CM Bommai

ರಾಜ್ಯದಲ್ಲಿ ಕೋಮು ಸೌಹಾರ್ದತೆ ಕಾಪಾಡಿ: ನಾಗರಿಕ ಸಮಾಜದ ಸದಸ್ಯರಿಂದ ಸಿಎಂ ಬೊಮ್ಮಾಯಿಗೆ ಮನವಿ
ಕೆಲ ಗುಂಪುಗಳು ರಾಜ್ಯದಲ್ಲಿ ಸೃಷ್ಟಿಸಿರುವ ಅಸ್ಥಿರ ಪರಿಸ್ಥಿತಿಯ ಬಗ್ಗೆ ನಾಗರಿಕ ಸಮಾಜದ ಸದಸ್ಯರು ಶುಕ್ರವಾರ ಕಳವಳ ವ್ಯಕ್ತಪಡಿಸಿದ್ದು, ಕೋಮು ಸೌಹಾರ್ದತೆ ಕಾಪಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿಪತ್ರ ಸಲ್ಲಿಸಿದರು.

ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿ ಹೊಗಳಿದ್ದಾರೆ: ಸಿಎಂ ಬೊಮ್ಮಾಯಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಮ್ಮ ಸರ್ಕಾರ ಜಾರಿಗೆ ತಂದಿರುವ ಕಲ್ಯಾಣ ಕಾರ್ಯಕ್ರಮಗಳು ಮತ್ತು ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇದು ನಮ್ಮಲ್ಲಿ ಚೈತನ್ಯ ಮತ್ತು ದಕ್ಷತೆಯಿಂದ ಕೆಲಸ ಮಾಡುವ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆ: ದೇವೇಗೌಡರ ಸಲಹೆ ಗಂಭೀರವಾಗಿ ಪರಿಗಣನೆ – ಸಿಎಂ ಬೊಮ್ಮಾಯಿ
ಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಮಾಜಿ ಪ್ರಧಾನಿ ದೇವೇಗೌಡರು ನೀಡಿರುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.

ಪ್ರಧಾನಿ ಭೇಟಿ: ಕೋವಿಡ್ ಪರೀಕ್ಷೆ ಮಾಡಿಸಿಕೊಂಡ ಸಿಎಂ ಬೊಮ್ಮಾಯಿ
ನಾಳೆ ಪ್ರಧಾನಿ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಮೋದಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮಗಳು ಹಾಗೂ ಭದ್ರತೆ ಬಗ್ಗೆ ತೀವ್ರ ಗಮನ ಹರಿಸಲಾಗುತ್ತಿದೆ. ಅದರಲ್ಲೂ ಪಿಎಂ ಕಾರ್ಯಕ್ರಮದಲ್ಲಿ ಭಾಗಿಯಾಗುವವರು ಕಡ್ಡಾಯ ಕೋವಿಡ್ ಟೆಸ್ಟ್ ಗೆ ಒಳಗಾಗಿರಬೇಕೆಂದು ಸೂಚಿಸಲಾಗಿದೆ.

ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆಗೆ ಒತ್ತಾಯ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ರಾಷ್ಟ್ರೀಯ ಯೋಜನೆಯಾಗಿ ದೊರಕುವ ಅನುದಾನವನ್ನು ಬಿಡುಗಡೆ ಮಾಡಲು ಜಲಶಕ್ತಿ ಮಂತ್ರಾಲಯ ನೇತೃತ್ವ ವಹಿಸಬೇಕು

ಮೇಕೆದಾಟು ಯೋಜನೆಗೆ ಡಿಪಿಆರ್ ಅನುಮೋದನೆ ಪಡೆಯುವ ವಿಶ್ವಾಸ ಇದೆ: ಸಿಎಂ ಬೊಮ್ಮಾಯಿ
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ತನ್ನ ವಾದವನ್ನು ಮಂಡಿಸಿದ್ದು, ಡಿಪಿಆರ್ ಅನುಮೋದನೆಯಾಗುತ್ತದೆ ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ: ಸಿಎಂ ಬೊಮ್ಮಾಯಿ ಸಭೆ, ಅದ್ಧೂರಿ ಸ್ವಾಗತ ಜೊತೆಗೆ ರೋಡ್ ಶೋಗೆ ಸಿದ್ಧತೆ
ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20 ರಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಕರೆಯಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ...

ಒಂಟಿ ಮನೆ ಯೋಜನೆ ಪುನರ್ ಪ್ರಾರಂಭಕ್ಕೆ ನಿರ್ಧಾರ, ಶೀಘ್ರದಲ್ಲಿಯೇ ಆದೇಶ: ಸಿಎಂ ಬಸವರಾಜ ಬೊಮ್ಮಾಯಿ
ಬಡವರಿಗೆ ಹಾಗೂ ಹಿಂದುಳಿದವರಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ ಒದಗಿಸುವ ಉದ್ದೇಶದಿಂದ ಬಿಬಿಎಂಪಿ ವತಿಯಿಂದ ಹಿಂದೆ ಅನುಷ್ಠಾನ ಮಾಡಿದ್ದ ಒಂಟಿ ಮನೆ ಯೋಜನೆಯನ್ನು ಪುನರ್ ಪ್ರಾರಂಭಿಸಲು ನಿರ್ಧರಿಸಲಾಗಿದೆ.

ನಗರದ ವಿವಿಧ ಕಾಮಗಾರಿಗಳ ದಿಢೀರ್ ಪರಿಶೀಲನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಹೆಚ್.ಎ.ಎಲ್. ವಿಮಾನ ನಿಲ್ದಾಣದಲ್ಲಿ ಬೀಳ್ಕೊಟ್ಟ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆ ಭಾಗದ ವಿವಿಧ ಕಾಮಗಾರಿಗಳ ಅನಿರೀಕ್ಷಿತ ತಪಾಸಣೆ ನಡೆಸಿದರು.

