CM Basavaraja Bommai

ರಾಷ್ಟ್ರೀಯ ಶಿಕ್ಷಣ ನೀತಿ-2020 ಯಶಸ್ವಿಯಾದರೆ ಆಗಸ್ಟ್ 23 ಶಿಕ್ಷಣ ದಿನ ಎಂದು ಆಚರಿಸಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಇವತ್ತು ನಾವೆಲ್ಲರೂ ಕ್ರಾಂತಿಕಾರಿ ಹೆಜ್ಜೆಯನ್ನಿಡುವ ದಿನ. ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮೂಲಕ ದೇಶದಲ್ಲಿ ಬದಲಾವಣೆಯನ್ನು ತರಬಹುದು ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಕ್ಕಳಿಗೆ ಇವತ್ತು ಕೋವಿಡ್ ನಿಂದ ಸ್ವತಂತ್ರ ಸಿಕ್ಕಿದೆ, ಶಾಲೆ ಆರಂಭ ಎಲ್ಲರಿಗೂ ಖುಷಿ ತಂದಿದೆ: ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ 9ನೇ ತರಗತಿಯಿಂದ ದ್ವಿತೀಯ ಪಿಯುಸಿಯವರೆಗೆ ಆರಂಭವಾಗಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮತ್ತು ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸರ್ಕಾರಿ ಕಾಲೇಜಿಗೆ ಆಗಮಿಸಿದರು.

ಕೋವಿಡ್-19 ಮೂರನೇ ಅಲೆ ಹಿನ್ನೆಲೆ ಕಟ್ಟೆಚ್ಚರಕ್ಕೆ ಸಿಎಂ ಸೂಚನೆ; ಡಿಸೆಂಬರ್ ಅಧಿವೇಶನ ಬೆಳಗಾವಿಯಲ್ಲಿ ಬೊಮ್ಮಾಯಿ ಭರವಸೆ
ಕೋವಿಡ್ 19 ಮೂರನೇ ಅಲೆಯ ಅಪಾಯದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳ ಭಾಗಗಳಿಂದ ಬರುವವರ ಮೇಲೆ ತೀವ್ರ ನಿಗಾ ಇಡಲು ಚಕ್ ಪೋಸ್ಟ್ ಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೋಮ್ಮಾಯಿ ಸೂಚನೆ ನೀಡಿದ್ದಾರೆ.

ಆಗಸ್ಟ್ 23ಕ್ಕೆ ಶಾಲೆ ಪುನಾರಂಭ: ಪೋಷಕರು, ಶಿಕ್ಷಕರು ಮಕ್ಕಳ ಬಗ್ಗೆ ನಿಗಾ ಇರಿಸಿ ಎಂದ ಸಿಎಂ ಬಸವರಾಜ ಬೊಮ್ಮಾಯಿ
ಮುಂದಿನ ಸೋಮವಾರ(ಆ.23) ರಾಜ್ಯಾದ್ಯಂತ 9ರಿಂದ 12ನೇ ತರಗತಿಯವರೆಗೆ ಶಾಲಾ-ಕಾಲೇಜುಗಳು ಪ್ರಾರಂಭವಾಗಲಿವೆ. ಈ ಸಂದರ್ಭದಲ್ಲಿ ಶಾಲೆಗಳ ಆರಂಭಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ, ಯುವಕರಿಗೆ ಉದ್ಯೋಗ ಸೃಷ್ಟಿ: ಸಿಎಂ ಬಸವರಾಜ ಬೊಮ್ಮಾಯಿ
ಹಿಂದುಳಿದ ವರ್ಗಗಳ ಸಶಕ್ತೀಕರಣಕ್ಕೆ ರಾಜ್ಯ ಸರ್ಕಾರ ಉತ್ತಮ ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನು ಕಲ್ಪಿಸಲು ವಿಶೇಷ ಕಾರ್ಯಕ್ರಮಗಳನ್ನು ನಡೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ದಿ. ದೇವರಾಜ ಅರಸು ಹೆಸರಿನಲ್ಲಿ ವರ್ಷವಿಡೀ ಕಾರ್ಯಕ್ರಮ, ಹಿಂದುಳಿದ ವರ್ಗದವರಿಗೆ ಸಮರ್ಪಣೆ: ಸಿಎಂ ಬಸವರಾಜ ಬೊಮ್ಮಾಯಿ
ಕನ್ನಡ ನಾಡು ಕಂಡ ಧೀಮಂತ ನಾಯಕ ದಿವಂಗತ ದೇವರಾಜ ಅರಸು ಅವರು. ರೈತಪರ, ಜನಪರ, ಹಿಂದುಳಿದ ವರ್ಗಗಳ ಧ್ವನಿಯಾಗಿದ್ದ ಅವರ 106ನೇ ಜನ್ಮದಿನಾಚರಣೆಯನ್ನು ಆಚರಿಸುತ್ತಿದ್ದೇವೆ.

ಮುಂದುವರಿದ 'ಆನಂದ' ಮುನಿಸು: ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಗೆ ಗೈರು!
ಪ್ರವಾಸೋದ್ಯಮ ಮತ್ತು ಪರಿಸರ ಇಲಾಖೆ ಸಚಿವ ಆನಂದ್ ಸಿಂಗ್ ಮುನಿಸು ಮುಂದುವರಿದಿದೆ ಎಂದು ಮತ್ತೊಂದು ಸ್ಪಷ್ಟವಾಗುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಆನಂದ್ ಸಿಂಗ್ ಗೈರಾಗಿದ್ದಾರೆ.

ಇದು ಅಧಿಕೃತ: ಸಿಎಂ ಬೊಮ್ಮಾಯಿಗೆ ನಂ.1 ರೇಸ್ ವ್ಯೂ ಕಾಟೇಜ್ ನಿವಾಸ ಹಂಚಿಕೆ
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಸುಮಾರು 20 ದಿನಗಳು ಕಳೆದ ನಂತರ ಬಸವರಾಜ ಬೊಮ್ಮಾಯಿಯವರಿಗೆ ಅಧಿಕೃತ ನಿವಾಸ ಸಿಕ್ಕಿದೆ.

ಹಣ ಪಡೆದು ಕೊರೋನಾ ನೆಗೆಟಿವ್ ವರದಿ ನೀಡಿದವರ ವಿರುದ್ಧ ಕ್ರಮ, ನಮ್ಮ ರಾಜ್ಯದಲ್ಲಿ ಪೆಟ್ರೋಲ್ ದರ ಕಡಿತ ಇಲ್ಲ: ಸಿಎಂ ಬೊಮ್ಮಾಯಿ
ರಾಜ್ಯದ ಪ್ರಗತಿಯನ್ನು ತ್ವರಿತಗೊಳಿಸಲು ಮತ್ತು ಮೂಲಭೂತ ಸೌಕರ್ಯಗಳ ಹೆಚ್ಚಳ, ಬಡವರ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಸುಧಾರಣೆ ಮಾಡುವ ನಿಟ್ಟಿನಲ್ಲಿ ನನ್ನ ಕೆಲಸವನ್ನು ಮುಖ್ಯಮಂತ್ರಿಯಾಗಿ ಪ್ರಾರಂಭ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

