ರಾಜ್ಯನಾಯಕರಿಗೆ ಸಿಎಂ ಆಗುವ ಕನಸು ಸಹಜ; ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಘೋಷಣೆ ಮಾಡುವ ಸಂಪ್ರದಾಯ ಕಾಂಗ್ರೆಸ್ ನಲ್ಲಿಲ್ಲ: ತರೂರ್
ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಘೋಷಣೆ ಮಾಡುವ ಸಂಪ್ರದಾಯವಿಲ್ಲ. ಇದು ಆರೋಗ್ಯಕರ ಪ್ರಕ್ರಿಯೆಯಾಗಿದ್ದು, ಮೊದಲು ಚುನಾವಣೆ ಗೆಲ್ಲಬೇಕು, ನಂತರ ಈ ವಿಚಾರವಾಗಿ ಚರ್ಚೆ ಮಾಡಬಹುದು ಎಂದು ಶಶಿ ತರೂರ್ ಹೇಳಿದ್ದಾರೆ.