CM Kejriwal

ಅಬಕಾರಿ ಪ್ರಕರಣದಲ್ಲಿ ಇಡಿ ಸಮನ್ಸ್: ದೆಹಲಿ ಹೈಕೋರ್ಟ್ ನಲ್ಲಿ ನಾಳೆ ಕೇಜ್ರಿವಾಲ್ ಅರ್ಜಿ ವಿಚಾರಣೆ
ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲ ನೀಡಿರುವ ಸಮನ್ಸ್‌ಗಳನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

ದೆಹಲಿ ಸಿಎಂ ಕೇಜ್ರಿವಾಲ್ ಜೈಲು ಸೇರಿದ್ದೇಕೆ? ಏನಿದು ದೆಹಲಿ ಅಬಕಾರಿ ನೀತಿ ಹಗರಣ?
ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿಯ ಮದ್ಯದಂಗಡಿ ಲೈಸನ್ಸ್ ಹಂಚಿಕೆ ಪ್ರಕರಣ ಸಂಬಂಧ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ. ಇದರೊಂದಿಗೆ ಇದೇ ಪ್ರಕರಣದಲ್ಲಿ ದೆಹಲಿ ಸರ್ಕಾರದಲ್ಲಿ ಸಚಿವರಾಗಿದ್ದ ಸತ್ಯೇಂದ್ರ ಜೈನ್...

ನವದೆಹಲಿ: ಏಳನೇ ಬಾರಿಗೆ ಕೇಜ್ರಿವಾಲ್ ಗೆ ಇಡಿ ಸಮನ್ಸ್!
ರದ್ದುಗೊಂಡಿರುವ ಮದ್ಯ ನೀತಿ ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಗುರುವಾರ ಏಳನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ.

ಇಡಿ ವಿಚಾರಣೆಗೆ ಗೈರು: ಸಿಎಂ ಕೇಜ್ರಿವಾಲ್‌ಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದ ನ್ಯಾಯಾಲಯ!
ಈಗ ರದ್ದುಗೊಂಡಿರುವ ಮದ್ಯ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಸಮನ್ಸ್‌ಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಇಡಿ ಸಲ್ಲಿಸಿದ ದೂರಿಗೆ ಸಂಬಂಧಿಸಿದಂತೆ ದಿಲ್ಲಿ ನ್ಯಾಯಾಲಯವು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಶನಿವಾರ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡಿದೆ.

ಬಿಜೆಪಿಯಿಂದ ಎಎಪಿ ಶಾಸಕರ ಖರೀದಿ ಆರೋಪ: ಸಿಎಂ ಕೇಜ್ರಿವಾಲ್ ನಿವಾಸಕ್ಕೆ ಕ್ರೈಂ ಬ್ರಾಂಚ್ ಪೊಲೀಸರ ಭೇಟಿ!
ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರನ್ನು ಖರೀದಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಯತ್ನಿಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ದೆಹಲಿ ಪೊಲೀಸ್ ಅಪರಾಧ ದಳ ಶನಿವಾರ ಭೇಟಿ ನೀಡಿದೆ ಎಂದು ತಿಳಿದುಬಂದಿದೆ.

ದೆಹಲಿ ಸರ್ಕಾರ ಉರುಳಿಸಲು ಬಿಜೆಪಿ ಯತ್ನ, 7 ಎಎಪಿ ಶಾಸಕರಿಗೆ 25 ಕೋಟಿ ರೂ. ಆಮಿಷ: ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪ
ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಯತ್ನ ನಡೆಸುತ್ತಿದ್ದು, ನಮ್ಮ ಪಕ್ಷದ 7 ಮಂದಿ ಶಾಸಕರಿಗೆ 25 ಕೋಟಿ ರೂ. ಆಮಿಷ ಒಡ್ಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಗಂಭೀರ ಆರೋಪ ಮಾಡಿದ್ದಾರೆ.

ದೆಹಲಿ ದೇಶದ ಎಲೆಕ್ಟ್ರಿಕ್ ವಾಹನಗಳ ರಾಜಧಾನಿ: ಮುಖ್ಯಮಂತ್ರಿ ಕೇಜ್ರಿವಾಲ್
ರಾಷ್ಟ್ರ ರಾಜಧಾನಿಯಲ್ಲಿ ಅತಿ ಹೆಚ್ಚು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಮೂಲಕ ದೇಶದ ವಿದ್ಯುತ್ ಚಾಲಿತ ವಾಹನಗಳ ರಾಜಧಾನಿಯಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ.

ದೆಹಲಿಯಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ಕಾರು ಅಡ್ಡಗಟ್ಟಿ ದರೋಡೆ: ಎಲ್ಜಿ ರಾಜೀನಾಮೆಗೆ ಸಿಎಂ ಕೇಜ್ರಿವಾಲ್ ಪಟ್ಟು
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿ, ಬೆದರಿಸಿ ದರೋಡೆ ಮಾಡಿರುವ ಘಟನೆ ವರದಿಯಾಗಿದೆ.

ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಮತದಾನ ಆರಂಭ, ಭ್ರಷ್ಟಾಚಾರ ಮುಕ್ತ ಸರ್ಕಾರಕ್ಕಾಗಿ ಮತ ಚಲಾಯಿಸುವಂತೆ ಜನತೆಗೆ ಸಿಎಂ ಕೇಜ್ರಿವಾಲ್ ಮನವಿ
ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್ಗಳಿಗೆ ಭಾನುವಾರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮತದಾನವು ಬೆಳಗ್ಗೆ 8ರಿಂದ ಸಂಜೆ 5.30ರವರೆಗೆ ಮತದಾನ ನಡೆಯಲಿದೆ. ಈಗಾಗಲೇ ಅನೇಕರು ಸರತಿ ಸಾಲಿನಲ್ಲಿ ನಿಂತು ತಮ್ಮ ಮತ ಹಕ್ಕು ಚಲಾಯಿಸುತ್ತಿದ್ದಾರೆ.

