CM Basavaraja Bommai

2023ರ ವಿಧಾನಸಭೆ ಚುನಾವಣೆ: ಸಿಎಂ ಬೊಮ್ಮಾಯಿಗೆ ಜಾತಿ ಗಣತಿ ಕಂಟಕ; ವಿರೋಧ ಪಕ್ಷಗಳಿಗೆ ಪ್ರಬಲ ಅಸ್ತ್ರ!
ಹಲವು ಅಭಿವೃದ್ಧಿಪರ ಯೋಜನೆಗಳಿಗೆ ಒಪ್ಪಿಗೆ ಪಡೆದು ದೆಹಲಿ ಪ್ರವಾಸ ಮುಗಿಸಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯಕ್ಕೆ ವಾಪಸ್ಸಾಗಿದ್ದಾರೆ. ಆದರೆ ವಿರೋಧ ಪಕ್ಷಗಳ ಬಹುಬೇಡಿಕೆಯ ಜಾತಿ ಗಣತಿಯನ್ನು ತಕ್ಷಣಕ್ಕೆ ಆರಂಭಿಸುವ ಲಕ್ಷಣ ಕಾಣುತ್ತಿಲ್ಲ.

ವಸತಿ ಯೋಜನೆ: 4 ಲಕ್ಷ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಲು ಸಿಎಂ ಸೂಚನೆ
ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ.

ಕೋವಿಡ್ ಪೀಡಿತ ಕುಟುಂಬಗಳ ನೆರವಿಗಾಗಿ ವಿಶೇಷ ಕಾರ್ಯಕ್ರಮ ಜಾರಿಗೆ ಸರ್ಕಾರ ಚಿಂತನೆ
ಕೋವಿಡ್-19 ಪೀಡಿತ ಬಡವರಿಗೆ ನೆರವಾಗಲು ರಾಜ್ಯ ಸರ್ಕಾರ ಶೀಘ್ರದಲ್ಲೇ ವಿಶೇಷ ಕಾರ್ಯಕ್ರಮವೊಂದನ್ನು ರೂಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕೆ ಇಲ್ಲ: ಮುಖ್ಯಮಂತ್ರಿ ಬೊಮ್ಮಾಯಿ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಆರೋಗ್ಯ ಸರಿಯಿಲ್ಲದ ಕಾರಣ ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ. ಪಕ್ಷ ಸಂಘಟನೆ ಬಗ್ಗೆ ಗಮನ ಕೊಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಬಹುತೇಕ ಖಚಿತ: ಸಿಎಂ ಬೊಮ್ಮಾಯಿ
ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣಾ ಫಲಿತಾಂಶ ಅತಂತ್ರವಾಗಿರುವುದರಿಂದ ಜೆಡಿಎಸ್ ಜೊತೆ ಸೇರಿ ಆಡಳಿತ ನಡೆಸುವುದು ಬಹುತೇಕ ಖಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಿಫಾ ವೈರಸ್ ಬಗ್ಗೆ ರಾಜ್ಯದಲ್ಲಿ ಕಟ್ಟೆಚ್ಚರ: ಸಿಎಂ ಬಸವರಾಜ ಬೊಮ್ಮಾಯಿ
ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಗೆ ಬಾಲಕ ಬಲಿಯಾಗಿ ಅಲ್ಲಿ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸೈಬರ್ ಅಪರಾಧ, ಡ್ರಗ್ ಮಾಫಿಯಾ, ಡಾರ್ಕ್ ವೆಬ್ ಪೊಲೀಸರ ಮುಂದಿರುವ ಹೊಸ ಸವಾಲುಗಳು: ಮುಖ್ಯಮಂತ್ರಿ ಬೊಮ್ಮಾಯಿ
ಸೈಬರ್ ಅಪರಾಧ, ಡ್ರಗ್ ಮಾಫಿಯಾ, ಡಾರ್ಕ್ ವೆಬ್ ಪೊಲೀಸರ ಮುಂದಿರುವ ಹೊಸ ಸವಾಲುಗಳಾಗಿವೆ ಎಂದು ಸೋಮವಾರ ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೊಸ ತಂತ್ರಜ್ಞಾನ ಮತ್ತು ಆಧುನಿಕ ಸಲಕರಣೆಗಳನ್ನು ಬಳಸಿಕೊಂಡು ಇಂತಹ ಹೊಸ ಅಪರಾಧಗಳನ್ನು ಮಟ್ಟಹಾಕಬೇಕಾಗಿದೆ ಎಂದರು.

ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ದೆಹಲಿ ಪ್ರಯಾಣ: ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಜೊತೆ ಮಾತುಕತೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ತೆರಳುತ್ತಿದ್ದು, ಸಚಿವ ಸಂಪುಟ ವಿಸ್ತರಣೆ ಸಂಬಂಧ ಕೇಂದ್ರದ ಬಿಜೆಪಿ ವರಿಷ್ಠರ ಜೊತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.

'ಮುಖ್ಯಮಂತ್ರಿ ರೈತ ವಿದ್ಯಾನಿಧಿ' ಯೋಜನೆಗೆ ಚಾಲನೆ: ವಿದ್ಯಾರ್ಥಿಗಳಿಗೆ ಸ್ಕಾಲರ್ ಷಿಪ್, ಸಿಎಂ ಬೊಮ್ಮಾಯಿ ಮಹಾತ್ವಾಕಾಂಕ್ಷಿ ಕಾರ್ಯಕ್ರಮ
ತಾವು ಮುಖ್ಯಮಂತ್ರಿಯಾದ ಕೂಡಲೇ ಬಸವರಾಜ ಬೊಮ್ಮಾಯಿಯವರು ಘೋಷಿಸಿದ್ದ ಮಹಾತ್ವಾಕಾಂಕ್ಷಿ ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಯೋಜನೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಭಾನುವಾರ ಚಾಲನೆ ನೀಡಲಾಗಿದೆ.

