CM Bommai

ಆರೋಪ ಮಾಡುವ ಮೂಲಕ ತನ್ನ ಪಾಪ ತೊಳೆದುಕೊಳ್ಳಲು ಕಾಂಗ್ರೆಸ್ ಯತ್ನಿಸುತ್ತಿದೆ: ಸಿಎಂ ಬೊಮ್ಮಾಯಿ
ಬೇರೆಯವರ ಮೇಲೆ ಸುಳ್ಳು ಆರೋಪ ಮಾಡುವ ಮೂಲಕ ಅಧಿಕಾರದಲ್ಲಿದ್ದಾಗ ತಾನು ಮಾಡಿದ ಪಾಪವ ತೊಳೆದುಕೊಳ್ಳಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದರು.

ಪುನರ್ವಸತಿ ಕೇಂದ್ರಗಳಿಗೆ ಸಾಮಾನ್ಯ ಸೌಲಭ್ಯಗಳ ಜೊತೆಗೆ ಶಿಕ್ಷಣದ ವ್ಯವಸ್ಥೆ: ಸಿಎಂ ಬಸವರಾಜ ಬೊಮ್ಮಾಯಿ
ನಾಲ್ಕೈದು ಹಳ್ಳಿಗಳಲ್ಲಿ ಪುನರ್ವಸತಿ ಕೇಂದ್ರಗಳನ್ನು ಅಕ್ಕಪಕ್ಕದಲ್ಲಿಯೇ ನಿರ್ಮಿಸಿ, ಜನರಿಗೆ ಸಾಮಾನ್ಯ ವ್ಯವಸ್ಥೆಗಳನ್ನು ನೀಡುವ ಜೊತೆಗೆ ಶಾಲಾ ಕಾಲೇಜು, ಪಾಲಿಟೆಕ್ನಿಕ್ ಕಾಲೇಜುಗಳನ್ನೂ ನಿರ್ಮಿಸುವ ಮೂಲಕ ಜನರಿಗೆ ಅನುಕೂಲ ಕಲ್ಪಿಸಲಾಗುವುದು...

ಸ್ತ್ರೀ ಸಾಮರ್ಥ್ಯ-ನಮೋ ಸ್ತ್ರೀ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ
ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಹಿಳಾ ಸ್ವ-ಸಹಾಯ ಗುಂಪುಗಳ (ಎಸ್‌ಎಚ್‌ಜಿ) ಬೆಂಬಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಸ್ತ್ರೀ ಸಾಮರ್ಥ್ಯ-ನಮೋ ಸ್ತ್ರೀ ಯೋಜನೆ’ಗೆ ಬುಧವಾರ ಚಾಲನೆ ನೀಡಿದರು.

ಹಾಸನ ವಿಮಾನ ನಿಲ್ದಾಣಕ್ಕೆ ಅಡಿಗಲ್ಲು ಹಾಕಲು ಮುಂದಾದರೆ ಸಿಎಂ ಬೊಮ್ಮಾಯಿ ವಿರುದ್ಧ ಪ್ರತಿಭಟನೆ: ಜೆಡಿಎಸ್
ಹಾಸನ ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು ಹಾಕಲು ಮುಂದಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಜೆಡಿಎಸ್ ಬುಧವಾರ ಎಚ್ಚರಿಕೆ ನೀಡಿದೆ.

ನಾಳೆ ಹಾವೇರಿಗೆ ಸಿಎಂ ಬೊಮ್ಮಾಯಿ: ಕಲ್ಯಾಣ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗಿ
ಮಾರ್ಚ್.10ರಂದು ಹಾವೇರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡುತ್ತಿದ್ದು, ಸರ್ಕಾರದ ಕಲ್ಯಾಣ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಲಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: 100ನೇ ಜನೌಷಧಿ ಕೇಂದ್ರ ಉದ್ಘಾಟನೆ
ನಗರದ ಮೂಲಸೌಕರ್ಯ, ಒಳಚರಂಡಿಗಳ ಸುಧಾರಿಸುವುದು ಮಾತ್ರವಲ್ಲದೆ ಜನರ ಅಗತ್ಯಗಳನ್ನು ಪೂರೈಸುವದಷ್ಟೇ ಅಲ್ಲ, ಸಮಾಜದ ಹಿಂದುಳಿದ ವರ್ಗದವರಿಗೆ ಕೈಗೆಟಕುವ ದರದಲ್ಲಿ ಔಷಧಗಳನ್ನು ಒದಗಿಸಲು ಹೆಚ್ಚಿನ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವೀಯ ಅವರು ಮಂಗಳವಾರ ಹೇಳಿದರು.

ಹೊರಗಿನವರಿಂದ ‘ಬ್ರ್ಯಾಂಡ್ ಬೆಂಗಳೂರು’ ಖ್ಯಾತಿಗೆ ಧಕ್ಕೆ: ಸಿಎಂ ಬೊಮ್ಮಾಯಿ ಅಸಮಾಧಾನ
ಹೊರಗಿನವರಿಂದ ‘ಬ್ರ್ಯಾಂಡ್ ಬೆಂಗಳೂರು’ ಖ್ಯಾತಿಗೆ ಧಕ್ಕೆ ತರುವ ಪ್ರಯತ್ನಗಳಾಗುತ್ತಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರು-ಮೈಸೂರು ಎಕ್ಸ್'ಪ್ರೆಸ್ ವೇ ಕ್ರೆಡಿಟ್ ಪಡೆಯಲು ಯತ್ನ: ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ
ಮಾರ್ಚ್ 12 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿರುವ 10 ಪಥಗಳ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ಕ್ರೆಡಿಟ್ ಪಡೆದುಕೊಳ್ಳಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಯತ್ನ ನಡೆಸುತ್ತಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವ್ಯಂಗ್ಯವಾಡಿದ್ದಾರೆ.

ಕರ್ನಾಟಕದೊಂದಿಗೆ ಕೆಲಸ ಮಾಡಲು ಸಿದ್ಧ: ಗೊಂದಲಗಳಿಗೆ ತೆರೆ ಎಳೆದ ಫಾಕ್ಸ್‌ಕಾನ್
ಕರ್ನಾಟಕದಲ್ಲಿ ಐಫೋನ್ ಉತ್ಪಾದನಾ ಘಟಕವನ್ನು ಸ್ಥಾಪಿಸಿ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗುವ ವಿಚಾರ ಸಂಬಂಧ ಎದ್ದಿದ್ದ ಗೊಂದಲಗಳಿಗೆ ಫಾಕ್ಸ್‌ಕಾನ್ ತೆರೆ ಎಳೆದಿದೆ.

