CM Basavaraja Bommai

ಬೆಳ್ಳಂಬೆಳಗ್ಗೆ ಸೈಕಲ್ ಏರಿದ ಸಿಎಂ ಬೊಮ್ಮಾಯಿ:'ಚೀರ್ ಫಾರ್ ಇಂಡಿಯಾ' ಸೈಕಲ್ ಜಾಥಾಕ್ಕೆ ಚಾಲನೆ
ರಾಜಕೀಯ ನಾಯಕರೆಂದರೆ ಬಿಳಿ ಶರ್ಟ್, ಪಂಜೆ, ಪೈಜಾಮ, ಪ್ಯಾಂಟ್ ಧರಿಸಿಕೊಂಡು ಓಡಾಡುವುದು ಸಾಮಾನ್ಯ ಸಂಗತಿ. ನಾಡಿನ ಮುಖ್ಯಮಂತ್ರಿಯಾಗಿ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಿ ಬಂದ ಮುಖ್ಯಮಂತ್ರಿ ಭಾನುವಾರ ಬೆಳ್ಳಂಬೆಳಗ್ಗೆ ಪ್ಯಾಂಟ್ ಟೀ ಶರ್ಟ್ ಧರಿಸಿ ಸೈಕಲ್ ಏರಿದ್ದಾರೆ.

ಪ್ರಧಾನಿ ಮೋದಿ ಭೇಟಿ ಮಾಡಿದ ನೂತನ ಸಿಎಂ ಬೊಮ್ಮಾಯಿ; ಏಮ್ಸ್ ಮಂಜೂರು ಮಾಡಲು ಮನವಿ
ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ಬಸವರಾಜ ಬೊಮ್ಮಾಯಿ ಅವರು ಜು.30 ರಂದು ನವದೆಹಲಿಗೆ ಭೇಟಿ ನೀಡಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಬರುತ್ತೇನೆ ಎಂದು ಅಂದುಕೊಂಡಿರಲಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯದ ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಬರುತ್ತೇನೆ ಎಂದು ಅಂದುಕೊಂಡಿರಲಿಲ್ಲ, ಹುಬ್ಬಳ್ಳಿ ನನ್ನ ಇಷ್ಟದ ಊರು, ನಾನು ಹುಬ್ಬಳ್ಳಿಯಲ್ಲಿಯೇ ಹುಟ್ಟಿ ಬೆಳೆದವನು, ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಮುಖ್ಯಮಂತ್ರಿಯಾಗಿ ಅಗತ್ಯ ಪ್ರಾಶಸ್ತ್ಯ ನೀಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ದಿವ್ಯಾಂಗ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿರುವ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಮೊದಲ ನಿರ್ಣಯಗಳನ್ನು ಪ್ರಕಟಿಸಿದ್ದಾರೆ.

