CM BSYediyurappa

ವಿಧಾನಸಭೆ ವಿಸರ್ಜಿಸಿ, ಚುನಾವಣೆ ಎದುರಿಸಿ: ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಸವಾಲು
ಬಿ.ಎಸ್.ಯಡಿಯೂರಪ್ಪನವರು ಮೊದಲು ವಿಧಾನಸಭೆಯನ್ನು ವಿಸರ್ಜಿಸಿ ಇದೇ ವಿಷಯವನ್ನು ರಾಜ್ಯದ ಜನತೆಯ ಮುಂದಿಟ್ಟು ಚುನಾವಣೆಯನ್ನು ಎದುರಿಸಬೇಕು ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ವಿಜಯನಗರ ಜಿಲ್ಲೆ ರಚನೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚನೆ
ವಿಜಯನಗರ ಜಿಲ್ಲೆ ರಚಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆಯ ವಿಷಯವನ್ನು ಮಂಡಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಹಲವು ತಿಂಗಳ ನಂತರ ಪ್ರಧಾನಿ ಭೇಟಿಯಾದ ಮುಖ್ಯಮಂತ್ರಿ ಬಿಎಸ್ ವೈ, ಸಂಪುಟ ವಿಸ್ತರಣೆಗೆ ಅನುಮತಿ ಕೋರಿಕೆ
ಹಲವು ತಿಂಗಳ ವಿಫಲ ಪ್ರಯತ್ನ ಮತ್ತು ಮುಂದೂಡಿಕೆಗಳ ನಂತರ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು.

ಕೃಷಿ, ಕೃಷಿಯೇತರ ಕ್ಷೇತ್ರಕ್ಕೆ 39,300 ಕೋಟಿ ರೂ. ಸಾಲ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಈ ವರ್ಷ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ ಕೃಷಿ, ಕೃಷಿಯೇತರ ಕ್ಷೇತ್ರಕ್ಕೆ 39 ಸಾವಿರದ 300 ಕೋಟಿ ಸಾಲವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಕಲಬುರಗಿಯಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದರು.

ಅತಿವೃಷ್ಠಿ: ಹೆಚ್ಚಿನ ಪರಿಹಾರ ಕೋರಲು ಮುಂದಿನ ವಾರ ದೆಹಲಿಗೆ-ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ರಾಜ್ಯದಲ್ಲಿನ ಅತಿವೃಷ್ಠಿ ಹಿನ್ನೆಲೆಯಲ್ಲಿ ಮುಂದಿನ ವಾರ ದೆಹಲಿಗೆ ಹೋಗಿ ಹೆಚ್ವಿನ ಪರಿಹಾರ ಬಿಡುಗಡೆಗೆ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಕೆಪಿಎಸ್ ಸಿ ಪರೀಕ್ಷೆ ಮುಂದೂಡುವಂತೆ ಯಡಿಯೂರಪ್ಪಗೆ ಪ್ರಿಯಾಂಕ್ ಖರ್ಗೆ ಪತ್ರ
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿ ಕೆಪಿಎಸ್‍ಸಿ 2017-18 ನೇ ಸಾಲಿನ 106 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ನಡೆಸಲು ಮುಂದಾಗಿರುವುದರಿಂದ ಅಭ್ಯರ್ಥಿಗಳು ಆತಂಕಕ್ಕೆ ಒಳಗಾಗಿದ್ದು, ಸರ್ಕಾರ ಪರೀಕ್ಷೆಯನ್ನು ಮುಂದೂಡಬೇಕೆಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.

ಮದ್ದೂರು ಕೋರ್ಟ್ ಗೆ ಜಾಗ ಕೊರತೆ; 5 ಎಕರೆ ಜಾಗ ಕೋರಿ ಸಿಎಂ ಗೆ ಪತ್ರ ಬರೆದ ಎಸ್.ಎಂ.ಕೃಷ್ಣ
ಮದ್ದೂರು ಕೋರ್ಟ್ ಗೆ ಎದುರಾಗಿರುವ ಜಾಗದ ಕೊರತೆಯನ್ನು ನೀಗಿಸಲು ತಕ್ಷಣವೇ ೫ ಎಕರೆ ಜಾಗವನ್ನು ಕೊಡಿಸಿಕೊಡುವಂತೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡರಿಗೆ ಮನವಿ ಮಾಡಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಲಾಕ್ ಡೌನ್ ವಿಸ್ತರಣೆ ಇಲ್ಲ: ಮುಖ್ಯಮಂತ್ರಿ
ಲಾಕ್ ಡೌನ್ ವಿಸ್ತರಣೆ ಬಗ್ಗೆ ಚರ್ಚೆ ಸಾಕು. ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಬೇರೆ ಮಾರ್ಗಗಳ ಬಗ್ಗೆ ಆಲೋಚಿಸಿ ಎಂದು ನಗರದ ವಲಯ ಉಸ್ತುವಾರಿಗಳಿಗೆ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲಹೆ ನೀಡಿದ್ದಾರೆ.

