CM Bommai

ಸಿಎಂ ಬೊಮ್ಮಾಯಿ ಅವರ ಬಜೆಟ್ ಭವಿಷ್ಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲಿದೆ: ಸಚಿವ ಸಿಸಿ ಪಾಟೀಲ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಬಜೆಟ್ ಭವಿಶ್ಯದಲ್ಲಿ ರಾಜ್ಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರು ಹೇಳಿದ್ದಾರೆ.

ವಿರೋಧ ಪಕ್ಷದವರಿಗೆ ನಮ್ಮ ಮೇಲೆ ಹೊಟ್ಟೆಕಿಚ್ಚು: ಸಿಎಂ ಬೊಮ್ಮಾಯಿ
ವಿರೋಧ ಪಕ್ಷಗಳ ನಾಯಕರ ಟೀಕೆಗಳಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ, ಅವರು ಕೇವಲ ಅಸೂಯೆಯಿಂದ ನಮ್ಮನ್ನು ಟೀಕಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದರು.

ಕರ್ನಾಟಕದಲ್ಲಿರುವ ಎಲ್ಲರೂ ಕನ್ನಡಿಗರೇ: ಸಿಎಂ ಬೊಮ್ಮಾಯಿ
ಕರ್ನಾಟಕವು ಎಲ್ಲಾ ವರ್ಗಗಳು, ಭಾಷಾಶಾಸ್ತ್ರಜ್ಞರು ಮತ್ತು ಸಮುದಾಯಗಳನ್ನು ಸಮಾನವಾಗಿ ಕಾಣುವ ಶ್ರೀಮಂತ ಸಂಸ್ಕೃತಿಯನ್ನು ಹೊಂದಿದೆ, ಆದರೆ ಕನ್ನಡಿಗರು ಯಾವಾಗಲೂ ಅಗ್ರಸ್ಥಾನದಲ್ಲಿರುತ್ತಾರೆಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದರು.

ರಾಜ್ಯದ ಬಜೆಟ್ ಸಮತೋಲಿತವಾಗಿದ್ದು, ಮೂಲಸೌಕರ್ಯಗಳ ಮೇಲೆ ಕೇಂದ್ರೀಕರಿಸಿದೆ: ಬಿಜೆಪಿ
ರಾಜ್ಯ ಸರ್ಕಾರದ ಬಜೆಟ್ ಸಮತೋಲಿತವಾಗಿದ್ದು, ಮೂಲಸೌಕರ್ಯಗಳ ಮೇಲೆ ಕೇಂದ್ರೀಕರಿಸಿದೆ ಎಂದು ರಾಜ್ಯ ಬಿಜೆಪಿ ಶನಿವಾರ ಹೇಳಿದೆ.

ರಾಜ್ಯ ಸರ್ಕಾರದ್ದು ದೂರದೃಷ್ಟಿ ಇಲ್ಲದ, ಜನ ವಿರೋಧಿ ಬಜೆಟ್: ಬಿ.ಕೆ.ಹರಿಪ್ರಸಾದ್
ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ ದೂರದೃಷ್ಟಿಯಿಲ್ಲದ, ಜನ ವಿರೋಧಿ ಬಜೆಟ್ ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದರು.

ಮಹದಾಯಿ ನಿರ್ವಹಣೆಗೆ 'ಪ್ರವಾಹ್ ಪ್ರಾಧಿಕಾರ' ರಚನೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪನ್ನು ಅನುಷ್ಠಾನಗೊಳಿಸಲು ‘ಮಹದಾಯಿ ಪ್ರವಾಹ್ ಪ್ರಾಧಿಕಾರ' (ಕಲ್ಯಾಣ ಮತ್ತು ಸಾಮರಸ್ಯಕ್ಕಾಗಿ ಪ್ರಗತಿಶೀಲ ನದಿ ಪ್ರಾಧಿಕಾರ)’ ರಚನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ.

ಮಹಿಳಾ ನೌಕರರು, ವಿದ್ಯಾರ್ಥಿನಿಯರಿಗೆ ಸಿಹಿ ಸುದ್ದಿ: ಏಪ್ರಿಲ್ 1 ರಿಂದ ಉಚಿತ ಬಸ್ ಪಾಸ್ ವಿತರಿಸಲು ಸರ್ಕಾರ ನಿರ್ಧಾರ
ಮಹಿಳಾ ನೌಕರರು ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಏಪ್ರಿಲ್ 1 ರಿಂದಲೇ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದೆ.

ನಿರ್ವಹಣೆ ಕೊರತೆ; ರಾಜ್ಯದಲ್ಲಿನ ಬಹುತೇಕ ಶೌಚಾಲಯಗಳು ಬಳಕೆಗೆ ಯೋಗ್ಯವಾಗಿಲ್ಲ: ಸಿಎಂ ಬೊಮ್ಮಾಯಿ
ನಿರ್ವಹಣೆ ಕೊರತೆಯಿಂದ ರಾಜ್ಯದಲ್ಲಿ ಹಲವು ಸಾರ್ವಜನಿಕ ಶೌಚಾಲಯಗಳು ಬಳಕೆಗೆ ಯೋಗ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದರು.

ಪಿಯುಸಿ ಕಾಲೇಜುಗಳೇ ಇಲ್ಲದ ಊರುಗಳಿಗೂ ಪದವಿ ಕಾಲೇಜು ಮಂಜೂರು ಮಾಡಿದ್ದರು, ಅದನ್ನು ಸರಿಪಡಿಸುತ್ತಿದ್ದೇವೆ: ಸಿಎಂ ಬೊಮ್ಮಾಯಿ
ಯಾರದ್ದೋ ಒತ್ತಡಕ್ಕೆ ಮಣಿದು ಪದವಿ ಪೂರ್ವ(ಪಿಯು) ಕಾಲೇಜುಗಳೇ ಇಲ್ಲದ ಊರುಗಳಿಗೂ ಪದವಿ ಕಾಲೇಜು ಮಂಜೂರು ಮಾಡಿದ್ದರು. ಅದನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದರು.

