CM BSYediyurappa

ಉಪ ಚುನಾವಣೆಯಲ್ಲಿ ಸೋಲಾದರೆ ಮಂತ್ರಿಯಾಗಿ ಮುಂದುವರೆಯುವುದು ಕಷ್ಟವಾದೀತು- ಯಡಿಯೂರಪ್ಪ
ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಬಿಜೆಪಿ ಸರ್ಕಾರದ ಅಳಿವು - ಉಳಿವು ನಿರ್ಧರಿಸಲಿದ್ದು, ನಿಮ್ಮ ನಿಮ್ಮ ಜಿಲ್ಲೆಗಳಲ್ಲಿ ನಡೆಯುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟ ಸಹೋದ್ಯೋಗಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ಸಿದ್ದು ನಿವಾಸದ ನಾಮಫಲಕ ತೆಗೆದ ಅಧಿಕಾರಿಗಳು: ಕಾವೇರಿಗಾಗಿ ಹಾಲಿ - ಮಾಜಿ ಸಿಎಂಗಳ ಪೈಪೋಟಿ
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಇನ್ನೂ ತೆರವುಗೊಳಿಸಿಲ್ಲ. ಹೀಗಾಗಿ ಸರ್ಕಾರದ ಸೂಚನೆ ಮೇರೆಗೆ ಡಿಪಿಎಆರ್ ಅಧಿಕಾರಿಗಳು ಕಾವೇರಿ ನಿವಾಸದ ಮುಂದೆ ತೂಗುಹಾಕಿದ್ದ ಸಿದ್ದರಾಮಯ್ಯ ಹೆಸರಿನ ನಾಮಫಲಕವನ್ನು ಕಿತ್ತುಹಾಕಿದ್ದು, ಆ ಮೂಲಕ ಆದಷ್ಟುಬೇಗ ನಿವಾಸ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ.

ಸರ್ಕಾರ ನಿಭಾಯಿಸಲಾಗದ ಯಡಿಯೂರಪ್ಪ ದಿಕ್ಕು ತಪ್ಪಿದ ಮಗನಂತಾಗಿದ್ದಾರೆ: ನಾಡಗೌಡ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರವನ್ನು ನಿಭಾಯಿಸಲಾಗದೆ ದಿಕ್ಕು ತಪ್ಪಿದ ಮಗನಂತಾಗಿದ್ದಾರೆ ಎಂದು ಮಾಜಿ ಸಚಿವ ವೆಂಕಟರಾವ್ ನಾಡಗೌಡ ವಾಗ್ದಾಳಿ ನಡೆಸಿದ್ದಾರೆ.

ಮೈಸೂರು ದಸರಾ: ಅಂಬಾರಿಗೆ ಪುಷ್ಪಾರ್ಚನೆ ಮೂಲಕ ಜಂಬೂ ಸವಾರಿಗೆ ಮುಖ್ಯಮಂತ್ರಿ ಚಾಲನೆ
ಐತಿಹಾಸಿಕ ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಯ ಕೇಂದ್ರ ಬಿಂದುವಾಗಿರುವ ಜಂಬೂ ಸವಾರಿ ಮೆರವಣಿಗೆ ಆರಂಭವಾಗಿದೆ.

ನೆರೆ ಪರಿಹಾರ ಬಿಎಸ್ ವೈಗೆ ದೊಡ್ಡ ರಿಲೀಫ್; ತುಂಬಾ ಕಡಿಮೆಯಾಯಿತು ಎಂದ ಪ್ರತಿಪಕ್ಷಗಳು
ನೆರೆ ಪರಿಹಾರ ಸಂಬಂಧ ರಾಜ್ಯದ ಜನರ ಆಕ್ರೋಶಕ್ಕೆ ಮಣಿದ ಕೇಂದ್ರ ಸರ್ಕಾರ 1, 200 ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದು ಬಿಜೆಪಿ ಸರ್ಕಾರ ಹಾಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ

ಯುವ ದಸರಾ,ದಸರಾ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಪಿ.ವಿ.ಸಿಂಧು ಚಾಲನೆ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಆಯೋಜಿಸಲಾಗಿರುವ ಯುವ ದಸರಾ ಹಾಗೂ ದಸರಾ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಪಿ. ವಿ. ಸಿಂಧು ಇಂದು ಚಾಲನೆ ನೀಡಿದರು.

ನಮ್ಮಂತವರು ಮುಖ್ಯಮಂತ್ರಿಯಾಗಿದ್ದರೆ ರಾಜೀನಾಮೆ:ಎಚ್.ಡಿ.ರೇವಣ್ಣ ವ್ಯಂಗ್ಯ
ಜಂಬೋ ಸರ್ಕಸ್ನಲ್ಲಿ ತಂತಿ ಮೇಲೆ ನಡೆಯುತ್ತಾರೆ. ಅದೇ ರೀತಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ತಂತಿ ಮೇಲೆ ನಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವ್ಯಂಗ್ಯವಾಡಿದ್ದಾರೆ.

ಡಿಕೆಶಿ ಬಂಧನದಿಂದ ಸಂತೋಷವಾಗಿಲ್ಲ- ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಂಧನದಿಂದ ತಮ್ಮಗೆ ಸಂತೋಷವಾಗಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

