CM Bommai

ರಾಹುಲ್ ಗಾಂಧಿ ವಿರುದ್ಧ ದೇಶದ್ರೋಹ ಆರೋಪ ಹೊರಿಸಿದ ಸ್ಮೃತಿ ಇರಾನಿ
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಕ್ಷದ ಮಹತ್ವಾಕಾಂಕ್ಷೆಯ ‘ಭಾರತ್ ಜೋಡೋ ಯಾತ್ರೆ’ ಆರಂಭಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರು ಶನಿವಾರ ದೇಶದ್ರೋಹದ ಆರೋಪ ಹೊರಿಸಿದ್ದಾರೆ.

ದೊಡ್ಡಬಳ್ಳಾಪುರ, ದೇವನಹಳ್ಳಿ, ನೆಲಮಂಗಲ ಸ್ಯಾಟಲೈಟ್ ಟೌನ್ ಆಗಿ ಅಭಿವೃದ್ದಿ: ಸಿಎಂ ಬೊಮ್ಮಾಯಿ ಘೋಷಣೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ, ನೆಲಮಂಗಲವನ್ನು ಸ್ಯಾಟಲೈಟ್ ಟೌನ್ ಆಗಿ ಅಭಿವೃದ್ದಿಪಡಿಸಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರಿಗೆ ಸಿಎಂ ಕಚೇರಿಯಲ್ಲಿ ಕೆಲಸ: ಬೊಮ್ಮಾಯಿ
ಕರಾವಳಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಬ್ಬರಿಗೆ ತಮ್ಮ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಶನಿವಾರ ಘೋಷಣೆ ಮಾಡಿದ್ದಾರೆ.

'ತಾಕತ್ತಿದ್ರೆ, ಧಮ್ಮಿದ್ರೆ ತಡೆಯುವ ಪ್ರಯತ್ನ ಮಾಡಿ', 'ಅಕ್ಕಿ ನಮ್ದು, ಚೀಲ ಮಾತ್ರ ನಿಮ್ದು': ಜನಸ್ಪಂದನ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ ಆವೇಶಭರಿತ ಮಾತು
ದೊಡ್ಡಬಳ್ಳಾಪುರದಲ್ಲಿ ಪ್ರಾರಂಭ ಮಾಡಿರುವ ಜನಸ್ಪಂದನೆಯನ್ನು ಇಡೀ ಕರ್ನಾಟಕ ತುಂಬ ತೆಗೆದುಕೊಂಡು ಹೋಗಿ ಮತ್ತೊಮ್ಮೆ ಕಮಲವನ್ನು ಅರಳಿಸುವ ಪ್ರಯತ್ನ ಮಾಡುತ್ತೇವೆ. ತಾಕತ್ತಿದ್ದರೆ, ಧಮ್ಮಿದ್ದರೆ ನಿಲ್ಲಿಸುವ, ತಡೆಯುವ ಪ್ರಯತ್ನ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಆಕ್ರೋಶಭರಿತರಾಗಿ ಸಿಎಂ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.

ಬೆಂಗಳೂರು ಪ್ರವಾಹಕ್ಕೆ ದ್ರೋಹಿಗಳ ಪಕ್ಷ ಬಿಜೆಪಿ ಕಾರಣ: ರಂದೀಪ್ ಸುರ್ಜೇವಾಲಾ
ಒಂದು ಕಾಲದಲ್ಲಿ ಐಟಿ ರಾಜಧಾನಿ ಹಾಗೂ ಗಾರ್ಡನ್ ಸಿಟಿ ಎಂದು ಖ್ಯಾತಿ ಪಡೆದಿದ್ದ ಬೆಂಗಳೂರು, ಇಂದು ಪ್ರವಾಹ ಪೀಡಿತ ನಗರವಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೆವಾಲ ಆರೋಪಿಸಿದ್ದಾರೆ.

ಉಮೇಶ್ ಕತ್ತಿ ನಿಧನ ಹಿನ್ನಲೆ: ಬಿಜೆಪಿ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿಕೆ
ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ಮರಣದ ಹಿನ್ನಲೆಯಲ್ಲಿ ಬಿಜೆಪಿ ಪಕ್ಷ ಹಮ್ಮಿಕೊಂಡಿದ್ದ ಜನೋತ್ಸವ ಕಾರ್ಯಕ್ರಮವನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ.

ಬೆಂಗಳೂರು ಅಭಿವೃದ್ಧಿಗೆ ಸ್ವತಂತ್ರ ಸಚಿವರಿಲ್ಲ: ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಟಾಂಗ್
ಬೆಂಗಳೂರಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಜನರ ಬದುಕು ನರಕ ಸದೃಶವಾಗಿದೆ. ಮುಖ್ಯಮಂತ್ರಿಗಳು ಮಾತ್ರ ಇದಕ್ಕೆಲ್ಲ ಹಿಂದಿನ ಸರ್ಕಾರಗಳು ಕಾರಣ ಎಂದು ಓಡಾಡುತ್ತಿದ್ದಾರೆ. ಸರ್ಕಾರ ಇಂತಹ ಬೇಜವಾಬ್ಧಾರಿ ಆಡಳಿತವನ್ನು ನಿಲ್ಲಿಸಿ ನಾಗರಿಕರಿಗೆ ನೆಮ್ಮದಿ ನೀಡಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಮಳೆ ಬಂದಾಗ ಬೆಂಗಳೂರು ಜಲಾವೃತವಾಗುವುದಕ್ಕೆ ಹಿಂದಿನ ಕಾಂಗ್ರೆಸ್ ಸರ್ಕಾರದ ದುರಾಡಳಿತ ಕಾರಣ: ಸಿಎಂ ಬೊಮ್ಮಾಯಿ
ಸಿಲಿಕಾನ್ ಸಿಟಿ, ಉದ್ಯಾನನಗರಿ ಎಂದು ಕರೆಸಿಕೊಳ್ಳುವ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಒಂದು ದಿನ ವ್ಯಾಪಕವಾಗಿ ಮಳೆ ಬಿದ್ದಾಗ ಬಹುತೇಕ ಕಡೆಗಳಲ್ಲಿ ನೀರು ತುಂಬಿಕೊಂಡು, ತಗ್ಗು ಪ್ರದೇಶಗಳು ಜಲಾವೃತವಾಗಿ ಹಾನಿ ಉಂಟಾಗುತ್ತದೆ. ಹಲವೆಡೆ ಅನಾಹುತವಾಗುತ್ತವೆ. ಈ ಬಾರಿಯ ಮಳೆಗೆ ಬೆಂಗಳೂರಿನಲ್ಲಿ ಸಾಕಷ್ಟು ತೊಂದರೆಯಾಗಿದೆ.

ತೊರೆಕಾಡನಹಳ್ಳಿ ಪಂಪ್ ಹೌಸ್ ಸುತ್ತ ಕಾಂಕ್ರೀಟ್ ತಡೆಗೋಡೆ ನಿರ್ಮಾಣ: ಸಿಎಂ ಬೊಮ್ಮಾಯಿ
ಅತಿ ಹೆಚ್ಚು ಮಳೆಯಿಂದ ಟಿ. ಕೆ ಹಳ್ಳಿಯ ಪಂಪ್ ಹೌಸ್ ಬಳಿಯ ಭೀಮೇಶ್ವರ ನದಿ ಹಾಗೂ ಕೆರೆ ತುಂಬಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎರಡು ಪಂಪ್ ಹೌಸ್ ಗೆ ನೀರು ನುಗ್ಗಿ ಬಹಳ ಹಾನಿಯಾಗಿದೆ.

