಿಜೆಪಿ ಸರ್ಕಾರವು ನ್ಯಾಯಯುತ ತನಿಖೆ ನಡೆಸುವ ಬದಲು “ಆಪರೇಷನ್ ಬಿಟ್‌ಕಾಯಿನ್ ಹಗರಣವನ್ನು ಮುಚ್ಚಿಹಾಕಲು” ಯತ್ನಿಸುತ್ತಿದೆ. ಹಗರಣದ ತನಿಖೆಯನ್ನು ಕೈಬಿಡಲು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಹೇಳುವ ಮೂಲಕ ತನಿಖೆಯನ್ನು ಕೈಬಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ರಾಜ್ಯ ಕಾಂಗ

ನ.14 ಪಂಡಿತ್ ಜವಹರಲಾಲ್ ನೆಹರೂ ಜನ್ಮಜಯಂತಿಯಂದು ಮಕ್ಕಳ ದಿನಾಚರಣೆ: ಪ್ರಧಾನಿ, ಸಿಎಂ ಸೇರಿ ಗಣ್ಯರ ಸ್ಮರಣೆ
ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಲು ನವೆಂಬರ್ 14 ಅನ್ನು ಬಾಲ ದಿವಸ್ ಅಥವಾ ಮಕ್ಕಳ ದಿನಾಚರಣೆ ಎಂದು ಆಚರಿಸಲಾಗುತ್ತದೆ.

ಬಿಟ್ ಕಾಯಿನ್ ಬಗ್ಗೆ ಚರ್ಚೆ ಆಗಿಲ್ಲ, ದಿಟ್ಟತನದಿಂದ ನಿಮ್ಮ ಕೆಲಸ ಮುಂದುವರಿಸುವಂತೆ ಪ್ರಧಾನಿ ಸೂಚನೆ: ಸಿಎಂ ಬೊಮ್ಮಾಯಿ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ಮಾಡಿದ್ದು, ಮಾತುಕತೆ ಅತ್ಯಂತ ಸೌಹಾರ್ದಯುತವಾಗಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಿಎಂ ಬದಲಾವಣೆ ವಿಚಾರ ಕಾಂಗ್ರೆಸ್ ಪಕ್ಷದ ಪಿತೂರಿಯಷ್ಟೆ, ಇನ್ನು ಒಂದೂವರೆ ವರ್ಷ ಬೊಮ್ಮಾಯಿಯವರೇ ಮುಖ್ಯಮಂತ್ರಿ: ಬಿ ವೈ ವಿಜಯೇಂದ್ರ
ಸಿಎಂ ಬದಲಾವಣೆ ಕೇವಲ ಕಪೋಲಕಲ್ಪಿತ, ರಾಜ್ಯದ ಜನತೆಯ ಹಾದಿ ತಪ್ಪಿಸಲು ಕಾಂಗ್ರೆಸ್ ಮಾಡುತ್ತಿರುವ ಕುತಂತ್ರ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ನೂರಕ್ಕೆ ನೂರರಷ್ಟು ಸತ್ಯ; ಬಿಜೆಪಿಯಲ್ಲಿ ಇನ್ನೂ ಇಬ್ಬರು ಸಿಎಂ ಆಗುತ್ತಾರೆ: ಶಿವರಾಜ್ ತಂಗಡಗಿ
ಜನವರಿ ಅಂತ್ಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಅಧಿಕಾರ ಹೋಗುತ್ತದೆ, ಈ ಬಗ್ಗೆ ನಮಗೆ ಸ್ಪಷ್ಟ ಮಾಹಿತಿ ಸಿಕ್ಕಿದೆ. ಇನ್ನು ಒಂದೂವರೆ ವರ್ಷದಲ್ಲಿ ರಾಜ್ಯಕ್ಕೆ ಇಬ್ಬರು ಸಿಂ ಆಗುತ್ತಾರೆ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಶಿವರಾಜ್ ತಂಗಡಗಿ ಬಾಂಬ್ ಸಿಡಿಸಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಭೇಟಿಗೆ ಸಮಯ ನಿಗದಿ: ಬಿಟ್ ಕಾಯಿನ್ ದಂಧೆ ವಿವಾದ ಮಧ್ಯೆ ಸಿಎಂ ಬೊಮ್ಮಾಯಿಗೆ ಸ್ಪಷ್ಟ ಸಂದೇಶ?
ಬಿಟ್ ಕಾಯಿನ್ ಹಗರಣ ಬಗ್ಗೆ ರಾಜ್ಯದಲ್ಲಿ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ಆರೋಪ ತಾರಕಕ್ಕೇರಿದೆ. ರಾಜಕೀಯದಲ್ಲಿ ಹಲವು ಊಹಾಪೋಹಗಳು ಎದ್ದಿವೆ. ಎಷ್ಟರ ಮಟ್ಟಿಗೆ ಎಂದರೆ ಬಿಟ್ ಕಾಯಿನ್ ಹಗರಣದಿಂದ ಮುಖ್ಯಮಂತ್ರಿಯೇ ಪದವಿ ಕಳೆದುಕೊಳ್ಳುತ್ತಾರೆ ಎಂಬುದಾಗಿ ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿದ್ದಾರೆ.

ಪ್ರಿಯಾಂಕ್ ಖರ್ಗೆ ಮಾತಿಗೆಲ್ಲ ಪ್ರತಿಕ್ರಿಯಿಸಲ್ಲ, ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್ ನಾಯಕರ ಹೆಸರಿದೆ: ಸಿಎಂ ಬೊಮ್ಮಾಯಿ
ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್ ನಾಯಕರ ಹೆಸರಿದೆ, ಮೊದಲು ಕಾಂಗ್ರೆಸ್ ನಾಯಕರು ಆ ಬಗ್ಗೆ ಚಿಂತನೆ ಮಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

